ಕಾಬೂಲ್: ಆಫ್ಗಾನಿಸ್ತಾನದ ರಾಜಧಾನಿ ಕಾಬೂಲ್ ನಲ್ಲಿರುವ ಮತದಾರ ನೋಂದಣಿ ಕೇಂದ್ರದ ಮೇಲೆ ಭಯೋತ್ಪಾದಕರು ಆತ್ಮಾಹುತಿ ಬಾಂಬ್ ದಾಳಿ ನಡೆಸಿದ್ದು ಪರಿಣಾಮ 31 ಮಂದಿ ಮೃತಪಟ್ಟಿದ್ದಾರೆ.
ಮುಂದಿನ ವರ್ಷ ನಡೆಯಲಿರುವ ಅಧ್ಯಕ್ಷೀಯ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣೆಗಾಗಿ ಪೂರ್ವ ತಯಾರಿ ನಡೆಯುತ್ತಿದ್ದು ಈ ವೇಳೆ ಭಯೋತ್ಪಾದಕರು ಆತ್ಮಾಹುತಿ ಬಾಂಬ್ ದಾಳಿ ನಡೆಸಿದ್ದಾರೆ.
ಈ ಆತ್ಮಾಹುತಿ ಬಾಂಬ್ ದಾಳಿಯಲ್ಲಿ ಸ್ಥಳದಲ್ಲೇ 31 ಮಂದಿ ಮೃತಪಟ್ಟಿದ್ದು 54 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಆರೋಗ್ಯ ಸಚಿವಾಲಯದ ವಕ್ತಾರ ವಹೀದ್ ಹೇಳಿದ್ದಾರೆ.
ಇಲ್ಲಿಯವರೆಗೂ ಯಾವುದೇ ಸಂಘಟನೆ ಆತ್ಮಾಹುತಿ ಬಾಂಬ್ ದಾಳಿಯ ಹೊಣೆಯನ್ನು ಹೊತ್ತುಕೊಂಡಿಲ್ಲ.