ಕುಲಭೂಷಣ್ ಜಾಧವ್ 
ವಿದೇಶ

ಕುಲಭೂಷಣ್ ಜಾಧವ್ ಪ್ರಕರಣ: ಐಸಿಜೆಗೆ ವಿಶೇಷ ನ್ಯಾಯಾಧೀಶರ ನೇಮಕ ಮಾಡಿದ ಪಾಕ್ ಸರ್ಕಾರ

ಪಾಕಿಸ್ತಾನದಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿರುವ ಭಾರತೀಯ ನೌಕಾಪಡೆಯ ಮಾಜಿ ಅಧಿಕಾರಿ ಕುಲಭೂಷಣ್ ಜಾಧವ್ ಪ್ರಕರಣ....

ಲಾಹೋರ್: ಪಾಕಿಸ್ತಾನದಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿರುವ ಭಾರತೀಯ ನೌಕಾಪಡೆಯ ಮಾಜಿ ಅಧಿಕಾರಿ ಕುಲಭೂಷಣ್ ಜಾಧವ್ ಪ್ರಕರಣವನ್ನು ವಿಶ್ವಸಂಸ್ಥೆಯ ಅಂತರಾಷ್ಟ್ರೀಯ ಕೋರ್ಟ್(ಐಸಿಜೆ) ನಲ್ಲಿ ಮುನ್ನಡೆಸುವುದಕ್ಕಾಗಿ ಪಾಕ್ ಸರ್ಕಾರ ಶನಿವಾರ ಪಾಕಿಸ್ತಾನ ಸುಪ್ರೀಂ ಕೋರ್ಟ್ ನಿವೃತ್ತ ಮುಖ್ಯ ನ್ಯಾಯಮೂರ್ತಿ ತಸದಖ್ ಹಸ್ಸೇನ್ ಜಿಲಾನಿ ಅವರನ್ನು ಆಡ್-ಹಾಕ್(ವಿಶೇಷ) ನ್ಯಾಯಾಧೀಶರನ್ನು ನೇಮಿಸಿದೆ.
ನ್ಯಾಯಮೂರ್ತಿ ಜಿಲಾನಿ ಅವರು ಪಾಕಿಸ್ತಾನ ಮಾಜಿ ವಿದೇಶಾಂಗ ಕಾರ್ಯದರ್ಶಿ ಜಲಿಲ್ ಅಬ್ಬಾಸ್ ಜಿಲಾನಿ ಅವರ ಸಹೋದರ.
ನಿನ್ನೆ ಅಟಾರ್ನಿ ಜನರಲ್ ಕಚೇರಿಯಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಅಂತರಾಷ್ಟ್ರೀಯ ಕೋರ್ಟ್ ನಲ್ಲಿ ಭಾರತ ಸಲ್ಲಿಸಿದ 22 ಪುಟಗಳ ವರದಿಗೆ ಪ್ರತಿಕ್ರಿಯೆ ಸಲ್ಲಿಸುವ ಕುರಿತು ಮತ್ತು ಐಸಿಜೆಯಲ್ಲಿ ಜಾಧವ್ ಪ್ರಕರಣವನ್ನು ಹೇಗೆ ನಿರ್ವಹಿಸಬೇಕು ಎಂಬುದರ ಕುರಿತು ಚರ್ಚಿಸಲಾಗಿದೆ. ಇದರ ಬೆನ್ನಲ್ಲೇ ಪಾಕ್ ಸರ್ಕಾರ ಪ್ರಕರಣ ಸಂಬಂಧ ವಿಶೇಷ ನ್ಯಾಯಾಧೀಶರನ್ನು ನೇಮಕ ಮಾಡಿದೆ.
ಕುಲಭೂಷಣ್ ಜಾಧವ್ ಅವರನ್ನು ಭಾರತದ ಬೇಹುಗಾರ ಎಂದು ಪರಿಗಣಿಸಿದ್ದ ಪಾಕಿಸ್ತಾನದ ಸೇನಾ ನ್ಯಾಯಾಲಯ ಕೆಲ ತಿಂಗಳುಗಳ ಹಿಂದೆ ಅವರಿಗೆ ಗಲ್ಲು ಶಿಕ್ಷೆ ವಿಧಿಸಿತ್ತು. ಇದರ ವಿರುದ್ಧ ಭಾರತ ಅಂತರರಾಷ್ಟ್ರೀಯ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿತ್ತು. ಭಾರತದ ಮನವಿಯ ವಿಚಾರಣೆ ನಡೆಸಿದ್ದ ಅಂತರರಾಷ್ಟ್ರೀಯ ನ್ಯಾಯಾಲಯ ಜಾಧವ್ ಶಿಕ್ಷೆಗೆ ತಡೆಯಾಜ್ಞೆ ನೀಡಿತ್ತು. ಅಲ್ಲದೆ, ವಿಚಾರಣೆ ಸಂಪೂರ್ಣವಾಗಿ ಮುಕ್ತಾಯವಾಗುವವರೆಗೂ ಶಿಕ್ಷೆ ಜಾರಿ ಮಾಡುವಂತಿಲ್ಲ ಎಂದು ಆದೇಶಿಸಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮೈಸೂರು ರಾಜಮನೆತನ ಹೊರಗಿಟ್ಟು ಕರ್ನಾಟಕ ಇತಿಹಾಸ ಊಹಿಸುವುದು ಕಷ್ಟ': ಗವಿಸಿದ್ಧೇಶ್ವರ ಶ್ರೀಗಳು; Video

'ಮೊದಲು ನಿಮ್ಮ ಅಮೆರಿಕದಲ್ಲಿ ಕೈಗೆಟುಕುವ ದರದಲ್ಲಿ ಸೇವೆ ಒದಗಿಸಿ': ಒತ್ತಡಕ್ಕೆ ಭಾರತ ಮಣಿಯಲ್ಲ; ಎಲಾನ್ ಮಸ್ಕ್ ವಿರುದ್ಧ ನಿಶಿಕಾಂತ್ ದುಬೆ

'ನನ್ನನ್ನಲ್ಲ, ನಿಮ್ ಗಂಡನ ಗುರಾಯಿಸಿ', ಜಯಾ ಬಚ್ಚನ್‌ ಖಡಕ್ ನೋಟಕ್ಕೆ ಫೋಟೋಗ್ರಾಫರ್ ತಿರುಗೇಟು! Video

ಭೀಕರ ಹಿಟ್‌ ಅಂಡ್ ರನ್‌; ಟೀ ಕುಡಿಯುತ್ತಾ ಬೈಕ್ ಮೇಲೆ ಕುಳಿತಿದ್ದವನಿಗೆ ಶಾಕ್ ಕೊಟ್ಟ ಕಾರು, ಗಾಳಿಯಲ್ಲಿ ಹಾರಿದ ವ್ಯಕ್ತಿ! Video

ಮೈಸೂರು ದಸರಾಕ್ಕೆ ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳಿಂದ ಅಧಿಕೃತ ಚಾಲನೆ