ಮಾಸ್ಕೊ: ಅಮೆರಿಕ ಸಿರಿಯಾ ಮೇಲೆ ನಡೆಸಿರುವ ವೈಮಾನಿಕ ದಾಳಿಯನ್ನು ಖಂಡಿಸಿರುವ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್, ಅಮೆರಿಕ ದಾಳಿಯನ್ನು ಆಕ್ರಮಣಶೀಲತೆಯ ಕ್ರಿಯೆ ಎಂದು ಹೇಳಿದ್ದಾರೆ.
ಅಮೆರಿಕ ನಡೆಸಿರುವ ದಾಳಿ ಮಾನವೀಯ ದುರಂತವನ್ನು ಉಲ್ಬಣಗೊಳಿಸುತ್ತದೆ ಎಂದು ವ್ಲಾದಿಮಿರ್ ಪುಟಿನ್ ಹೇಳಿದ್ದಾರೆ. ಅಮೆರಿಕ ದಾಳಿಯ ಹಿನ್ನೆಲೆಯಲ್ಲಿ ರಷ್ಯಾ ವಿಶ್ವಸಂಸ್ಥೆ ಭದ್ರತಾ ಮಂಡಳಿಯ ಸಭೆಗೆ ಕರೆ ನೀಡುತ್ತಿದೆ ಎಂದು ತಿಳಿಸಿದ್ದಾರೆ. ಸಿರಿಯಾ ಮೇಲಿನ ದಾಳಿ ಸಮಸ್ತ ಅಂತಾರಾಷ್ಟ್ರೀಯ ಸಂಬಂಧಗಳ ವ್ಯವಸ್ಥೆ ಮೇಲೆ ಪರಿಣಾಮ ಬೀರಲಿದೆ ಎಂದು ವ್ಲಾದಿಮಿರ್ ಪುಟಿನ್ ಅಭಿಪ್ರಾಯಪಟ್ಟಿದ್ದಾರೆ.