ಭಾರತದ ತ್ರಿವರ್ಣ ಧ್ವಜಕ್ಕೆ ಬೆಂಕಿ ಹಚ್ಚಿದ ಪ್ರಕರಣ: ಕ್ಷಮೆಯಾಚಿಸಿದ ಬ್ರಿಟೀಷ್ ಸರ್ಕಾರ 
ವಿದೇಶ

ಭಾರತದ ತ್ರಿವರ್ಣ ಧ್ವಜಕ್ಕೆ ಬೆಂಕಿ ಹಚ್ಚಿದ ಪ್ರಕರಣ: ಬ್ರಿಟೀಷ್ ಸರ್ಕಾರ ಕ್ಷಮೆಯಾಚನೆ

ಲಂಡನ್ ಪಾರ್ಲಿಮೆಂಟ್ ಸ್ಕ್ವೇರ್ ನಲ್ಲಿ ಭಾರತದ ತ್ರಿವರ್ಣ ಧ್ವಜಕ್ಕೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬ್ರಿಟೀಶ್ ವಿದೇಶಾಂಗ ಕಚೇರಿ ಶುಕ್ರವಾರ ಕ್ಷಮೆಯಾಚಿಸಿದೆ...

ಯುನೈಟೆಡ್ ಕಿಂಗ್'ಡಮ್: ಲಂಡನ್ ಪಾರ್ಲಿಮೆಂಟ್ ಸ್ಕ್ವೇರ್ ನಲ್ಲಿ ಭಾರತದ ತ್ರಿವರ್ಣ ಧ್ವಜಕ್ಕೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬ್ರಿಟೀಶ್ ವಿದೇಶಾಂಗ ಕಚೇರಿ ಶುಕ್ರವಾರ ಕ್ಷಮೆಯಾಚಿಸಿದೆ. 
ಘಟನೆ ಕುರಿತಂತೆ ಹೇಳಿಕೆ ನೀಡಿರುವ ಲಂಡನ್ ವಿದೇಶಾಂಗ ಕಚೇರಿ ಮತ್ತು ಕಾಮನ್ ವೆಲ್ತ್ ಕಚೇರಿ, ಜನರಿಗೆ ಶಾಂತಿಯುತವಾಗಿ ಪ್ರತಿಭಟನೆ ನಡೆಸುವ ಹಕ್ಕಿದೆ. ಪಾರ್ಲಿಮೆಂಟ್ ಸ್ಕ್ವೇರ್ ನಲ್ಲಿದ್ದ ಕೆಲ ಸದಸ್ಯರ ನಡವಳಿಕೆಯಿಂದ ಬೇಸರವಾಗಿದೆ. ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆಯೇ ಭಾರತೀಯ ರಾಯಭಾರಿ ಯಶ್'ವರ್ಧನ್ ಕುಮಾರ್ ಸಿನ್ಹಾ ಅವರೊಂದಿಗೆ ಮಾತುಕತೆ ನಡೆಸಲಾಯಿತು ಎಂದು ಹೇಳಿಕೊಂಡಿದೆ. 
ಇದರಂತೆ ವೆಬ್ ಪೋರ್ಟಲ್ ಕೂಡ ಘಟನೆ ಕುರಿತಂತೆ ವರದಿ ಮಾಡಿದ್ದು, ಪಾರ್ಲಿಮೆಂಟ್ ಸ್ಕ್ವೇರ್ ನಲ್ಲಿ ಮತ್ತೆ ಭಾರತದ ತ್ರಿವರ್ಣ ಧ್ವಜ ಹಾರಿಸಲು ಬ್ರಿಟೀಷ್ ಸರ್ಕಾರ ಎಲ್ಲಾ ರೀತಿಯ ಸಿದ್ಧತೆಗಳನ್ನು ನಡೆಸುತ್ತಿದೆ ಎಂದು ತಿಳಿಸಿದೆ. 
ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಭೇಟಿಯಿಂದ ಭಾರತದೊಂದಿನ ಸಂಬಂಧ ಮತ್ತಷ್ಟು ಗಟ್ಟಿಯಾಗಿದೆ. ಮತ್ತಷ್ಟು ಹತ್ತಿರದಿಂದ ಜೊತೆಯಾಗಿ ಕಾರ್ಯನಿರ್ವಹಿಸಲು ನಾವು ಬಯಸಿದ್ದೇವೆಂದು ಬ್ರಿಟೀಷ್ ವಿದೇಶಾಂಗ ಕಚೇರಿ ಹೇಳಿಕೊಂಡಿದೆ. 
ಈ ನಡುವೆ ಭಾರತೀಯ ಪತ್ರಕರ್ತರ ಸಮೂಹ ಘಟನೆಯನ್ನು ತೀವ್ರವಾಗಿ ಖಂಡಿಸಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಂಚಿ ಪರೀಕ್ಷೆ ವಿವಾದ: ಬ್ಯಾರಿಕೇಡ್ ಮುರಿದು ವಿಧಾನಸೌಧದತ್ತ ನುಗ್ಗಿದ ವಿದ್ಯಾರ್ಥಿಗಳು! ಜಲಫಿರಂಗಿ ಬಳಸಿದ ಪೊಲೀಸರು, Video

TNIE Exclusive | Air India ವಿಮಾನದಲ್ಲಿ ಭಾರೀ ತಾಂತ್ರಿಕ ದೋಷ..! Phuket-Delhi ವಿಮಾನ 300 ಅಡಿ ಕುಸಿತಕ್ಕೆ Triple hydraulic systems ವೈಫಲ್ಯ ಕಾರಣ..?

ಸಂಪುಟ ವಿಸ್ತರಣೆ ಬಿಕ್ಕಟ್ಟು ಶಮನಕ್ಕೆ ಸಿಎಂ ಡಿಕೆ.ಶಿವಕುಮಾರ್ ದೆಹಲಿಗೆ ದೌಡು: ಹೈಕಮಾಂಡ್‌ ಜೊತೆ ಮಹತ್ವದ ಚರ್ಚೆ..!

ಬಿಡದಿ ಯೋಜನೆಗೆ ಭೂಸ್ವಾಧೀನ ವಿರೋಧಿಸಿ ಜೆಡಿಎಸ್ ಪಾದಯಾತ್ರೆ: ಮಾಜಿ ಪ್ರಧಾನಿ HD ದೇವೇಗೌಡ ಭಾಗಿ

Maharashtra: ಶಾಲಾ ಹಾಸ್ಟೆಲ್‌ನಲ್ಲಿ ಭೀಕರ ದುರಂತ: ಮಲಗಿದ್ದ 6 ಬಾಲಕಿಯರಿಗೆ ಹಾವು ಕಡಿತ, ಮೂವರ ಸಾವು!