ಇಮ್ರಾನ್ ಖಾನ್ ಅವರ ಹಾಲಿ ಪತ್ನಿಯ ಮಾಜಿ ಗಂಡನಲ್ಲಿ ಕ್ಷಮೆ ಕೇಳಲು ನಿರಾಕರಿಸಿದ ಪೊಲೀಸ್ ಅಧಿಕಾರಿ ವಿರುದ್ಧ ಕ್ರಮ! 
ವಿದೇಶ

ಇಮ್ರಾನ್ ಖಾನ್ ಅವರ ಹಾಲಿ ಪತ್ನಿಯ ಮಾಜಿ ಗಂಡನಲ್ಲಿ ಕ್ಷಮೆ ಕೇಳಲು ನಿರಾಕರಿಸಿದ ಪೊಲೀಸ್ ಅಧಿಕಾರಿ ವಿರುದ್ಧ ಕ್ರಮ!

ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಅವರ ಹಾಲಿ ಪತ್ನಿಯ ಮಾಜಿ ಪತಿಯಲ್ಲಿ ಕ್ಷಮೆ ಕೇಳಲು ನಿರಾಕರಿಸಿದ ಪೊಲೀಸ್ ಅಧಿಕಾರಿಯ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ.

ಪಾಕಿಸ್ತಾನ: ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಅವರ ಹಾಲಿ ಪತ್ನಿಯ ಮಾಜಿ ಪತಿಯಲ್ಲಿ ಕ್ಷಮೆ ಕೇಳಲು ನಿರಾಕರಿಸಿದ ಪೊಲೀಸ್ ಅಧಿಕಾರಿಯ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. 
ಇಮ್ರಾನ್ ಖಾನ್ ಅವರ ಮೂರನೇ ಪತ್ನಿ ಬುಶ್ರಾ ಬಿಬಿ ಅವರ ಮಾಜಿ ಪತಿಯ ಕಾರನ್ನು  ತಡೆದಿದ್ದ ಪೊಲೀಸ್ ಅಧಿಕಾರಿಯೊಬ್ಬರು ಖಾವರ್ ಮನೀಕಾ ಅವರಲ್ಲಿ ಕ್ಷಮೆ ಕೇಳಲು ನಿರಾಕರಿಸಿದ್ದರು.ಈ ಹಿನ್ನೆಲೆಯಲ್ಲಿ ಅವರ ವಿರುದ್ಧ ಕ್ರಮ ಜರುಗಿಸಲಾಗಿದೆ. 
ಪಂಜಾಬ್ ಸರ್ಕಾರ ಪೊಲೀಸ್ ಅಧಿಕಾರಿ ವಿರುದ್ಧ ಕ್ರಮ ಕೈಗೊಂಡಿದ್ದು, ಜಿಲ್ಲಾ ಪೊಲೀಸ್ ಅಧಿಕಾರಿ ರಿಜ್ವಾನ್ ಒಮರ್ ನ್ನು ವಜಾಗೊಳಿಸಲಾಗಿದೆ. 
ಖಾವರ್ ಮನೀಕಾ ಲಾಹೋರ್ ನಿಂದ ಪಾಕ್ ಪಟ್ಟನ್ ಗೆ ತೆರಳುತ್ತಿರಬೇಕಾದರೆ ಪೊಲೀಸ್ ಅಧಿಕಾರಿ ಮನೀಕಾ ಅವರ ಕಾರನ್ನು ತಡೆದು ನಿಲ್ಲಿಸಿದ್ದರು. ಆದರೆ ಕಾರನ್ನು ನಿಲ್ಲಿಸದೇ ಇದ್ದ ಕಾರಣ ಮನೀಕಾ ಅವರ ಕಾರನ್ನು ಹಿಂಬಾಲಿಸಿ ತಪಾಸಣೆ ನಡೆಸಿದ್ದರು. ಪೊಲೀಸ್ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಲಾಗಿರುವುದಕ್ಕೆ ವಿಪಕ್ಷ ಪಿಎಂಎಲ್-ಎನ್ ಇಮ್ರಾನ್ ಖಾನ್ ವಿರುದ್ಧ ತೀವ್ರ ಟೀಕಾಪ್ರಹಾರ ನಡೆಸಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Ayodhya: ರಾಮ ಮಂದಿರ ದೇಣಿಗೆ ಲೂಟಿ ಪ್ರಕರಣ: 8 ಆರೋಪಿಗಳ ವಿರುದ್ಧ FIR ದಾಖಲು!

Women T-20 World cup: ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 5 ವಿಕೆಟ್ ಗಳ ಭರ್ಜರಿ ಗೆಲುವು!

ಸೇಡಿಗಾಗಿ ಖಾಸಗಿ ಪೋಟೋ, ವಿಡಿಯೋ ವೈರಲ್, ಬೆದರಿಕೆ ಪ್ರಕರಣ: ಕಡ್ಡಾಯವಾಗಿ FIR ದಾಖಲಿಸಬೇಕು, ಪೊಲೀಸರಿಗೆ ಪ್ರಿಯಾಂಕ್ ಖರ್ಗೆ ಖಡಕ್ ಸೂಚನೆ!

Bidadi Township Project: ಸಿಎಂ ಡಿಕೆ ಶಿವಕುಮಾರ್‌ಗೆ 2ನೇ ಪತ್ರ ಬರೆದ ಕೇಂದ್ರ ಸಚಿವ ಎಚ್‌ ಡಿ ಕುಮಾರಸ್ವಾಮಿ!

ಗರಿಷ್ಠ ಅವಧಿ ಸಂಪೂರ್ಣ: KSCA ಕಾರ್ಯದರ್ಶಿ ಸಂತೋಷ್ ಮೆನನ್ ಅನರ್ಹ, BCCI ಒಂಬುಡ್ಸ್‌ಮನ್ ಆದೇಶ!