ವಿಶ್ವಸಂಸ್ಥೆಯಲ್ಲಿ ಪಾಕ್ ಪ್ರಧಾನಿ ಶಾಹೀದ್ ಖಾನ್ ಅಬ್ಬಾಸಿ 
ವಿದೇಶ

ಕಾಶ್ಮೀರ ವಿಚಾರದಲ್ಲಿ ವಿಶ್ವಸಂಸ್ಥೆ ಮಧ್ಯ ಪ್ರವೇಶಿಸಬೇಕು: ಪಾಕ್ ಪ್ರಧಾನಿ ಆಗ್ರಹ

ಕಾಶ್ಮೀರ ವಿವಾದದಲ್ಲಿ ವಿಶ್ವಸಂಸ್ಥೆ ಮಧ್ಯ ಪ್ರವೇಶಿಸಬೇಕು ಎಂದು ಪಾಕಿಸ್ತಾನ ಪ್ರಧಾನಿ ಶಾಹೀದ್ ಖಾನ್ ಅಬ್ಬಾಸಿ ಆಗ್ರಹಿಸಿದ್ದಾರೆ.

ವಿಶ್ವಸಂಸ್ಥೆ: ಕಾಶ್ಮೀರ ವಿವಾದದಲ್ಲಿ ವಿಶ್ವಸಂಸ್ಥೆ ಮಧ್ಯ ಪ್ರವೇಶಿಸಬೇಕು ಎಂದು ಪಾಕಿಸ್ತಾನ ಪ್ರಧಾನಿ ಶಾಹೀದ್ ಖಾನ್ ಅಬ್ಬಾಸಿ ಆಗ್ರಹಿಸಿದ್ದಾರೆ.
ಅಮೆರಿಕದ ನ್ಯೂಯಾರ್ಕ್ ನಲ್ಲಿ ನಡೆಯುತ್ತಿರುವ ವಿಶ್ವಸಂಸ್ಥೆ ಸಾಮಾನ್ಯಸಭೆಯಲ್ಲಿ ಇದೇ ಮೊದಲ ಬಾರಿಗೆ ಪಾಲ್ಗೊಂಡಿರುವ ಪಾಕಿಸ್ತಾನದ ನೂತನ ಪ್ರಧಾನಿ ಶಾಹೀದ್ ಖಾನ್ ಅಬ್ಬಾಸಿ ಅವರು ಕಾರ್ಯಕ್ರಮವೊಂದರಲ್ಲಿ, "ಕಾಶ್ಮೀರ ಕುರಿತ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ನಿರ್ಣಯವನ್ನು ಕೂಡಲೇ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ.

"ಪ್ರಮುಖ ವಿಷಯ ಕಾಶ್ಮೀರ ಎಂದು ನನಗನಿಸುತ್ತದೆ. ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ತೀರ್ಮಾನವನ್ನು ಅನುಷ್ಠಾನಗೊಳಿಸುವುದು ವಿವಾದ ಪರಿಹಾರಕ್ಕೆ ದೊಡ್ಡ ಮಟ್ಟದಲ್ಲಿ ಚಾಲನೆ ನೀಡಿದಂತೆ. ಪರಸ್ಪರರ ಆತಂಕಗಳನ್ನು ಅರ್ಥಮಾಡಿಕೊಳ್ಳಲು ಅದು ನೆರವಾಗುತ್ತದೆ. ಭಾರತ ಮತ್ತು ಪಾಕಿಸ್ತಾನಗಳ ನಡುವೆ ಶಾಂತಿ ನೆಲೆಸುವಂತೆಯೂ ಅದು ಮಾಡುತ್ತದೆ. ಕಾಶ್ಮೀರಿ ಜನತೆಯ ಸ್ವನಿರ್ಣಯದ ಹಕ್ಕಿಗೆ ಬೆಂಬಲ ನೀಡುವುದನ್ನು ತನ್ನ ದೇಶ ಮುಂದುವರಿಸುವುದು" ಎಂದು ನ್ಯೂಯಾರ್ಕ್‌ನಲ್ಲಿ ಕೌನ್ಸಿಲ್ ಆನ್ ಫಾರೀನ್ ರಿಲೇಶನ್ಸ್ ಏರ್ಪಡಿಸಿದ ಕಾರ್ಯಕ್ರಮವೊಂದರಲ್ಲಿ ಅವರು ಹೇಳಿದರು.

ಇದೇ ವೇಳೆ ಭಾರತದ ವಿರುದ್ಧ ಪರೋಕ್ಷ ವಾಗ್ದಾಳಿ ಮಾಡಿದ ಅಬ್ಬಾಸಿ "ಅಫ್ಘಾನಿಸ್ತಾನದಲ್ಲಿ ಪಾಕಿಸ್ತಾನಕ್ಕೆ ‘ಶೂನ್ಯ’ ರಾಜಕೀಯ ಅಥವಾ ಸೇನಾ ಪಾತ್ರವಿರಬೇಕು ಎಂದು ಅವರು ಹೇಳಿದ್ದಾರೆ. ಅಂತೆಯೇ ತನ್ನ ನೆಲದಿಂದ ಕಾರ್ಯಾಚರಿಸುತ್ತಿರುವ ಭಯೋತ್ಪಾದಕ ಗುಂಪುಗಳನ್ನು ನಿಗ್ರಹಿಸುವಲ್ಲಿ ಪಾಕಿಸ್ತಾನ ವಿಫಲವಾಗಿದೆ ಎಂಬ ಆರೋಪಗಳನ್ನು ಪಾಕ್ ಪ್ರಧಾನಿ ಶಾಹಿದ್ ಖಾಕನ್ ಅಬ್ಬಾಸಿ ನಿರಾಕರಿಸಿದ್ದು, ಪಾಕಿಸ್ತಾನದಲ್ಲಿ ಉಗ್ರ ಆಶ್ರಯ ತಾಣಗಳಿವೆ ಎಂಬ ಭಾವನೆ ಸರಿಯಲ್ಲ. ಗಡಿಯಲ್ಲಿನ ಅಶಾಂತಿಗೆ ನಾವು ಕಾರಣರಲ್ಲ. ಕಳೆದ ಜನವರಿಯಿಂದ ಇಲ್ಲಿಯವರೆಗೂ ಸುಮಾರು 600ಕ್ಕೂ ಹೆಚ್ಚು ಬಾರಿ ಕದನ ವಿರಾಮ ಉಲ್ಲಂಘನೆಯಾಗಿದೆ. ಹೀಗಿದ್ದೂ ನಾವು ಸಮ್ಯಮ ಕಾಪಾಡಿಕೊಂಡಿದ್ದೇವೆ. ಭಾರತದ ಯಾವುದೇ ಪ್ರಚೋದನೆಗಳಿಗೆ ಪಾಕಿಸ್ತಾನ ಸೇನೆ ಸೂಕ್ತ ರೀತಿಯಲ್ಲಿ ಉತ್ತರ ನೀಡಲು ಸಿದ್ಧವಿದೆ ಎಂದು ಹೇಳಿದ್ದಾರೆ.

2008ರ ಮುಂಬೈ ದಾಳಿಯ ಸೂತ್ರಧಾರಿ ಹಾಗೂ ಲಷ್ಕರ್ ಎ ತೊಯ್ಬಾ ಭಯೋತ್ಪಾದಕ ಗುಂಪಿನ ಸಹ ಸ್ಥಾಪಕ ಹಫೀಝ್ ಸಯೀದ್ ವಿರುದ್ಧ ‘ಅಗತ್ಯ ಬಿದ್ದಾಗ’ ಪಾಕಿಸ್ತಾನ ಕ್ರಮ ತೆಗೆದುಕೊಳ್ಳುವುದು ಎಂದೂ ಅವರು ಈ ಸಂದರ್ಭದಲ್ಲಿ ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯ ಸರ್ಕಾರಕ್ಕೆ 'ಸ್ಟಿಂಗ್ ಆಪರೇಷನ್' ಆತಂಕ: ಟ್ರ್ಯಾಪ್‌ಗೆ ಯತ್ನ ನಡೆಯುತ್ತಿದೆ, ಹುಷಾರಾಗಿರಿ ; 5 ಸಚಿವರಿಗೆ ಡಿಕೆಶಿ ಎಚ್ಚರಿಕೆ ಸಂದೇಶ

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

Bigg Boss Kannada: ಟಾಸ್ಕ್ ವೇಳೆ ಕುಸಿದು ಬಿದ್ದ ನಟಿ ಸಂಗೀತಾ ಭಟ್; ಆರೋಗ್ಯದಲ್ಲಿ ಏರುಪೇರು! ವಿಡಿಯೋ ವೈರಲ್

42 ಎಸೆತ, 102 ರನ್: ವಿರಾಟ್ ಕೊಹ್ಲಿಯ ಸಾರ್ವಕಾಲಿಕ ದಾಖಲೆಯೇ ಉಡೀಸ್‌ ಮಾಡಿದ ಶ್ರೇಯಸ್ ಅಯ್ಯರ್‌!

ಹಾಸನದ ಹೇಮಾವತಿ ನಾಲೆಯಲ್ಲಿ ಪ್ಲಾಸ್ಟಿಕ್‌ ಚೀಲದಲ್ಲಿ ವೃದ್ಧೆಯ ಶವ ಪತ್ತೆ: ಕೊಲೆ ಶಂಕೆ