ಮಹಿಂದಾ ರಾಜಪಕ್ಸ 
ವಿದೇಶ

ಶ್ರೀಲಂಕಾ: ಪ್ರಧಾನಿಯಾಗಿ ರಾಜಪಕ್ಸ ಯಾವುದೇ ಕ್ರಮಗಳನ್ನು ಕೈಗೊಳ್ಳುವಂತಿಲ್ಲ- ನ್ಯಾಯಾಲಯ ಹೇಳಿಕೆ

ರಾಜಪಕ್ಸ ಶ್ರೀಲಂಕಾ ಪ್ರಧಾನಿಯಾಗಿ ಯಾವುದೇ ಕ್ರಮಗಳನ್ನು ಕೈಗೊಳ್ಳುವಂತಿಲ್ಲ ಎಂದು ಅಲ್ಲಿನ ನ್ಯಾಯಾಲಯ ಹೇಳಿದೆ.

ಕೊಲಂಬೊ: ವಿವಾದಾತ್ಮಕ ನಿರ್ಧಾರದ ಮೂಲಕ ರಾನಿಲ್ ವಿಕ್ರಮ್ ಸಿಂಘೆ ಅವರನ್ನು ವಜಾಗೊಳಿಸಿ ಮಹಿಂದಾ ರಾಜಪಕ್ಸ ಅವರನ್ನು ಪ್ರಧಾನಿಯಾಗಿ ನೇಮಿಸಿದ್ದ ಶ್ರೀಲಂಕಾ ಅಧ್ಯಕ್ಷ ಮೈತ್ರಿಪಾಲ್ ಸಿರಿಸೇನಾ ಅವರಿಗೆ ಭಾರೀ ಮುಖಭಂಗವಾಗಿದೆ. ರಾಜಪಕ್ಸ ಪ್ರಧಾನಿಯಾಗಿ ಯಾವುದೇ ಕ್ರಮಗಳನ್ನು ಕೈಗೊಳ್ಳುವಂತಿಲ್ಲ ಎಂದು ಅಲ್ಲಿನ ನ್ಯಾಯಾಲಯ ಹೇಳಿದೆ.

ಪ್ರಧಾನಿ, ಕ್ಯಾಬಿನೆಟ್ ಮತ್ತು ಉಪಮಂತ್ರಿಗಳಂತೆ ಕಾರ್ಯನಿರ್ವಹಿಸುವುದನ್ನು ತಡೆಗಟ್ಟಿ ರಾಜಪಕ್ಸ ಹಾಗೂ ಆತನ ಸರ್ಕಾರದ ವಿರುದ್ಧ ಮಧ್ಯಂತರ ಆದೇಶ ಹೊರಡಿಸಲಾಗಿದ್ದು, ನ್ಯಾಯಾಲಯ ನೋಟಿಸ್ ಜಾರಿಗೊಳಿಸಿದೆ  ಎಂದು ಕೊಲಂಬೊ ಗೆಜೆಟ್ ವರದಿ ಮಾಡಿದೆ.
ರಾಜಪಕ್ಸ ಹಾಗೂ ಆತನ ಸರ್ಕಾರದ ವಿರುದ್ಧ 122 ಸಂಸದರು ಸಲ್ಲಿಸಿದ ಕೋ ವಾರೆಂಟ್ ಪ್ರಕರಣದಲ್ಲಿ  ನ್ಯಾಯಾಲಯ  ಈ ಆದೇಶ ಹೊರಡಿಸಿದೆ.
ಶ್ರೀಲಂಕಾ ಅಧ್ಯಕ್ಷ ಸಿರಿಸೇನಾ ವಿಕ್ರಮ್ ಸಿಂಘೆ ಅವರನ್ನು ವಜಾಗೊಳಿಸಿ ಅವರ ಸ್ಥಾನದಲ್ಲಿ ರಾಜಪಕ್ಸ ಅವರನ್ನು ನೇಮಕಗೊಳಿಸಿದ ನಂತರ ಅಕ್ಟೋಬರ್ 26 ರಿಂದ ಲಂಕಾದಲ್ಲಿ ರಾಜಕೀಯ ಬಿಕ್ಕಟ್ಟು ಉಂಟಾಗಿದೆ.
ಸಿರಿಸೇನಾ ಸಂಸತ್ತು ವಿಸರ್ಜಿಸಿದ ಬಳಿಕ ಅವಧಿ ಮುಗಿಯುವ ಸುಮಾರು 20 ತಿಂಗಳುಗಳ ಮುಂಚಿತವಾಗಿಯೇ  ಚುನಾವಣೆ ನಡೆಯಬೇಕು ಎಂದು ಆದೇಶ ನೀಡಿದ್ದರು.ಸಂಸತ್ತು ವಿಸರ್ಜಿಸುವ ಸಿರಿಸೇನಾ ನಿರ್ಧಾರವನ್ನು ಸರ್ವೋಚ್ಛ ನ್ಯಾಯಾಲಯ ರದ್ದುಪಡಿಸಿದ್ದು, ಚುನಾವಣಾ ಸಿದ್ಧತಾ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್

ನಂದಿಗ್ರಾಮದಲ್ಲಿ 1.22 ಲಕ್ಷ ಮತ, ಅಸ್ಸಾಂನಲ್ಲಿ BJPಗೆ ಗೆಲುವು; 2 ಕ್ಷೇತ್ರ ಗೆದ್ದ TVK: ಕಾಂಗ್ರೆಸ್, ದೀದಿಗೆ ಮುಖಭಂಗ!

ಉಪಚುನಾವಣೆಯಲ್ಲಿ ಗೆಲುವು, ಜನರೊಂದಿಗೆ NDA ಆಳವಾದ ನಂಟಿನ ಪ್ರತೀಕ: ಪ್ರಧಾನಿ ಮೋದಿ

ಮತಗಳ್ಳತನವೇ ಆಗಿದ್ದರೆ ಕೇರಳ Congress CM, ತಮಿಳುನಾಡು CM ಕೂಡ ಮತಗಳ್ಳರೇ: ಚೇತನ್ ಅಹಿಂಸಾ