ವಿದೇಶ

ಪನಾಮ ಪ್ರಕರಣ: ಪಾಕ್ ಮಾಜಿ ಪ್ರಧಾನಿ ನವಾಜ್ ಷರೀಫ್, ಪುತ್ರಿ ವಿರುದ್ಧ ದೋಷಾರೋಪ

Lingaraj Badiger
ಲಾಹೋರ್: ಪನಾಮ ಪೇಪರ್ಸ್ ಲೀಕ್ ಹಗರಣಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನ ಭ್ರಷ್ಟಾಚಾರ ನಿಗ್ರಹ ಕೋರ್ಟ್ ಗುರುವಾರ ಪಾಕ್ ಪದಚ್ಯುತ ಪ್ರಧಾನಿ ನವಾಜ್ ಷರೀಫ್ ಹಾಗೂ ಅವರ ಪುತ್ರಿ ಮತ್ತು ಅಳಿಯನ ವಿರುದ್ಧ ದೋಷಾರೋಪ ಹೊರಿಸಲಾಗಿದೆ.
ಭ್ರಷ್ಟಾಚಾರ ಹಾಗೂ ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ರಾಷ್ಟ್ರೀಯ ಉತ್ತರದಾಯಿತ್ವ ಸಂಸ್ಥೆ(ಎನ್‌ಎಬಿ) 67 ವರ್ಷದ ನವಾಜ್‌ ಷರೀಫ್, ಪುತ್ರಿ ಮರಿಯಂ ಹಾಗೂ ಅಳಿಯ ಮೊಹಮ್ಮದ್‌ ಸಪ್ದರ್‌ ವಿರುದ್ಧ ದೋಷಾರೋಪಪಟ್ಟಿಯನ್ನು ಸಲ್ಲಿಸಿದ್ದು, ಈ ಮೂವರು ಆರೋಪಿಗಳು ತಪ್ಪಿತಸ್ಥರು ಎಂದು ಆರೋಪಿಸಿರುವುದಾಗಿ ಡಾನ್ ವರದಿ ಮಾಡಿದೆ.
ಈ ಮಧ್ಯೆ, ದೋಷಾರೋಪ ದಾಖಲಿಸುವ ಪ್ರಕ್ರಿಯೆಯನ್ನು ಮಂದೂಡಬೇಕು ಎಂದು ನವಾಜ್ ಷರೀಫ್ ಅವರ ಅಳಿಯ ಕ್ಯಾಪ್ಟನ್ ಸಫ್ದರ್ ಅವರ ವಕೀಲರು ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ.
ಪನಾಮಾ ಪೇಪರ್‌ ಲೀಕ್‌ ಮೂಲಕ ಪಾಕ್‌ ಮಾಜಿ ಪ್ರಧಾನಿ ನವಾಜ್‌ ಷರೀಫ್ ಮತ್ತು ಅವರ ಕುಟುಂಬ ಸದಸ್ಯರು ವಿದೇಶಗಳಲ್ಲಿ ಹಲವಾರು ಖೊಟ್ಟಿ ಕಂಪೆನಿಗಳನ್ನು ಸ್ಥಾಪಿಸಿ ಕೋಟ್ಯಂತರ ರು. ಮೌಲ್ಯದ ಆಸ್ತಿ ಮಾಡಿಟ್ಟಿರುವುದು ಬೆಳಕಿಗೆ ಬಂದಿತ್ತು. 
SCROLL FOR NEXT