ಕ್ಯಾಸ್ಟ್ರೋ ಅವರ ಹಿರಿಯ ಪುತ್ರ ಡಯಾಜ್ ಬಲಾರ್ಟ್ (ಸಂಗ್ರಹ ಚಿತ್ರ)
ಹವಾನಾ: ಕ್ಯೂಬಾದ ಮಾಜಿ ಅಧ್ಯಕ್ಷ ದಿವಂಗತ ಫಿಡೆಲ್ ಕ್ಯಾಸ್ಟ್ರೋ ಅವರ ಹಿರಿಯ ಪುತ್ರ ಡಯಾಜ್ ಬಲಾರ್ಟ್ ಗುರುವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
68 ವರ್ಷದ ಡಯಾಜ್ ಬಲಾರ್ಟ್ ಆತ್ಮಹತ್ಯೆ ಮಾಡಿಕೊಂಡಿರುವ ಕುರಿತು ಕ್ಯೂಬಾ ಮಾಧ್ಯಮಗಳು ವರದಿ ಮಾಡಿದ್ದು, ಬಲಾರ್ಟ್ ತೀವ್ರ ಖಿನ್ನತೆಯಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದೆ.
ತಂದೆ ಫಿಡೆಲ್ ಕ್ಯಾಸ್ಟ್ರೋರನ್ನು ಡಯಾಜ್ ಬಲಾರ್ಟ್ ಬಹುತೇಕ ಹೋಲುತ್ತಿದ್ದ ಕಾರಣ ಅವರನ್ನು Fidelito (ಫಿಡೆಲಿಟೋ) ಎಂದೇ ಗುರುತಿಸಲಾಗುತ್ತಿತ್ತು. ಮಾನಸಿಕ ಒತ್ತಡ ಹಾಗೂ ಖಿನ್ನತೆಯಿಂದ ಬಳಲುತ್ತಿದ್ದ ಡಯಾಜ್ ಹಲವು ವೈದ್ಯರ ಬಳಿ ಚಿಕಿತ್ಸೆ ಪಡೆದಿದ್ದರೂ ಗುಣಮುಖರಾಗಿರಲಿಲ್ಲ. ಇದರಿಂದ ಬೇಸತ್ತು ಡಯಾಜ್ ಬಲಾರ್ಟ್ ಆತ್ಮಹತ್ಯೆಗೆ ಶರಣಾಗಿದ್ದಾರೆಂದು ವರದಿ ಮಾಡಲಾಗಿದೆ.
ಇನ್ನು ಡಯಾಜ್ ಬಲಾರ್ಟ್ ಅವರು ಕ್ಯೂಬನ್ ಅಕಾಡೆಮಿ ಆಫ್ ಸೈನ್ಸ್ ನ ಉಪಾಧ್ಯಕ್ಷರಾಗಿ ಅವರು ಕಾರ್ಯ ನಿರ್ವಹಿಸುತ್ತಿದ್ದರು ಎಂದು ತಿಳಿದುಬಂದಿದೆ.