ಸಂಗ್ರಹ ಚಿತ್ರ 
ವಿದೇಶ

ಇಮ್ರಾನ್ ಖಾನ್ ಪ್ರಮಾಣ ವಚನಕ್ಕೆ ಸಿಧು, ಕಪಿಲ್ ದೇವ್, ಗವಾಸ್ಕರ್ ಗೆ ಆಹ್ವಾನ ವಿಚಾರಕ್ಕೆ ಟ್ವಿಸ್ಟ್!

ಪಾಕಿಸ್ತಾನದ ಪ್ರಧಾನಿಯಾಗಿ ಇಮ್ರಾನ್ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮಕ್ಕೆ ಭಾರತದ ಮಾಜಿ ಕ್ರಿಕೆಟಿಗರಾದ ನವಜೋತ್ ಸಿಂಗ್ ಸಿಧು, ಗವಾಸ್ಕರ್ ಮತ್ತು ಕಪಿಲ್ ದೇವ್ ಗೆ ಅಧಿಕೃತ ಆಹ್ವಾನ ನೀಡಿಲ್ಲ ಎಂದು ತಿಳಿದುಬಂದಿದೆ.

ಇಸ್ಲಾಮಾಬಾದ್: ಪಾಕಿಸ್ತಾನದ ಪ್ರಧಾನಿಯಾಗಿ ಇಮ್ರಾನ್ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮಕ್ಕೆ ಭಾರತದ ಮಾಜಿ ಕ್ರಿಕೆಟಿಗರಾದ ನವಜೋತ್ ಸಿಂಗ್ ಸಿಧು, ಗವಾಸ್ಕರ್ ಮತ್ತು ಕಪಿಲ್ ದೇವ್ ಗೆ ಅಧಿಕೃತ ಆಹ್ವಾನ ನೀಡಿಲ್ಲ ಎಂದು ತಿಳಿದುಬಂದಿದೆ.
ಪಾಕಿಸ್ತಾನದ ಪ್ರಧಾನಮಂತ್ರಿ ಕಚೇರಿಯ ಮೂಲಗಳ ಪ್ರಕಾರ ಇಮ್ರಾನ್ ಖಾನ್ ಕಚೇರಿಯಿಂದ ಭಾರತೀಯ ಮಾಜಿ ಕ್ರಿಕೆಟಿಗರಿಗೆ ಯಾವುದೇ ಅಧಿಕೃಕತ ಅಹ್ವಾನ ನೀಡಿಲ್ಲವಂತೆ. ಆದರೆ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಇಮ್ರಾನ್ ಖಾನ್ ಅವರ ವೈಯುಕ್ತಿಕವಾಗಿ ಆಹ್ವಾನ ನೀಡಿದ್ದಾರೆ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. 
ಇಮ್ರಾನ್ ಖಾನ್ ಅವರು ಆಗಸ್ಟ್ 11ರಂದು ನಡೆಯಲಿರುವ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಮಾಜಿ ಕ್ರಿಕೆಟಿಗರಾದ ನವಜೋತ್ ಸಿಂಗ್ ಸಿಧು, ಸುನಿಲ್ ಗವಾಸ್ಕರ್, ಕಪಿಲ್ ದೇವ್ ಮತ್ತು ನಟ ಅಮೀರ್ ಖಾನ್ ಅವರಿಗೆ ಕರೆ ಮಾಡಿ ಆಹ್ವಾನ ನೀಡಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.
ಈ ಬಗ್ಗೆ ಮಾತನಾಡಿರುವ ಪಿಟಿಎ ವಕ್ತಾರರು ಮುಂದಿನ ಬುಧವಾರ ಇಮ್ರಾನ್ ಖಾನ್ ಅವರ ಆಪ್ತರಿಗೆ ಅಧಿಕೃತ ಅಹ್ವಾನ ನೀಡಲಾಗುತ್ತದೆ. ಈ ಬಗ್ಗೆ ಮಂಗಳವಾರ ಪಟ್ಟಿ ಸಿದ್ಧಪಡಿಸಲಾಗುತ್ತದೆ ಎಂದು ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT