ಏಷಿಯಾನ್ ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ 
ವಿದೇಶ

ಭಾರತಕ್ಕೆ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಗಮನ?; ಪರಿಶೀಲನೆಯಲ್ಲಿದೆ ಎಂದ ಅಮೆರಿಕಾ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗೆ ಭಾರತ ಆಹ್ವಾನ ನೀಡಿದ್ದು, ಅವರ ಆಗಮನದ ವಿಷಯ ...

ನವದೆಹಲಿ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗೆ ಭಾರತ ಆಹ್ವಾನ ನೀಡಿದ್ದು, ಅವರ ಆಗಮನದ ವಿಷಯ ಪರಿಶೀಲನೆಯಲ್ಲಿದೆ ಎಂದು ಅಧಿಕೃತ ಮೂಲಗಳಿಂದ ತಿಳಿದುಬಂದಿದೆ.
ಈ ಕುರಿತು ಭಾರತ ಮತ್ತು ಅಮೆರಿಕ ಸರ್ಕಾರಗಳು ಸಂಪರ್ಕದಲ್ಲಿದ್ದು, ಅಮೆರಿಕ ಅಧ್ಯಕ್ಷರ ಭೇಟಿಯ ದಿನಾಂಕ, ಸಮಯ ಇನ್ನೂ ನಿಗದಿಯಾಗಿಲ್ಲ ಎಂದು ತಿಳಿದುಬಂದಿದೆ.

ಮುಂದಿನ ವರ್ಷ ಗಣರಾಜ್ಯೋತ್ಸವ ಸಮಾರಂಭಕ್ಕೆ ಡೊನಾಲ್ಡ್ ಟ್ರಂಪ್ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸುವ ಯಾವುದೇ ನಿರೀಕ್ಷೆ ಮತ್ತು ಸಂದರ್ಭ ಭಾರತ ಸರ್ಕಾರದ ಮುಂದೆ ಇಲ್ಲ. ಬೇರೆ ಹಲವು ಆಯ್ಕೆಗಳನ್ನು ಭಾರತ ನೋಡುತ್ತಿದೆ. ಡೊನಾಲ್ಡ್ ಟ್ರಂಪ್ ಅವರ ಭೇಟಿ, ಸಮಯ, ಸಂದರ್ಭಗಳು ಇನ್ನೂ ಪರಿಶೀಲನೆಯಲ್ಲಿವೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಕಳೆದ ವಾರ ಶ್ವೇತ ಭವನದ ಮಾಧ್ಯಮ ಕಾರ್ಯದರ್ಶಿ ಸರಹ ಸಂದರ್ಸ್, ಭಾರತಕ್ಕೆ ಆಗಮಿಸುವಂತೆ ಟ್ರಂಪ್ ಅವರಿಗೆ ಆಹ್ವಾನ ಬಂದಿದ್ದು ಆದರೆ ಇನ್ನೂ ಅವರು ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಹೇಳಿದ್ದರು.

ಕಳೆದ ವರ್ಷ ಜೂನ್ ನಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಡೊನಾಲ್ಡ್ ಟ್ರಂಪ್ ಅವರನ್ನು ದ್ವಿಪಕ್ಷೀಯ ಮಾತುಕತೆ ನಡೆಸಲು ಭಾರತಕ್ಕೆ ಆಹ್ವಾನಿಸಿದ್ದರು. ಟ್ರಂಪ್ ಅವರು ಭಾರತದ ಆಹ್ವಾನವನ್ನು ಸ್ವೀಕರಿಸಿದರೆ ಎರಡೂ ದೇಶಗಳ ಮಧ್ಯೆ ರಕ್ಷಣೆ, ಭದ್ರತೆ ಮತ್ತು ವ್ಯಾಪಾರ ಕ್ಷೇತ್ರಗಳಲ್ಲಿ ದ್ವಿಪಕ್ಷೀಯ ಕಾರ್ಯತಂತ್ರ ಸಹಭಾಗಿತ್ವಕ್ಕೆ ಉತ್ತಮ ಬಲವರ್ಧನೆ ಸಿಗಲಿದೆ.

ಡೊನಾಲ್ಡ್ ಟ್ರಂಪ್ ಅವರು ಅಮೆರಿಕ ಅಧ್ಯಕ್ಷರಾದ ಮೇಲೆ ಅಮೆರಿಕಾ ಭಾರತದೊಂದಿಗೆ ಆಳವಾದ ಕಾರ್ಯತಂತ್ರ ಸಹಕಾರಕ್ಕೆ ಒತ್ತು ನೀಡುತ್ತಿದೆ. ಈ ಹಿನ್ನಲೆಯಲ್ಲಿ ಭಾರತ ಟ್ರಂಪ್ ಅವರ ಬರುವಿಕೆಗೆ ಇದಿರು ನೋಡುತ್ತಿದೆ.

2015ರಲ್ಲಿ ಗಣರಾಜ್ಯೋತ್ಸವ ಸಮಾರಂಭಕ್ಕೆ ಅಂದಿನ ಅಧ್ಯಕ್ಷ ಬರಾಕ್ ಒಬಾಮಾ ಭಾರತಕ್ಕೆ ಬಂದಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

‘ದಯವಿಟ್ಟು ಮಲಗಬೇಡಿ, ನಮಗೆ ನೀವು ಬೇಕು’: ಸಾವಿನ ದವಡೆಯಲ್ಲಿದ್ದ ಸ್ಮಿತ್ ಮಚ್ಚರ್'ಗೆ ಧೈರ್ಯ ತುಂಬಿದ ದಂತ ವೈದ್ಯ, Flydubai ವಿಮಾನದಲ್ಲಿ ಆ 45 ನಿಮಿಷಗಳಲ್ಲಿ ನಡೆದಿದ್ದೇನು..?

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

SIR ಗೊಂದಲ: ಅಕ್ರಮ ಬಯಲಾಗುವ ಭೀತಿಯಿಂದಲೇ ರಾಜಪಾಲರ ಬಳಿ ಓಡಿದ್ದಾರೆ: NDA ನಾಯಕರ ವಿರುದ್ಧ ಡಿಕೆ.ಶಿವಕುಮಾರ್ ವಾಗ್ದಾಳಿ