ಮೆಕ್ಸಿಕೋದಲ್ಲಿ ನೆಲಕ್ಕಪ್ಪಳಿಸಿದ ವಿಮಾನ: ಅದೃಷ್ಟವಶಾತ್ ಬದುಕುಳಿದ 100 ಪ್ರಯಾಣಿಕರು!
ಮೆಕ್ಸಿಕೋದ ರಾಜಧಾನಿ ಡುರಾಗೊಂ ವಿಮಾನ ನಿಲ್ದಾಣದಿಂದ 100 ಪ್ರಯಾಣಿಕರಿದ್ದ ವಿಮಾನ ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ನೆಲಕ್ಕಪ್ಪಳಿಸಿದ್ದು ಅದೃಷ್ಟವಶಾತ್ ಎಲ್ಲರು ಬದುಕುಳಿದಿದ್ದಾರೆ...
ಮೆಕ್ಸಿಕೋ: ಮೆಕ್ಸಿಕೋದ ರಾಜಧಾನಿ ಡುರಾಗೊಂ ವಿಮಾನ ನಿಲ್ದಾಣದಿಂದ 100 ಪ್ರಯಾಣಿಕರಿದ್ದ ವಿಮಾನ ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ನೆಲಕ್ಕಪ್ಪಳಿಸಿದ್ದು ಅದೃಷ್ಟವಶಾತ್ ಎಲ್ಲರು ಬದುಕುಳಿದಿದ್ದಾರೆ.
ಮೂವರು ವಿಮಾನ ಸಿಬ್ಬಂದಿ ಹಾಗೂ 97 ಪ್ರಯಾಣಿಕರು ಪ್ರಯಾಣಿಸುತ್ತಿದ್ದ ವಿಮಾನ ಹವಾಮಾನ ವ್ಯಪರಿತ್ಯದಿಂದ ನೆಲಕ್ಕಪ್ಪಳಿಸಿದೆ ಎನ್ನಲಾಗಿದೆ. ಟೇಕ್ ಆಫ್ ಆದ ಕೆಲ ಕ್ಷಣಗಳಲ್ಲಿ ವಿಮಾನ ನೆಲಕ್ಕಪ್ಪಳಿಸಿದ್ದು 85 ಮಂದಿ ಗಾಯಗೊಂಡಿದ್ದಾರೆ. ಆದರೆ ಇಲ್ಲಿಯವರೆಗೂ ಯಾವುದೇ ಪ್ರಾಣಹಾನಿ ಬಗ್ಗೆ ವರದಿಯಾಗಿಲ್ಲ.
ಮಳೆ ಹಾಗೂ ಸಿಡಿಲಿನಿಂದ ವಿಮಾನಯಾನಕ್ಕೆ ಅಡ್ಡಿಯಾಗಿದೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.