ವಿದೇಶ

ಮೆಕ್ಸಿಕೋದಲ್ಲಿ ಭಾರಿ ಭೂಕಂಪನ: ರಿಕ್ಟರ್ ಮಾಪಕದಲ್ಲಿ 8.0ರಷ್ಚು ತೀವ್ರತೆ ದಾಖಲು

Srinivasamurthy VN
ಮೆಕ್ಸಿಕೋ: ಕೇಂದ್ರೀಯ ಅಮೆರಿಕದ ಮೆಕ್ಸಿಕೋ ನಗರದಲ್ಲಿ ಭಾರಿ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 8.0ರಷ್ಟು ತೀವ್ರ ದಾಖಲಾಗಿದೆ.
ಮೆಕ್ಸಿಕೋದ ಪಿಜಿಜಪಾನ್ ಪ್ರದೇಶದ 123 ಕಿ.ಮೀ ಆಳದಲ್ಲಿ ಭೂಕಂಪನದ ಕೇಂದ್ರ ಬಿಂದು ದಾಖಲಾಗಿದ್ದು, ಭೂಕಂಪನದ ತೀವ್ರತೆಗೆ ಕೇಂದ್ರೀಯ ಮೆಕ್ಸಿಕೋ ನಗರದ ಹಲವು ಕಟ್ಟಡಗಳು ಬಿರುಕು ಬಿಟ್ಟಿವೆ ಎಂದು ಹೇಳಲಾಗಿದೆ.  ಅಂತೆಯೇ ಭೂಕಂಪನದಿಂದಾಗಿ ಸಮುದ್ರದಲ್ಲಿ ಸುನಾಮಿ ಅಲೆಗಳು ಏಳುವ ಸಾಧ್ಯತೆ ಇದೆ ಎಂದು ಅಮೆರಿಕ ಹವಾಮಾನ ಇಲಾಖೆ ತಜ್ಞರು ಎಚ್ಚರಿಕೆ ನೀಡಿದ್ದಾರೆ.
ಹೀಗಾಗಿ ತೀರ ಪ್ರದೇಶದಲ್ಲಿರುವ ಜನ ಕೂಡಲೇ ಎತ್ತರದ ಪ್ರದೇಶಗಳಿಗೆ ಸ್ಥಳಾಂತರಗೊಳ್ಳುವಂತೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ಇನ್ನು ಅಮೆರಿಕದ ಭೂವೈಜ್ಞಾನಿಕ ಸಮೀಕ್ಷೆ ಕೇಂದ್ರ ಅಭಿಪ್ರಾಯಪಟ್ಟಿರುವಂತೆ 1985ರ ಬಳಿಕ  ಮೆಕ್ಸಿಕೋದಲ್ಲಿ ಸಂಭವಿಸಿದ ಪ್ರಬಲ ಭೂಕಂಪನ ಇದಾಗಿದೆ ಎಂದು ಹೇಳಿದೆ.

ಭೂಕಂಪನದ ಅನುಭವವಾಗುತ್ತಿದ್ದಂತೆಯೇ ಮೆಕ್ಸಿಕೋ ನಗರದ ವಾಸಿಗಳು ಭಯಭೀತರಾಗಿ ಹೊರಗೆ ಓಡಿ ಬರುತ್ತಿದ್ದ ದೃಶ್ಯಗಳು ಸಾಮಾನ್ಯವಾಗಿತ್ತು. ಪ್ರಸ್ತುತ ಭೂಕಂಪನದಿಂದಾಗಿ ಸಾವುನೋವು ಸಂಭವಿಸಿದ ಕುರಿತು  ವರದಿಯಾಗಿಲ್ಲ.
SCROLL FOR NEXT