ಪ್ರಧಾನಿ ನರೇಂದ್ರಮೋದಿ ಅಬುದಾಬಿಯಲ್ಲಿ ಮೊದಲ ಹಿಂದು ದೇವಾಲಯಕ್ಕೆ ಶಂಕುಸ್ಥಾಪನೆ ನೆರವೇರಿಸಿದ ಚಿತ್ರ 
ವಿದೇಶ

ಅಬುದಾಬಿಯಲ್ಲಿ ಮೊದಲ ಹಿಂದೂ ದೇವಾಲಯಕ್ಕೆ ಪ್ರಧಾನಿ ಶಂಕುಸ್ಥಾಪನೆ

ವಿದೇಶ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರಮೋದಿ ಅರಬ್ ರಾಷ್ಟ್ರ ಅಬುದಾಬಿಯಲ್ಲಿ ಮೊದಲ ಹಿಂದೂ ದೇವಾಲಯಕ್ಕೆ ಶಂಕುಸ್ಥಾಪನೆ ನೆರವೇರಿಸಿದ್ದಾರೆ.

ಅಬುದಾಬಿ : ವಿದೇಶ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರಮೋದಿ ಅರಬ್ ರಾಷ್ಟ್ರ ಅಬುದಾಬಿಯಲ್ಲಿ ಮೊದಲ ಹಿಂದೂ ದೇವಾಲಯಕ್ಕೆ ಶಂಕುಸ್ಥಾಪನೆ ನೆರವೇರಿಸಿದ್ದಾರೆ.

ಭಾರತೀಯ ಮೂಲದ ಮೂರು ಮಿಲಿಯನ್ ಜನರು ಇಲ್ಲಿ ವಾಸಿಸುತ್ತಿದ್ದು,ದುಬೈ- ಅಬು ದಬೈ ರಾಷ್ಟ್ರೀಯ ಹೆದ್ದಾರಿಯಲ್ಲಿ ಮೊದಲ ಬಾರಿಗೆ ಹಿಂದೂ ದೇವಾಲಯ ನಿರ್ಮಿಸಲಾಗುತ್ತಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರವೀಶ್ ಕುಮಾರ್ ಟ್ಟೀಟ್ ಸಂದೇಶದಲ್ಲಿ ತಿಳಿಸಿದ್ದಾರೆ.

2015ರ ನಂತರ ಎರಡನೇ ಬಾರಿಗೆ ಪ್ರಧಾನಿ ನರೇಂದ್ರಮೋದಿ  ಅರಬ್ ರಾಷ್ಟ್ರಕ್ಕೆ ಭೇಟಿ ನೀಡಿದ್ದಾರೆ. 55 ಸಾವಿರ ಚದರ  ಮೀಟರ್ ವಿಸ್ತೀರ್ಣದಲ್ಲಿ ಅಬುದಾಬಿಯಲ್ಲಿ ಮೊದಲ ಹಿಂದೂ ದೇವಾಲಯ ನಿರ್ಮಾಣವಾಗುತ್ತಿದ್ದು, ಶಂಕುಸ್ಥಾಪನೆ ಸಮಾರಂಭ ಐತಿಹಾಸಿಕವಾದದ್ದು ಎಂದು ಯುಎಇನ ಭಾರತೀಯ ರಾಯಬಾರಿ ನವ್ ದೀಪ್ ಸಿಂಗ್ ಸೂರಿ ತಿಳಿಸಿದ್ದಾರೆ.

ಸಭಾಭವನದಲ್ಲಿ  ನಡೆದ ಕಾರ್ಯಕ್ರಮದಲ್ಲಿ ನರೇಂದ್ರಮೋದಿ ದೇವಾಲಯ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದರು. ದುಬೈನ  ಒಪೇರಾ ಹೌಸ್ ನಲ್ಲಿ ಭಾರತೀಯ ಸಮುದಾಯಗಳೊಂದಿಗೆ ನರೇಂದ್ರಮೋದಿ ಮಾತುಕತೆ ನಡೆಸಿದರು. ವಿವಿಧ ವೃತ್ತಿಪರ ಹಾಗೂ ಸಂಘಟನೆಗಳ ಪ್ರತಿನಿಧಿಗಳು ಇದರಲ್ಲಿ ಪಾಲ್ಗೊಂಡಿದ್ದರು ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಮೂಡಾ ಅಕ್ರಮಕ್ಕೆ ಬ್ರೇಕ್: ₹2000 ಕೋಟಿ ಮೌಲ್ಯದ 1,100 ಸೈಟುಗಳ ಹಂಚಿಕೆ ರದ್ದು ಮಾಡಿದ ಯತೀಂದ್ರ ಸಿದ್ದರಾಮಯ್ಯ

ತಪ್ಪಾದ DPR ಸಿದ್ಧಪಡಿಸುವ ಸಲಹೆಗಾರರೇ ಹೆದ್ದಾರಿ ಅಪಘಾತಗಳು ಮತ್ತು ಸಾವುಗಳಿಗೆ 'ತಪ್ಪಿತಸ್ಥರು': ನಿತಿನ್ ಗಡ್ಕರಿ ಕಠಿಣ ಕ್ರಮದ ಎಚ್ಚರಿಕೆ!

ಕೇವಲ 4 ಚಿತ್ರ ಮಾಡಿದ ನಟನಿಗೆ 'ಸರ್' ಅಂತೀರಲ್ಲ ಶಿವಣ್ಣ; ಸೆಂಚೂರಿ ಸ್ಟಾರ್ ವಿರುದ್ಧ ಕನ್ನಡಿಗರ ಬೇಸರ, Video!

ಶ್ರೀಲಂಕಾ ವಿರುದ್ಧ 165 ರನ್ ಗಳಿಂದ ಗೆಲುವು: WTC ಪಾಯಿಂಟ್ ಪಟ್ಟಿಯಲ್ಲಿ ಭಾರತದ ಸ್ಥಾನ ಬದಲಾವಣೆ ಆಯ್ತಾ?

ಸಿಎಂ ವಿಜಯ್ ಯು- ಟರ್ನ್: ಮತ್ತೊಂದು ಮಹತ್ವದ ಆದೇಶ ಹಿಂಪಡೆದ ತಮಿಳುನಾಡು ಸರ್ಕಾರ!