ವಿದೇಶ

ವುಹಾನ್ ಶೃಂಗಸಭೆ: ಚೀನಾಗೆ ಬಂದಿಳಿದ ಪ್ರಧಾನಿ ಮೋದಿ, ಅಧ್ಯಕ್ಷ ಜಿನ್ ಪಿಂಗ್ ಜೊತೆ ಮಾತುಕತೆ

Srinivasamurthy VN
ಬೀಜಿಂಗ್: ವುಹಾನ್ ನಲ್ಲಿ ಶುಕ್ರವಾರದಿಂದ ಆರಂಭವಾಗಲಿರುವ ಎರಡು ದಿನಗಳ ಶೃಂಗಸಭೆಯಲ್ಲಿ ಪಾಲ್ಗೊಳ್ಳುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ಚೀನಾಗೆ ಬಂದಿಳಿದಿದ್ದಾರೆ.
ವುಹಾನ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಚೀನಾ ಸರ್ಕಾರದ ಅಧಿಕಾರಿಗಳು ಸ್ವಾಗತಿಸಿದ್ದು, ಪ್ರಧಾನಿ ಮೋದಿ ಚೀನಾ ಅಧ್ಯಕ್ಷ ಜಿನ್ ಪಿಂಗ್ ಅವರೊಂದಿಗೆ ಚರ್ಚೆ ನಡೆಸಲಿದ್ದಾರೆ. ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಅವರೊಂದಿಗೆ ಶೃಂಗಸಭೆಯಲ್ಲಿ  ಪಾಲ್ಗೊಳ್ಳಲ್ಲಿರುವ ಪ್ರಧಾನಿ ಮೋದಿ, ಭಾರತ-ಚೀನಾ ಶೀತಲ ಸಮರಕ್ಕೆ ಕಾರಣವಾಗಿರುವ ಡೊಕ್ಲಾಂ ವಿವಾದ ಚರ್ಚೆ ನಡೆಸಲಿದ್ದಾರೆ. 
ಇದಲ್ಲದೆ ಉಭಯ ದೇಶಗಳ ನಡುವಿನ ವಾಣಿಜ್ಯ ಒಪ್ಪಂದ ಹಾಗೂ ಉಭಯ ದೇಶಗಳ ನಡುವಿನ ಸಾಮಾನ್ಯ ವಿಚಾರಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ.  ಎರಡೂ ದೇಶಗಳ ನಡುವೆ ಇರುವ ಗಂಭೀರ ವಿಚಾರಗಳ ಕುರಿತು ಚರ್ಚೆ ನಡೆಸಿ ಇತ್ಯರ್ಥ ಪಡಿಸುವ ಪ್ರಯತ್ನ ಮಾಡಲಿದ್ದು, ಪ್ರಸ್ತುತ ಮತ್ತು ಭವಿಷ್ಯದ ಅಂತಾರಾಷ್ಟ್ರೀಯ ಪರಿಸ್ಥಿತಿಗಳ ಕುರಿತು ಚರ್ಚೆ ನಡೆಸಲಿದ್ದಾರೆ.
ಇನ್ನು ನಿನ್ನೆ ಚೀನಾಕ್ಕೆ ಪ್ರಯಾಣ ಬೆಳೆಸುವುದಕ್ಕೂ ಮೊದಲು ಮಾಧ್ಯಮಗಳೊಂದಿಗೆ ಮಾತನಾಡಿದ್ದ ಪ್ರಧಾನಿ ಮೋದಿ, ಭಾರತ-ಚೀನಾ ಸಂಬಂಧವನ್ನುಕಾರ್ಯತಂತ್ರ ದೃಷ್ಟಿಕೋನದಲ್ಲಿ ಪರಿಶೀಲನೆ ಮಾಡುವುದಾಗಿ ಹೇಳಿದ್ದರು. 
SCROLL FOR NEXT