ವಿದೇಶ

ಇಮ್ರಾನ್ ಖಾನ್ ಪ್ರಮಾಣವಚನ ಸಮಾರಂಭದಲ್ಲಿ ಮೋದಿ ಉಪಸ್ಥಿತಿ ಬಯಸಿದ ಪಿಟಿಐ

Lingaraj Badiger
ಇಸ್ಲಾಮಾಬಾದ್: ಇಮ್ರಾನ್ ಖಾನ್ ಅವರು ಪಾಕಿಸ್ತಾನದ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸುವ ಸಮಾರಂಭಕ್ಕೆ ಭಾರತದ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಇತರೆ ದೇಶಗಳ ಮುಖ್ಯಸ್ಥರಿಗೆ ಆಹ್ವಾನ ನೀಡುವಂತೆ ಪಾಕಿಸ್ತಾನ್ ತೆಹ್ರೀಕ್-ಎ-ಇನ್ಸಾಫ್(ಪಿಟಿಐ) ಪಕ್ಷ ಪಾಕ್ ವಿದೇಶಾಂಗ ಸಚಿವಾಲಯಕ್ಕೆ ಸೂಚಿಸಿದೆ.
ಇಮ್ರಾನ್ ಖಾನ್ ಅವರು ಆಗಸ್ಟ್ 11ರಂದು ಪಾಕ್ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸುತ್ತಿದ್ದು, ಪ್ರಧಾನಿ ಮೋದಿ ಸೇರಿದಂತೆ ಇತರೆ ದೇಶಗಳ ಮುಖ್ಯಸ್ಥರಿಗೆ ಆಹ್ವಾನ ನೀಡುವಂತೆ ವಿದೇಶಾಂಗ ಸಚಿವಾಲಯಕ್ಕೆ ಸೂಚಿಸಿರುವುದಾಗಿ ಪಿಟಿಐ ವಕ್ತಾರ ಫಾಹದ್ ಚೌಧರಿ ಹೇಳಿದ್ದಾರೆ. 
ಜುಲೈ 25ರಂದು ನಡೆದ ಪಾಕ್ ಸಾರ್ವತ್ರಿಕ ಚುನಾವಣೆಯಲ್ಲಿ ಪಿಟಿಐ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದು, 65 ವರ್ಷದ ಮಾಜಿ ಕ್ರಿಕೆಟಿಗ ಹಾಗೂ ರಾಜಕಾರಣಿ, ಇತರೆ ಪಕ್ಷಗಳ ಹಾಗೂ ಪಕ್ಷೇತರರ ನೆರವಿನೊಂದಿಗೆ ನೂತನ ಸರ್ಕಾರ ರಚಿಸುತ್ತಿದ್ದಾರೆ.
ಚುನಾವಣೆಯಲ್ಲಿ ಬಹುಮತಗಳಿಸಿದ ಇಮ್ರಾನ್ ಖಾನ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಕರೆ ಮಾಡಿ ಮಾತನಾಡಿರುವುದು ಭಾರತ-ಪಾಕ್ ನಡುವೆ  ಹೊಸ ಅಧ್ಯಾಯ ಪ್ರಾರಂಭವಾಗುವ ನಿಟ್ಟಿನಲ್ಲಿ ಸ್ವಾಗತಾರ್ಹ ಬೆಳವಣಿಗೆ ಎಂದು ಪಿಟಿಐ ನಾಯಕ ತಿಳಿಸಿದ್ದಾರೆ.
ಚುನಾವಣೆಯಲ್ಲಿ ಗೆದ್ದಿದ್ದಕ್ಕಾಗಿ ಪ್ರಧಾನಿ ಅಭಿನಂದನೆ ಸಲ್ಲಿಸಿದ್ದಕ್ಕೆ  ಮೋದಿಗೆ ಖಾನ್ ಧನ್ಯವಾದ ಹೇಳಿದ್ದು, ಉಭಯ ದೇಶಗಳ ನಡುವಿನ ವಿವಾದಗಳು ಮಾತುಕತೆ ಮೂಲಕವೇ ಬಗೆಹರಿಸಿಕೊಳ್ಳಬೇಕು ಎಂದು ಖಾನ್ ಅಭಿಪ್ರಾಯಪಟ್ಟಿದ್ದಾರೆ.
SCROLL FOR NEXT