ವಿದೇಶ

ಜೆಯುಡಿ ಮತ್ತಿತರ ಉಗ್ರ ಸಂಘಟನೆಗಳನ್ನು ಶಾಶ್ವತವಾಗಿ ನಿಷೇಧಿಸಲು ಮುಂದಾದ ಪಾಕಿಸ್ತಾನ ಸರ್ಕಾರ

Nagaraja AB

ಇಸ್ಲಾಮಾಬಾದ್ : ಮುಂಬೈ ದಾಳಿಯ ರೂವಾರಿ ಹಫೀಜ್ ಸಯ್ಯದ್ ನೇತೃತ್ವದಲ್ಲಿನ ಜಮಾತ್ ಉದ್ ದಾವಾ ಮತ್ತಿತರ ಉಗ್ರ ಸಂಘಟನೆಗಳನ್ನು ಶಾಶ್ವತವಾಗಿ ನಿಷೇಧಿಸುವ ನಿಟ್ಟಿನಲ್ಲಿ ಪಾಕಿಸ್ತಾನ ಸರ್ಕಾರ ಕರಡು ಮಸೂದೆ ಸಿದ್ದಪಡಿಸುತ್ತಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಭಯೋತ್ಪಾದನಾ ನಿಗ್ರಹ ಕಾಯ್ದೆ 1997 ರ ತಿದ್ದುಪಡಿ ಕರಡು ಮಸೂದೆಯನ್ನು ಇದೇ 9 ರಿಂದ ಅರಂಭವಾಗಲಿರುವ ಅಧಿವೇಶನದಲ್ಲಿ ಮಂಡಿಸಲು ಕಾನೂನು ಸಚಿವಾಲಯ ಮುಂದಾಗಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಡಾನ್ ಪತ್ರಿಕೆ ವರದಿ ಮಾಡಿದೆ.

ಉಗ್ರರಿಗೆ ಹಣಕಾಸು ನೆರವು  ಒದಗಿಸುತ್ತಿರುವ ರಾಷ್ಟ್ರಗಳ ಪಟ್ಟಿಯಲ್ಲಿ ಪಾಕಿಸ್ತಾನ ಹೆಸರನ್ನು  ಅಮೆರಿಕಾ, ಇಂಗ್ಲೆಂಡ್, ಫ್ರಾನ್ಸ್, ಜರ್ಮನಿಯ ಜಂಟಿ ಪ್ರಸ್ತಾಪಕ್ಕೆ    ಹಣಕಾಸು ಕ್ರಿಯಾ ಕಾರ್ಯಪಡೆ ಅನುಮೋದನೆ ನೀಡಿತ್ತು.

ನಂತರ ವಿಶ್ವ ಮಟ್ಟದಲ್ಲಿ ತನ್ನ ವರ್ಚಸ್ಸಿಗೆ ಆಗುವ ದಕ್ಕೆಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಭಯೋತ್ಪಾದನಾ ನಿಗ್ರಹ ಕಾಯ್ದೆ 1997 ರ ತಿದ್ದುಪಡಿ ಕರಡು ಮಸೂದೆಯನ್ನು ಮಂಡಿಸಲು ಪಾಕಿಸ್ತಾನ ಮುಂದಾಗಿದೆ.

 ರಾಷ್ಟ್ರೀಯ ಅಧಿವೇಶನದ ಮುಂದೆ ಈ ಮಸೂದೆ ಮಂಡನೆಯಾಗಲಿದ್ದು, ಉಗ್ರ ಚಟುವಟಿಕೆಗಳು ಹಾಗೂ ಉಗ್ರ ಚಟುವಟಿಕೆಗಳಿಗೆ ಹಣಕಾಸು ಒದಗಿಸುತ್ತಿರುವ ಸಂಸ್ಥೆಗಳ ಬಗ್ಗೆ ಪಾಕಿಸ್ತಾನ ಸರ್ಕಾರ ಮಾಹಿತಿ ಸಂಗ್ರಹಿಸುತ್ತಿದೆ ಎನ್ನಲಾಗಿದೆ.



SCROLL FOR NEXT