2022 ಕ್ಕೆ ಮೊದಲ ಬಾರಿಗೆ ಜಿ-20 ಶೃಂಗಸಭೆ ಆಯೋಜಿಸಲಿರುವ ಭಾರತ: ಮೋದಿ ಘೋಷಣೆ
2022 ಕ್ಕೆ ಭಾರತ ಮೊದಲ ಬಾರಿಗೆ ಜಿ-20 ಶೃಂಗಸಭೆ ಆಯೋಜಿಸಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ.
ಅರ್ಜೆಂಟೀನಾ: 2022 ಕ್ಕೆ ಭಾರತ ಮೊದಲ ಬಾರಿಗೆ ಜಿ-20 ಶೃಂಗಸಭೆ ಆಯೋಜಿಸಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ.
ಇನ್ನೆರಡು ವರ್ಷಗಳಲ್ಲಿ ಭಾರತ 75 ನೇ ವರ್ಷದ ಸ್ವಾತಂತ್ರ್ಯ ದಿನವನ್ನಾಚರಣೆ ಮಾಡಲಿದ್ದು, ಅದೇ ವರ್ಷ ಭಾರತ ಮೊದಲ ಬಾರಿಗೆ ಜಿ-20 ಶೃಂಗಸಭೆಯನ್ನು ಆಯೋಜಿಸಲಿದೆ ಎಂದು ಮೋದಿ ಹೇಳಿದ್ದಾರೆ.
ಅರ್ಜೆಂಟೀನಾದ ರಾಜಧಾನಿಯಲ್ಲಿ ನಡೆದ ಜಿ-20 ಶೃಂಗಸಭೆಯಲ್ಲಿ ಭಾಗವಹಿಸಿ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ, ಭಾರತ 2020 ರ ವೇಳೆಗೆ 75 ನೇ ವರ್ಷದ ಸ್ವಾತಂತ್ರ್ಯ ದಿನವನ್ನು ಆಚರಿಸಲಿದೆ, ಈ ಮಹತ್ವದ ಸಂದರ್ಭದಲ್ಲಿ ಭಾರತ ಜಿ-20 ಶೃಂಗಸಭೆಯನ್ನು ಆಯೋಜಿಸಲು ಉತ್ಸುಕವಾಗಿದೆ. ವಿಶ್ವದ ಅತಿ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಯಾಗಿರುವ ಭಾರತಕ್ಕೆ ಬನ್ನಿ ಎಂದು ಜಿ-20 ನಾಯಕರನ್ನು ಪ್ರಧಾನಿ ಆಹ್ವಾನಿಸಿದ್ದಾರೆ.
ಅರ್ಜೆಂಟೀನಾ, ಆಸ್ಟ್ರೇಲಿಯಾ, ಬ್ರೆಜಿಲ್, ಕೆನಡಾ, ಚೀನಾ, ಯುರೋಪಿಯನ್ ಯೂನಿಯನ್, ಫ್ರಾನ್ಸ್, ಜರ್ಮನಿ, ಭಾರತ, ಇಂಡೋನೇಷ್ಯಾ, ಇಟಲಿ, ಜಪಾನ್, ಮೆಕ್ಸಿಕೊ, ರಷ್ಯಾ, ಸೌದಿ ಅರೇಬಿಯಾ, ದಕ್ಷಿಣ ಆಫ್ರಿಕಾ, ದಕ್ಷಿಣ ಕೊರಿಯಾ, ಟರ್ಕಿ, ಯುಕೆ ಮತ್ತು ಯುಎಸ್ ರಾಷ್ಟ್ರಗಳು ಜಿ-20 ಸದಸ್ಯರಾಗಿದ್ದು, ವಿಶ್ವದ ಶೇ.80 ರಷ್ಟು ಜಿಡಿಪಿಯನ್ನು ಹೊಂದಿವೆ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.