ಭಯೋತ್ಪಾದಕರಿಗೆ ಆರ್ಥಿಕ ನೆರವು: ಹಬೀಬ್ ಬ್ಯಾಂಕ್ ಗೆ ಬೀಗ ಜಡಿದ ಅಮೆರಿಕ
ಭಯೋತ್ಪಾದಕರಿಗೆ ಆರ್ಥಿಕ ನೆರವು ಹೋಗದಂತೆ ಎಚ್ಚರ ವಹಿಸಲು ಸೂಚನೆ ನೀಡಿದ್ದರೂ, ಪರಿಣಾಮಕಾರಿಯಾಗಿ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಅಮೆರಿಕ ಬ್ಯಾಂಕಿಂಗ್ ನಿಯಂತ್ರಣ ಸಂಸ್ಥೆ ಪಾಕಿಸ್ತಾನ...
ನ್ಯೂಯಾರ್ಕ್: ಭಯೋತ್ಪಾದಕರಿಗೆ ಆರ್ಥಿಕ ನೆರವು ಹೋಗದಂತೆ ಎಚ್ಚರ ವಹಿಸಲು ಸೂಚನೆ ನೀಡಿದ್ದರೂ, ಪರಿಣಾಮಕಾರಿಯಾಗಿ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಅಮೆರಿಕ ಬ್ಯಾಂಕಿಂಗ್ ನಿಯಂತ್ರಣ ಸಂಸ್ಥೆ ಪಾಕಿಸ್ತಾನ ಮೂಲದ ಹಬೀಬ್ ಬ್ಯಾಂಕ್ ಗೆ ಬೀಗ ಜಡಿದಿದೆ.
ಹಬೀಬ್ ಬ್ಯಾಂಕ್ ಪಾಕಿಸ್ತಾನದ ಅತಿ ದೊಡ್ಡ ಖಾಸಗಿ ಬ್ಯಾಂಕ್ ಆಗಿದ್ದು, ಭಯೋತ್ಪಾದಕರಿಗೆ ಆರ್ಥಿಕ ನೆರವು ದೊರೆಯದಂತೆ ಎಚ್ಚರಿಕೆ ವಹಿಸಲು ಸೂಚಿಸಲಾಗಿತ್ತು, ಆದರೆ ಈ ಆತಂಕದ ಬಗ್ಗೆ ಗಂಭೀರವಾಗಿ ಗಮನ ಹರಿಸದ ಹಿನ್ನೆಲೆಯಲ್ಲಿ ಅಮೆರಿಕದ ಬ್ಯಾಂಕಿಂಗ್ ನಿಯಂತ್ರಣ ಸಂಸ್ಥೆ ಬ್ಯಾಂಕ್ ಗೆ ಬೀಗ ಜಡಿದಿದ್ದು, 225 ಮಿಲಿಯನ್ ಡಾಲರ್ ದಂಡ ವಿಧಿಸಿದೆ.
ಹಬೀಬ್ ಬ್ಯಾಂಕ್ ಅಮೆರಿಕಾದಲ್ಲಿ 1978 ರಿಂದ ಕಾರ್ಯನಿರ್ವಹಿಸುತ್ತಿದ್ದು, ಉಗ್ರರಿಗೆ ಹಣಕಾಸಿನ ಸಹಾಯ ದೊರೆಯದಂತೆ ಮಾಡಲು 2006 ರಲ್ಲಿ ಸೂಚನೆ ನೀಡಲಾಗಿತ್ತು. ಆದರೆ ಇದನ್ನು ಗಂಭೀರವಾಗಿ ಪರಿಗಣಿಸಿಲ್ಲ ಎಂಬ ಆರೋಪದ ಹಿನ್ನೆಲೆಯಲ್ಲಿ ಬ್ಯಾಂಕ್ ನ್ನು ಮುಚ್ಚಲು ಆದೇಶ ನೀಡಲಾಗಿದ್ದು, ದಂಡ ವಿಧಿಸಲಾಗಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.