ಮೆಕ್ಸಿಕೋ ನಗರದಲ್ಲಿ ಭೂಕಂಪನ 
ವಿದೇಶ

ಮೆಕ್ಸಿಕೋ ಭೂಕಂಪನ: ಕನಿಷ್ಠ ಆರು ಮಂದಿ ಸಾವು, ಹಲವರಿಗೆ ಗಾಯ

ಅಮೆರಿಕದ ಮೆಕ್ಸಿಕೋ ನಗರದಲ್ಲಿ ಸಂಭವಿಸಿದ್ದ ಭಾರಿ ಭೂಕಂಪನದಲ್ಲಿ ಕನಿಷ್ಠ 6 ಮಂದಿ ಸಾವನ್ನಪ್ಪಿ ಹಲವರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಮೆಕ್ಸಿಕೋ: ಅಮೆರಿಕದ ಮೆಕ್ಸಿಕೋ ನಗರದಲ್ಲಿ ಸಂಭವಿಸಿದ್ದ ಭಾರಿ ಭೂಕಂಪನದಲ್ಲಿ ಕನಿಷ್ಠ 6 ಮಂದಿ ಸಾವನ್ನಪ್ಪಿ ಹಲವರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ಮೆಕ್ಸಿಕೋದ ಪಿಜಿಜಪಾನ್ ಪ್ರದೇಶದ 123 ಕಿ.ಮೀ ಆಳದಲ್ಲಿ ಭೂಕಂಪನದ ಕೇಂದ್ರ ಬಿಂದು ದಾಖಲಾಗಿದ್ದು, ಭೂಕಂಪನದ ತೀವ್ರತೆಗೆ ಕೇಂದ್ರೀಯ ಮೆಕ್ಸಿಕೋ ನಗರದ ಹಲವು ಕಟ್ಟಡಗಳು ಬಿರುಕು ಬಿಟ್ಟಿವೆ ಎಂದು ಹೇಳಲಾಗಿದೆ.  ಇನ್ನು ಭೂಪಂಕನದಿಂದಾಗಿ ಕನಿಷ್ಠ 6 ಮಂದಿ ಸಾವನ್ನಪ್ಪಿ, ಹಲವರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಈ ಪೈಕಿ ಚಿಯಾಪಸ್ ನಲ್ಲಿ ನಾಲ್ಕು ಮಂದಿ, ಟಬಾಸ್ಕೋ ನಗರದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಎಂದು  ಅಧಿಕಾರಿಗಳು ತಿಳಿಸಿದ್ದಾರೆ.  ಭೂಕಂಪನದ ತೀವ್ರತೆಗೆ ಇದೇ ಜುಷಿತಾನ್ ನಲ್ಲಿ  ಹಲವು ಕಟ್ಟಡಗಳು ಬಿರುಕುಗೊಂಡಿದ್ದು, ಹೊಟೆಲ್ ಗಳು, ಬಾರ್ ಮತ್ತು ಟೌನ್ ಹಾಲ್ ಒಂದು ಹಾನಿಗೀಡಾಗಿದೆ ಎಂದು ತಿಳಿದುಬಂದಿದೆ.
ಹೀಗಾಗಿ ತೀರ ಪ್ರದೇಶದಲ್ಲಿರುವ ಜನ ಕೂಡಲೇ ಎತ್ತರದ ಪ್ರದೇಶಗಳಿಗೆ ಸ್ಥಳಾಂತರಗೊಳ್ಳುವಂತೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ಇನ್ನು ಅಮೆರಿಕದ ಭೂವೈಜ್ಞಾನಿಕ ಸಮೀಕ್ಷೆ ಕೇಂದ್ರ ಅಭಿಪ್ರಾಯಪಟ್ಟಿರುವಂತೆ 1985ರ ಬಳಿಕ  ಮೆಕ್ಸಿಕೋದಲ್ಲಿ ಸಂಭವಿಸಿದ ಪ್ರಬಲ ಭೂಕಂಪನ ಇದಾಗಿದೆ ಎಂದು ಹೇಳಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

KPSC ನೇಮಕಾತಿ ಹಗರಣ: ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್, ಸದಸ್ಯೆ ಗೀತಾ 13 ದಿನ ED ಕಸ್ಟಡಿಗೆ

ರಾಜ್ಯದಲ್ಲಿ ಶೇ. 90ರಷ್ಟು ಬೆಳೆ ಹಾನಿ: ಪರಿಸ್ಥಿತಿ ಗಂಭೀರ - DCM ಪರಮೇಶ್ವರ

'ಸತ್ತವರಿಂದಲೂ ವೋಟಿಂಗ್, SIR ಉಪಯೋಗಗಳ ಕುರಿತು ಚೆನ್ನಿತ್ತಲಾರನ್ನು ಕೇಳಿ': ರಾಹುಲ್ ಗಾಂಧಿಗೆ ಸುರೇಶ್ ಗೋಪಿ

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ