ಸಂಗ್ರಹ ಚಿತ್ರ 
ವಿದೇಶ

ಜಮ್ಮು-ಕಾಶ್ಮೀರ ಭಾರತದ ಅವಿಭಾಜ್ಯ ಅಂಗ: ವಿಶ್ವಸಂಸ್ಥೆಯಲ್ಲಿ ಪಾಕ್ ಹೇಳಿಕೆ ತಿರಸ್ಕರಿಸಿದ ಭಾರತ

ವಿಶ್ವಸಂಸ್ಥೆಯಲ್ಲಿ ಕಾಶ್ಮೀರ ವಿವಾದವನ್ನು ಪದೇಪದೇ ಪ್ರಸ್ತಾಪ ಮಾಡುತ್ತಿರುವ ಇಸ್ಲಾಮಿಕ್ ಸಹಕಾರ ಸಂಘಟನೆ (ಒಐಸಿ) ವಿರುದ್ಧ...

ನ್ಯೂಯಾರ್ಕ್: ಕಾಶ್ಮೀರ ವಿವಾದವನ್ನು ಪದೇ ಪದೇ ವಿಶ್ವಸಂಸ್ಥೆಯಲ್ಲಿ ಪ್ರಸ್ತಾಪ ಮಾಡುತ್ತಿರುವ ಇಸ್ಲಾಮಿಕ್ ಸಹಕಾರ ಸಂಘಟನೆ (ಒಐಸಿ) ವಿರುದ್ಧ ಭಾರತ ತೀವ್ರವಾಗಿ ಕಿಡಿಕಾರಿದ್ದು, ಕಾಶ್ಮೀರ ವಿವಾದ ಭಾರತ ಆಂತರಿಕ ವಿಚಾರವಾಗಿದ್ದು, ನಮ್ಮ ಆಂತರಿಕ ವಿಚಾರದಲ್ಲಿ ಮೂಗು ತೂರಿಸುವ ಹಕ್ಕು ಒಐಸಿಗೆ ಇಲ್ಲ ಎಂದು ಶುಕ್ರವಾರ ಗುಡುಗಿದೆ.

 
ನಿನ್ನೆಯಷ್ಟೇ ವಿಶ್ವಸಂಸ್ಥೆಯಲ್ಲಿ ಕಾಶ್ಮೀರ ವಿವಾದವನ್ನು ಪ್ರಸ್ತಾಪ ಮಾಡಿದ್ದ ಒಐಸಿ, ಭಾರತದ ವಿರುದ್ಧ ಆರೋಪ ಮಾಡಿತ್ತು. ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತ ಮಾನವ ಹಕ್ಕುಗಳನ್ನು ಉಲ್ಲಂಘನೆ ಮಾಡುತ್ತಿದ್ದು, ಕಾಶ್ಮೀರಿಗರ ಸ್ವಯಂ ನಿರ್ಣಯದ ಹಕ್ಕುಗಳನ್ನು ಕಿತ್ತುಕೊಳ್ಳುತ್ತಿದೆ ಎಂದು ಆರೋಪಿಸಿತ್ತು. 

ಈ ಆರೋಪವನ್ನು ಭಾರತ ತಳ್ಳಿಹಾಕಿದ್ದು, ಒಐಸಿ ವಿರುದ್ಧ ತೀವ್ರವಾಗಿ ಕಿಡಿಕಾರಿದೆ. ಒಐಸಿ ಆರೋಪ ಕುರಿತಂತೆ ವಿಶ್ವಸಂಸ್ಥೆಯ ಕಚೇರಿಯಲ್ಲಿ ಭಾರತದ ರಾಯಭಾರಿಯಾಗಿರುವ ಸುಮಿತ್ ಸೇಠ್ ಅವರು ಮಾತನಾಡಿ, ಇಸ್ಲಾಮಿಕ್ ಸಹಕಾರ ಸಂಘಟನೆ ಪರವಾಗಿ ಪಾಕಿಸ್ತಾನ ಮಾಡುತ್ತಿರುವ ಆರೋಪಕ್ಕೆ ಉತ್ತರ ನೀಡುವ ಹಕ್ಕು ಭಾರತಕ್ಕಿದೆ. ಜಮ್ಮು ಮತ್ತು ಕಾಶ್ಮೀರ ಭಾರತದ ಅವಿಭಾಜ್ಯ ಅಂಗ ಹಾಗೂ ಬೇರ್ಪಡಿಸಲಾಗದ ಭಾಗವಾಗಿದೆ. ಕಾಶ್ಮೀರ ವಿವಾದ ಭಾರತದ ಆಂತರಿಕ ವಿಚಾರವಾಗಿದ್ದು, ಈ ವಿಚಾರದಲ್ಲಿ ಒಐಸಿ ಮೂಗು ತೂರಿಸಬಾರದು. ಭವಿಷ್ಯದಲ್ಲಿ ಈ ರೀತಿಯ ಪ್ರಸ್ತಾಪವನ್ನು ಒಐಸಿ ಮಾಡಬಾರದೆಂದು ಸಲಹೆ ನೀಡುತ್ತೇವೆಂದು ಹೇಳಿದ್ದಾರೆ. 

ಕಾಶ್ಮೀರ ವಿವಾದ ಕುರಿತು ಒಐಸಿ ಮಾಡುತ್ತಿರುವ ಆರೋಪಕ್ಕೆ ಭಾರತ ವಿಷಾದ ವ್ಯಕ್ತಪಡಿಸುತ್ತದೆ. ಒಐಸಿ ಆರೋಪ ವಾಸ್ತವತೆಗೆ ತದ್ವಿರುದ್ಧವಾಗಿದೆ. ಭಾರತದ ಅವಿಭಾಜ್ಯ ಅಂಗವಾಗಿರುವ ಜಮ್ಮು ಮತ್ತು ಕಾಶ್ಮೀರ ಕುರಿತಂತೆ ಒಐಸಿ ತಪ್ಪು ಮಾಹಿತಿಗಳನ್ನು ನೀಡುತ್ತಿದೆ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT