ಕಠ್ಮಂಡು: ನೇಪಾಳದ ಸ್ಕ್ವಾಟರ್ ಪ್ರದೇಶದಲ್ಲಿ ಆಕಸ್ಮಿಕ ಬೆಂಕಿ ಸಂಭವಿಸಿ 40 ಮನೆಗಳು ಭಸ್ಮವಾಗಿರುವ ಘಟನೆ ಶನಿವಾರ ತಡರಾತ್ರಿ ನಡೆದಿದೆ.
ಕಠ್ಮಂಡುವಿನ ಬಲ್ಕುವಿನಲ್ಲಿರುವ ಹಣ್ಣುಗಳ ಮಾರುಕಟ್ಟೆ ಸಮೀಪ ಅಗ್ಮಿ ಆಕಸ್ಮಿಕ ಸಂಭವಿಸಿದ್ದು, ಸ್ಥಳದಲ್ಲಿದ್ದ 40 ಮನೆಗಳೂ ಸಂಪೂರ್ಣವಾಗಿ ನಾಶಗೊಂಡಿದೆ ಎಂದು ವರದಿಗಳು ತಿಳಿಸಿವೆ.
ಆಯಿಲ್ ಲ್ಯಾಂಪ್ ನಿಂದ ಅನಾಹುತ ಸಂಭವಿಸಿದ್ದು, ಘಟನೆಯಲ್ಲಿ ಮೂವರಿಗೆ ಗಾಯಗಳಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕಾಗಮಿಸಿರುವ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿದ್ದಾರೆ.