ಲಂಡನ್: ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಉದ್ಯಮಿ ವಿಜಯ್ ಮಲ್ಯ ಅವರನ್ನು ಲಂಡನ್ ನಲ್ಲಿ ಬಂಧಿಸಲಾಗಿದೆ ಎಂದು ವರದಿಯಾಗಿದೆ.
ವಿಜಯ್ ಮಲ್ಯ ವಿರುದ್ಧ ಜಾರಿ ನಿರ್ದೇಶನಾಲಯ ಅಕ್ರಮ ಹಣ ವರ್ಗಾವಣೆ ಪ್ರಕರಣ ದಾಖಲಿಸಿತ್ತು. ಈ ಸಂಬಂಧ ವಿಜಯ್ ಮಲ್ಯ ಅವರನ್ನು ಬಂಧಿಸಿ ಕೋರ್ಟ್ ಮುಂದೆ ಹಾಜರು ಪಡಿಸಲಾಗಿದ್ದು ನ್ಯಾಯಾಧೀಶರು ಮಲ್ಯಗೆ ಜಾಮೀನು ನೀಡಿದ್ದಾರೆ. ಉದ್ಯಮಿ ವಿಜಯ್ ಮಲ್ಯ ಅವರನ್ನು ಬಂಧಿಸಿದ್ದಾಗಿ ಕ್ರೌನ್ ಪ್ರಾಸಿಕ್ಯೂಷನ್ ಖಚಿತಪಡಿಸಿದೆ.
2017ರ ಏಪ್ರಿಲ್ 19ರಂದು ಬಂಧನಕ್ಕೊಳಗಾಗಿದ್ದ ವಿಜಯ್ ಮಲ್ಯಗೆ ಬಂಧನವಾದ ಕೆಲ ಹೊತ್ತಿನಲ್ಲೇ ಜಾಮೀನು ನೀಡಲಾಗಿತ್ತು. ಇನ್ನು ಕಳೆದ ಬಾರಿಯಂತೆ ಈ ಬಾರಿಯೂ ವಿಜಯ್ ಮಲ್ಯ ಅವರಿಗೆ ಬಂಧನ ನಂತರ ಜಾಮೀನು ಸಿಕ್ಕಿದೆ.
ಭಾರತೀಯ ಬ್ಯಾಂಕ್ ಗಳಿಗೆ 9 ಸಾವಿರ ಕೋಟಿ ವಂಚಿಸಿದ್ದ ವಿಜಯ್ ಮಲ್ಯ 2016ರ ಮಾರ್ಚ್ ನಲ್ಲಿ ಭಾರತದಿಂದ ಇಂಗ್ಲೆಂಡ್ ಗೆ ಪಲಾಯನ ಮಾಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics