ಫಿಜಿಯಲ್ಲಿ ಪ್ರಬಲ ಭೂಕಂಪನ (ಸಾಂದರ್ಭಿಕ ಚಿತ್ರ) 
ವಿದೇಶ

ಫಿಜಿಯಲ್ಲಿ ಪ್ರಬಲ ಭೂಕಂಪನ, ರಿಕ್ಟರ್ ಮಾಪಕದಲ್ಲಿ 8.2ರಷ್ಟು ತೀವ್ರತೆ ದಾಖಲು

ದ್ವೀಪಗಳ ನಾಡು ಫಿಜಿಯಲ್ಲಿ ಪ್ರಬಲ ಭೂಕಂಪನ ಸಂಭವಿಸಿದ್ದು, ರಿಕ್ಚರ್ ಮಾಪಕದಲ್ಲಿ 8.2ರಷ್ಟು ತೀವ್ರತೆ ದಾಖಲಾಗಿದೆ ಎಂದು ಅಮೆರಿಕದ ಭೂವೈಜ್ಞಾನಿಕ ಸಮೀಕ್ಷೆ ಅಧಿಕಾರಿಗಳು ತಿಳಿಸಿದ್ದಾರೆ.

ಸಿಡ್ನಿ: ದ್ವೀಪಗಳ ನಾಡು ಫಿಜಿಯಲ್ಲಿ ಪ್ರಬಲ ಭೂಕಂಪನ ಸಂಭವಿಸಿದ್ದು, ರಿಕ್ಚರ್ ಮಾಪಕದಲ್ಲಿ 8.2ರಷ್ಟು ತೀವ್ರತೆ ದಾಖಲಾಗಿದೆ ಎಂದು ಅಮೆರಿಕದ ಭೂವೈಜ್ಞಾನಿಕ ಸಮೀಕ್ಷೆ ಅಧಿಕಾರಿಗಳು ತಿಳಿಸಿದ್ದಾರೆ.
ತಡರಾತ್ರಿ ಸುಮಾರು 12.19ರ ಸುಮಾರಿನಲ್ಲಿ ಭೂಕಂಪನ ಸಂಭವಿಸಿದ್ದು, ರಾಜಧಾನಿ ಸುವಾದ ಸುಮಾರು 361 ಕಿ.ಮೀ ಆಳದಲ್ಲಿ ಭೂಕಂಪನದ ಕೇಂದ್ರ ಬಿಂದು ದಾಖಲಾಗಿದೆ. ಈ ವರೆಗೂ ಭೂಕಂಪದಿಂದಾದ ಸಾವು-ನೋವುಗಳ ಕುರಿತು ವರದಿಯಾಗಿಲ್ಲ.
ಸುನಾಮಿ ಎಚ್ಚರಿಕೆ ಇಲ್ಲ
ಇನ್ನು ಪ್ರಬಲ ಭೂಕಂಪನ ಸಂಭವಿಸಿದ್ದರೂ ಸುನಾಮಿ ಸಂಭವ ಕಡಿಮೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭೂಗರ್ಭದ ತೀರ ಆಳದಲ್ಲಿ ಕಂಪನ ಸಂಭವಿಸಿದ್ದು, ಇದರಿಂದ ಸುನಾಮಿ ಅಲೆಗಳು ಏಳುವ ಸಾಧ್ಯತೆ ತೀರಾ ಕಡಿಮೆ ಎಂದು ಅಧಿಕಾರಿಗಳು ಅಭಿಪ್ರಾಯಪಟ್ಟಿದ್ದಾರೆ. ಪ್ರಸ್ತುತ ಭೂಕಂಪನ ಸಂಭವಿಸಿರುವ ಪ್ರದೇಶವನ್ನು ವಿಜ್ಞಾನಿಗಳು ರಿಂಗ್ ಫೈರ್ ಪ್ರದೇಶ ಗುರುತಿಸಿದ್ದು, ಇಲ್ಲಿ ಇಂತಹ ಕಂಪನಗಳು ಸಾಮಾನ್ಯ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Flydubai ಕಾಕ್‌ಪಿಟ್ ದಾಳಿ: ಸಹ ಪೈಲಟ್ ಗುರುತು ಬಹಿರಂಗ

FlyDubai ವಿಮಾನ ಹಾರಾಟಕ್ಕೆ ಒಮಾನ್ ನಲ್ಲಿ ನಿಷೇಧ: ಪತನಕ್ಕೆ ಯತ್ನಿಸಿದ್ದ ಸಹ ಪೈಲಟ್‌ ಉಗ್ರವಾದ ಹಿನ್ನಲೆಯವನೇ?

ಏಷ್ಯನ್ ಗೇಮ್ಸ್ 2026: 'ರಿಕರ್ವ್ ಆರ್ಚರಿಯಲ್ಲಿ ಭಾರತಕ್ಕೆ ಮೊದಲ ಚಿನ್ನದ ಪದಕ ತಂದುಕೊಟ್ಟ ಮೊಹೋದ್ ಕುಂಕುಮ್!

ಜ್ಞಾನೇಶ್ ಕುಮಾರ್ ವಿರುದ್ಧ ದೆಹಲಿ, ಮುಂಬೈನಲ್ಲಿ ಬೃಹತ್ ಪ್ರತಿಭಟನೆ; 700 ಮಂದಿ ವಶಕ್ಕೆ

FlyDubai ಘಟನೆ ಹಿಂದೆ ಯಾವುದೇ ಶಕ್ತಿಯ ಕೈವಾಡವಿದ್ದರೂ ಡೋಂಟ್ ಕೇರ್; 'ಭಾರಿ ಬೆಲೆ' ತೆರಬೇಕಾಗುತ್ತೆ- ಇಸ್ರೇಲ್ ಪ್ರಧಾನಿ ನೆತನ್ಯಾಹು ಎಚ್ಚರಿಕೆ