ಕಾಬುಲ್: ಅಫ್ಘಾನಿಸ್ತಾದ ಪೂರ್ವ ನಂಗರ್ಹಾರ್ ಪ್ರಾಂತ್ರಯದಲ್ಲಿ ಅಮೆರಿಕ ವಾಯುದಾಳಿ ನಡೆಸಿದ್ದು, ವಾಯುದಾಳಿಯಲ್ಲಿ ಇಸ್ಲಾಮಿಕ್ ಸ್ಟೇಟ್ ಆಫ್ ಇರಾಕ್ ಆ್ಯಂಡ್ ಇರಾನ್ (ಇಸಿಸ್) ಸಂಘಟನೆಗೆ ಸೇರಿದ 11 ಉಗ್ರರನ್ನು ಹತ್ಯೆಯಾಗಿದ್ದಾರೆಂದು ಗುರುವಾರ ತಿಳಿದುಬಂದಿದೆ.
ಆಫ್ಘಾನಿಸ್ತಾನದ ಅಚಿನ್ ಜಿಲ್ಲೆಯಲ್ಲಿ ಅಮೆರಿಕ ವಾಯುದಾಳಿ ನಡೆಸಿದೆ ಎಂದು ಅಫ್ಘಾನಿಸ್ತಾನದ ಸರ್ಕಾರಿ ಮಾಧ್ಯಮ ಕಚೇರಿ ಮಾಹಿತಿ ನೀಡಿದೆ.
ಅಚಿನ್ ಜಿಲ್ಲೆಯಲ್ಲಿರುವ ಮಮಂದ್ ದರಾ ಮತ್ತು ದಬ್ ಗ್ರಾಮಗಳನ್ನು ಉಗ್ರರು ಗುರಿಯಾಗಿರಿಸಿಕೊಂಡು ಸಂಚು ರೂಪಿಸುತ್ತಿದ್ದರು. ಈ ಬಗ್ಗೆ ಖಚಿತ ಮಾಹಿತಿ ತಿಳಿದ ಸೇನಾಪಡೆಗಳು ಸ್ಥಳದಲ್ಲಿ ವಾಯುದಾಳಿ ನಡೆಸಿದ್ದು, 11 ಉಗ್ರರನ್ನು ಹತ್ಯೆ ಮಾಡಿದೆ ಎಂದು ತಿಳಿದುಬಂದಿದೆ. ಸ್ಥಳದಲ್ಲಿ ಶಸ್ತ್ರಾಸ್ತ್ರಗಳು ಹಾಗೂ ಸ್ಫೋಟಕ ವಸ್ತುಗಳನ್ನು ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.