ಶ್ವೇತಭವನದಲ್ಲಿ ಬೆಳಕಿನ ಹಬ್ಬ ದೀಪಾವಳಿ ಆಚರಿಸಿದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್
ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಶ್ವೇತಭವನದಲ್ಲಿ ಬೆಳಕಿನ ಹಬ್ಬ ದೀಪಾವಳಿ ಆಚರಣೆ ಮಾಡುವ ಸಂಪ್ರದಾಯವನ್ನು ಮುಂದುವರೆಸಿದ್ದು, ಪ್ರಸಕ್ತ ವರ್ಷ ತಮ್ಮ ಕಚೇರಿಯಲ್ಲಿ ದೀಪ ಬೆಳಗುವ ಮೂಲಕ ದೀಪಾವಳಿ ಹಬ್ಬವನ್ನು ಆಚರಿಸಿದ್ದಾರೆ.
ಶ್ವೇತಭವನದಲ್ಲಿರುವ ತಮ್ಮ ಕಚೇರಿಯಲ್ಲಿ ಭಾರತೀಯ ಸಮುದಾಯದವರೊಂದಿಗೆ ಟ್ರಂಪ್ ಅವರು ದೀಪಾವಳಿ ಹಬ್ಬವನ್ನು ಆಚರಣೆ ಮಾಡಿದ್ದಾರೆ. ಇದೇ ವೇಳೆ ಅಮೆರಿಕದಲ್ಲಿರುವ ಅನಿವಾಸಿ ಭಾರತೀಯರಿಗೆ ಟ್ರಂಪ್ ಅವರು ದೀಪಾವಳಿಯ ಶುಭಾಶಯಗಳನ್ನು ಕೋರಿದ್ದಾರೆ.
ಟ್ರಂಪ್ ಹಾಗೂ ಅವರು ಪುತ್ರಿ ಇವಾಂಕಾ ಅವರು ದೀಪ ಬೆಳಗುವ ಮೂಲಕ ದೀಪಾವಳಿಯನ್ನು ಆಚರಿಸಿದ್ದಾರೆ. ಬಳಿಕ ಮಾತನಾಡಿರುವ ಅವರು ಟ್ರಂಪ್ ಅವರು ವಿಜ್ಞಾನ, ತಂತ್ರಜ್ಞಾನ, ಉದ್ಯಮ ಕ್ಷೇತ್ರ ಹಾಗೂ ವೈದ್ಯಕೀಯ ಕ್ಷೇತ್ರಗಳಲ್ಲಿ ಅಸಾಮಾನ್ಯ ಕೊಡುಗೆನೀಡುತ್ತಿರುವ ಭಾರತೀಯ ಅಮೆರಿಕನ್ನರ ಅತ್ಯಮೂಲ್ಯ ಕೊಡುಗೆಯನ್ನು ಕೊಂಡಾಡಿದ್ದಾರೆ.
ಶ್ವೇತಭವನದಲ್ಲಿ ನಡೆದ ದೀಪಾವಳಿ ಆಚರಣೆ ವೇಳೆ ಟ್ರಂಪ್ ಅವರ ಆಡಳಿತದಲ್ಲಿರುವ ಹಿರಿಯ ಭಾರತೀಯ ಅಮೆರಿಕನ್ ಸದಸ್ಯ ಹಾಗೂ ವಿಶ್ವಸಂಸ್ಥೆಯಲ್ಲಿನ ಅಮೆರಿಕದ ರಾಯಭಾರಿಯಾಗಿರುವ ನಿಕ್ಕಿ ಹ್ಯಾಲಿ, ಅಮೆರಿಕದ ಮೇಡಿಕೇರ್ಮತ್ತು ಮೆಡಿಕೇಡ್ ಸೇವಾ ಕೇಂದ್ರದ ಮುಖ್ಯಸ್ಥೆಯಾಗಿರುವ ಸೀಮಾ ವರ್ಮಾ ಸೇರಿದಂತೆ ಹಲವು ದೀಪಾವಳಿ ಸಂಭ್ರಮವನ್ನು ಹಂಚಿಕೊಂಡರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics