ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ವಿದೇಶ

ಈಶಾನ್ಯದಲ್ಲಿ ಮೂರನೆಯವರ ಮಧ್ಯಪ್ರವೇಶ ಬೇಕಿಲ್ಲ: ಜಪಾನ್ ಎಫ್ ಡಿಐ ಬಗ್ಗೆ ಚೀನಾ ಪ್ರತಿಕ್ರಿಯೆ

ಭಾರತದ ಈಶಾನ್ಯ ರಾಜ್ಯಗಳಲ್ಲಿ ಜಪಾನ್ ಹೂಡಿಕೆ ಪ್ರಸ್ತಾವನೆಯ ಬಗ್ಗೆ ಚೀನಾ ಅಸಮಾಧಾನ ವ್ಯಕ್ತಪಡಿಸಿದ್ದು, ಭಾರತ-ಚೀನಾ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಮೂರನೆಯವರ ಮಧ್ಯಪ್ರವೇಶ ಅಗತ್ಯವಿಲ್ಲ...

ಶಿಂಜೋ ಅಬೆ-ಪ್ರಧಾನಿ ನರೇಂದ್ರ ಮೋದಿ
Srinivas Rao BV
Updated On : 16 Sept 2017, 12:16 pm
ಬೀಜಿಂಗ್: ಭಾರತದ ಈಶಾನ್ಯ ರಾಜ್ಯಗಳಲ್ಲಿ ಜಪಾನ್ ಹೂಡಿಕೆ ಪ್ರಸ್ತಾವನೆಯ ಬಗ್ಗೆ ಚೀನಾ ಅಸಮಾಧಾನ ವ್ಯಕ್ತಪಡಿಸಿದ್ದು, ಭಾರತ-ಚೀನಾ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಮೂರನೆಯವರ ಮಧ್ಯಪ್ರವೇಶ ಅಗತ್ಯವಿಲ್ಲ ಎಂದು ಚೀನಾ ವಿದೇಶಾಂಗ ಇಲಾಖೆ ಹೇಳಿದೆ. 
ಜಪಾನ್ ಪ್ರಧಾನಿ ಶಿಂಜೋ ಅಬೆ ಅವರ ಭಾರತ ಪ್ರವಾಸದ ವೇಳೆಯಲ್ಲಿ ಜಪಾನ್ ಈಶಾನ್ಯ ರಾಜ್ಯಗಳಲ್ಲಿ ಹೂಡಿಕೆ ಮಾಡುವ ಬಗ್ಗೆ ಭಾರತ-ಜಪಾನ್ ಜಂಟಿ ಹೇಳಿಕೆ ಬಿಡುಗಡೆ ಮಾಡಿತ್ತು. ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಚೀನಾದ ವಿದೇಶಾಂಗ ಇಲಾಖೆ ಭಾರತ-ಚೀನಾ ಗಡಿ ವಿವಾದದಲ್ಲಿ ಮೂರನೇಯವರು ಮಧ್ಯಸ್ಥಿಕೆ ವಹಿಸುವಂತಿಲ್ಲ ಎಂದು ಹೇಳಿದೆ. 
ಅರುಣಾಚಲ ಪ್ರದೇಶದ ಹೆಸರನ್ನು ಪ್ರಸ್ತಾಪಿಸದೇ ಚೀನಾ ವಿದೇಶಾಂಗ ಇಲಾಖೆ ಈ ಹೇಳಿಕೆ ನೀಡಿದ್ದು, ಭಾರತ-ಚೀನಾ ಗಡಿ ವಿವಾದಗಳನ್ನು ಮಾತುಕತೆ ಮೂಲಕ ಬಗೆಹರಿಸಿಕೊಳ್ಳುವುದಕ್ಕೆ ಯತ್ನಿಸುತ್ತಿವೆ. ಈ ಹಂತದಲ್ಲಿ ಮೂರನೆಯವರು ಮಧ್ಯಸ್ಥಿಕೆ ವಹಿಸುವುದು ಸರಿಯಲ್ಲ ಎಂದು ವಕ್ತಾರರು ಹೇಳಿದ್ದಾರೆ. 

Advertisement

Advertisement

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement