ಭಾರತ-ಓಮನ್ ವ್ಯಾಪಾರ ಸಭೆಯಲ್ಲಿ ಭಾಗವಹಿಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ 
ವಿದೇಶ

ರಕ್ಷಣೆ, ಆರೋಗ್ಯ ವಲಯ ಸೇರಿದಂತೆ 8 ಒಪ್ಪಂದಗಳಿಗೆ ಭಾರತ-ಓಮನ್ ಸಹಿ

ಓಮನ್ ಸುಲ್ತಾನರೊಂದಿಗೆ ಸೋಮವಾರ ವಿಸ್ತಾರ ಮಾತುಕತೆ ನಡೆಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ, 8 ಒಪ್ಪಂದಗಳಿಗೆ ಸಹಿ ಹಾಕಿದರು.ರಕ್ಷಣಾ ವಲಯದಲ್ಲ ಸಹಕಾರ, ಆರೋಗ್ಯ ಮತ್ತು ಪ್ರವಾಸೋದ್ಯಮ ಕ್ಷೇತ್ರಗಳಲ್ಲಿ ....

ಮಸ್ಕತ್: ಓಮನ್ ಸುಲ್ತಾನರೊಂದಿಗೆ  ಸೋಮವಾರ ವಿಸ್ತಾರ ಮಾತುಕತೆ ನಡೆಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ 8 ಒಪ್ಪಂದಗಳಿಗೆ ಸಹಿ ಹಾಕಿದರು. ರಕ್ಷಣಾ ವಲಯ,ಆರೋಗ್ಯ ಮತ್ತು ಪ್ರವಾಸೋದ್ಯಮ ಕ್ಷೇತ್ರಗಳಲ್ಲಿ ಪ್ರಮುಖ ಒಪ್ಪಂದಗಳು ಏರ್ಪಟ್ಟಿವೆ.

ತಮ್ಮ ಮೂರು ದೇಶಗಳ ಪ್ರವಾಸದ ಕೊನೆಯ ಭಾಗವಾಗಿ ದುಬೈಗೆ ನಿನ್ನೆ ಆಗಮಿಸಿದ ಪ್ರಧಾನಿ ಮೋದಿ, ಓಮನ್ ಸುಲ್ತಾನ ಖಬೂಸ್ ಬಿನ್ ಸೈದ್ ಅಲ್ ಸೈದ್ ಅವರೊಂದಿಗೆ ನಿಯೋಗ ಮಟ್ಟದ ಮಾತುಕತೆ ನಡೆಸಿದರು. ವ್ಯಾ ಪಾರ, ಹೂಡಿಕೆ, ಇಂಧನ, ರಕ್ಷಣಾ ವಲಯ, ಭದ್ರತೆ, ಆಹಾರ ಭದ್ರತೆ ಸೇರಿದಂತೆ ಸ್ಥಳೀಯ ವಿಷಯಗಳನ್ನು ಬಲಪಡಿಸುವ ಕುರಿತು ತೆಗೆದುಕೊಳ್ಳಬೇಕಾದ ಕ್ರಮಗಳ ಕುರಿತು ಮಾತುಕತೆ ನಡೆಸಿದರು.

ದ್ವಿಪಕ್ಷೀಯ ಸಂಬಂಧದಲ್ಲಿ ಹೊಸ ನಕಾಶೆಯನ್ನು ಬರೆಯಲು  ಹೊರಟಿದ್ದೇವೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ನಿಯೋಗ ಒಮನ್ ಸುಲ್ತಾನರೊಂದಿಗೆ ನಿಯೋಗ ಮಟ್ಟದ ಮಾತುಕತೆ ನಡೆಸುತ್ತಿದ್ದಾರೆ. ಇಬ್ಬರು ವ್ಯಾಪಾರ, ಹೂಡಿಕೆ, ಇಂಧನ, ಭದ್ರತೆ ಸೇರಿದಂತೆ ಹಲವು ವಿಷಯಗಳಲ್ಲಿ ಸಹಕಾರ ವರ್ಧನೆಗೆ ಕಾರ್ಯತಂತ್ರ ಸಹಭಾಗಿತ್ವವನ್ನು ವಹಿಸಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಇಲಾಖೆ ವಕ್ತಾರ ರವೀಶ್ ಕುಮಾರ್ ಟ್ವೀಟ್ ಮಾಡಿದ್ದಾರೆ.

ಒಮನ್ ದೇಶದ ಅಭಿವೃದ್ಧಿಯಲ್ಲಿ ಭಾರತೀಯರ ಪ್ರಾಮಾಣಿಕ ಮತ್ತು ಕಠಿಣ ಪರಿಶ್ರಮವನ್ನು ಸುಲ್ತಾನ್ ಖಬೂಸ್ ಇದೇ ಸಂದರ್ಭದಲ್ಲಿ ಪ್ರಶಂಸಿಸಿದರು.

ಒಮನ್ ಸುಲ್ತಾನ ಮತ್ತು ಪ್ರಧಾನಿ ನರೇಂದ್ರ ಮೋದಿಯವರ ದ್ವಿಪಕ್ಷೀಯ ಮಾತುಕತೆ ನಂತರ ನಾಗರಿಕ ಮತ್ತು ವಾಣಿಜ್ಯ ವಿಷಯಗಳಲ್ಲಿ ಕಾನೂನು ಮತ್ತು ನ್ಯಾಯಾಂಗ ಸಹಕಾರದ ವಿಷಯಗಳಲ್ಲಿ ನಿಲುವಳಿ ಒಪ್ಪಂದ ಸೇರಿದಂತೆ 8 ಪ್ರಮುಖ ಒಪ್ಪಂದಗಳಿಗೆ ಸಹಿ ಹಾಕಲಾಯಿತು.

ವಿದೇಶಾಂಗ ಸೇವೆ ಸಂಸ್ಥೆ, ವಿದೇಶಾಂಗ ವ್ಯವಹಾರಗಳ ಸಚಿವಾಲಯ, ಭಾರತ ಮತ್ತು ಓಮನ್ ರಾಜತಾಂತ್ರಿಕ ಸಂಸ್ಥೆ, ಶೈಕ್ಷಣಿಕ ಮತ್ತು ಪಾಂಡಿತ್ಯ ವಿಷಯಗಳ ಸಹಕಾರಗಳಿಗೆ ಸಂಬಂಧಪಟ್ಟಂತೆ ಕೂಡ ಎರಡೂ ರಾಷ್ಟ್ರಗಳು ಒಪ್ಪಂದ ಮಾಡಿಕೊಂಡಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

SCROLL FOR NEXT