ಭಾರತದಲ್ಲಿ ಎಫ್-16 ಫೈಟರ್ ವಿಮಾನ ಉತ್ಪಾದನೆಗೆ ಟ್ರಂಪ್ ಬೆಂಬಲ!
ರಕ್ಷಣಾ ಸಹಕಾರ ಭಾರತದೊಂದಿಗಿನ ದ್ವಿಪಕ್ಷೀಯ ಸಂಬಂಧದ ಪ್ರಮುಖ ಅಂಶವಾಗಿದ್ದು, ಇಂಡೋ-ಪೆಸಿಫಿಕ್ ಪ್ರದೇಶದಲ್ಲಿ ಉನ್ನತ ಭದ್ರತೆಯನ್ನು ಒದಗಿಸುವ ರಾಷ್ಟ್ರವಾಗಿರಬೇಕು ಎಂದು ಡೊನಾಲ್ಡ್ ಟ್ರಂಪ್ ಆಡಳಿತ....
ವಾಷಿಂಗ್ ಟನ್: ರಕ್ಷಣಾ ಸಹಕಾರ ಭಾರತದೊಂದಿಗಿನ ದ್ವಿಪಕ್ಷೀಯ ಸಂಬಂಧದ ಪ್ರಮುಖ ಅಂಶವಾಗಿದ್ದು, ಇಂಡೋ-ಪೆಸಿಫಿಕ್ ಪ್ರದೇಶದಲ್ಲಿ ಉನ್ನತ ಭದ್ರತೆಯನ್ನು ಒದಗಿಸುವ ರಾಷ್ಟ್ರವಾಗಿರಬೇಕು ಎಂದು ಡೊನಾಲ್ಡ್ ಟ್ರಂಪ್ ಆಡಳಿತ ಅಮೆರಿಕ ಕಾಂಗ್ರೆಸ್ ಗೆ ಹೇಳಿದೆ.
ಅತ್ಯಾಧುನಿಕ ಫೈಟರ್ ಜೆಟ್ ಗಳಾದ ಎಫ್-18, ಎಫ್-16 ವಿಮಾನಗಳನ್ನು ಭಾರತದಲ್ಲಿ ತಯಾರಿಸುವುದನ್ನು ಬಲವಾಗಿ ಬೆಂಬಲಿಸುವುದಾಗಿ ಡೊನಾಲ್ಡ್ ಟ್ರಂಪ್ ಆಡಳಿತ ಅಮೆರಿಕ ಕಾಂಗ್ರೆಸ್ ಗೆ ಹೇಳಿಕೆ ನೀಡಿದ್ದು, ಎಫ್-18, ಎಫ್-16 ವಿಮಾನಗಳನ್ನು ಭಾರತದಲ್ಲಿ ತಯಾರಿಸುವುದರಿಂದ ರಕ್ಷಣಾ ಕ್ಷೇತ್ರದಲ್ಲಿನ ಅಮೆರಿಕ-ಭಾರತದ ನಡುವಿನ ಸಂಬಂಧವೂ ವೃದ್ಧಿಸುತ್ತದೆ ಎಂದು ಅಭಿಪ್ರಾಯಪಟ್ಟಿದೆ.
ಬೋಯಿಂಗ್ ಹಾಗೂ ಲಾಕ್ಹೀಡ್ ಮಾರ್ಟಿನ್ ಸಂಸ್ಥೆಗಳು ಭಾರತದಲ್ಲಿ ಎಫ್-16 ಫೈಟರ್ ವಿಮಾನಗಳನ್ನು ಉತ್ಪಾದಿಸಲು ಪ್ರಸ್ತಾವನೆ ನೀಡಿವೆ. ಈ ಹಿನ್ನೆಲೆಯಲ್ಲಿ ಡೊನಾಲ್ಡ್ ಟ್ರಂಪ್ ಆಡಳಿತದ ಹೇಳಿಕೆ ಪ್ರಾಮುಖ್ಯತೆ ಪಡೆದಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.