ಪ್ಯಾಲೆಸ್ತೀನ್ ಭೇಟಿಗೆ ತೆರಳಿದ ಪ್ರಧಾನಿ ಮೋದಿ
ನವದೆಹಲಿ: ಪ್ರಧಾನಿ ನರೇಂದ್ರಮೋದಿ ಅವರು ಶುಕ್ರವಾರ ಮೂರು ರಾಷ್ಟ್ರಗಳ ಭೇಟಿಗಾಗಿ ತೆರಳಿದ್ದು, ಪ್ರಸ್ತುತ ಪ್ಯಾಲೆಸ್ತೀನ್ ನತ್ತ ಪ್ರಯಾಣ ಬೆಳೆಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರ ಮೂರು ರಾಷ್ಟ್ರಗಳ ಪ್ರವಾಸ ಆರಂಭವಾಗಿದ್ದು, ಇಂದಿನಿಂದ ಪ್ರಧಾನಿ ನರೇಂದ್ರ ಮೋದಿ ಪ್ಯಾಲೆಸ್ತೇನ್, ಅರಬ್ (ಯುನೈಟೆಡ್ ಅರಬ್ ಎಮಿರೇಟ್ಸ್) ಮತ್ತು ಒಮನ್ ದೇಶಗಳಲ್ಲಿ ಪ್ರವಾಸ ಮಾಡಲಿದ್ದಾರೆ. ಮುಖ್ಯವಾಗಿ ಪ್ರಧಾನಿ ನರೇಂದ್ರ ಮೋದಿ ಪ್ರಪ್ರಥಮವಾಗಿ ಪ್ಯಾಲೇಸ್ತೀನ್ ಗೆ ಭೇಟಿ ನೀಡುತ್ತಿದ್ದು, ಭಾರತದ ಪ್ರಧಾನಿಯೊಬ್ಬರು ಪ್ಯಾಲೆಸ್ತೀನ್ ಗೆ ಭೇಟಿ ನೀಡುತ್ತಿರುವುದು ಇದೇ ಮೊದಲ ಬಾರಿಯಾಗಿದೆ. ಹೀಗಾಗಿ ಇದೊಂದು ಐತಿಹಾಸಿಕ ಭೇಟಿಯಾಗಿದ್ದು, ಪ್ರಧಾನಿ ಮೋದಿ ಸ್ವಾಗತಕ್ಕೆ ಪ್ಯಾಲೆಸ್ತೀನ್ ಸರ್ಕಾರ ಸಕಲ ರೀತಿಯಲ್ಲೂ ಸಜ್ಜಾಗಿದೆ.
ಅಂತೆಯೇ ಪ್ಯಾಲೆಸ್ತೀನ್ ಭೇಟಿ ಬಳಿಕ ಪ್ರಧಾನಿ ಮೋದಿ ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ)ಗೆ ತೆರಳಲಿದ್ದು, ಇದು ಮೋದಿಯವರ ಎರಡನೇ ಭೇಟಿಯಾಗಿದೆ. ಬಳಿಕ ಮೋದಿ ಒಮನ್ ಗೆ ತೆರಳಿಲಿದ್ದು, ಇದೂ ಕೂಡ ಮೊದಲನೇ ಭೇಟಿಯಾಗಿದೆ.
ಮೂರೂ ದೇಶಗಳ ನಾಯಕರೊಂದಿಗೆ ಪ್ರಧಾನಿ ನರೇಂದ್ರ ಮೋದಿ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದು, ಭಾರತದೊಂದಿಗೆ ಪರಸ್ಪರ ಬಾಂಧವ್ಯ, ವಾಣಿಜ್ಯ ವೃದ್ಧಿಯ ಕುರಿತು ಮಾತುಕತೆ ನಡೆಸಲಿದ್ದಾರೆ. ಅಲ್ಲದೆ ಹಲವು ಸಾರ್ವಜನಿಕ ಕಾರ್ಯಕ್ರಮಗಳಲ್ಲೂ ಮೋದಿ ಪಾಲ್ಗೊಳ್ಳಲಿದ್ದು, ದುಬೈನಲ್ಲಿ ನಡೆಯಲಿರುವ ಆರನೇ ವಿಶ್ವ ಸರ್ಕಾರ ಸಮಿತಿಯಲ್ಲಿಯೂ ಪ್ರಧಾನಿ ಮೋದಿಯವರು ಮಾತನಾಡಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics