ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ವಿದೇಶ

ಅರುಣಾಚಲ ಪ್ರದೇಶಕ್ಕೆ ಪ್ರಧಾನಿ ಮೋದಿ ಭೇಟಿಗೆ ಚೀನಾ ಆಕ್ಷೇಪ

ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಅರುಣಾಚಲ ಪ್ರದೇಶಕ್ಕೆ ಭೇಟಿ ನೀಡಿರುವುದಕ್ಕೆ ಚೀನಾ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು,...

ಅರುಣಾಚಲ ಪ್ರದೇಶದಲ್ಲಿ ನರೇಂದ್ರ ಮೋದಿ
Lingaraj Badiger
Updated On : 15 Feb 2018, 4:17 am
ಬೀಜಿಂಗ್: ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಅರುಣಾಚಲ ಪ್ರದೇಶಕ್ಕೆ ಭೇಟಿ ನೀಡಿರುವುದಕ್ಕೆ ಚೀನಾ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಭಾರತದೊಂದಿಗೆ ರಾಜತಾಂತ್ರಿಕ ಪ್ರತಿಭಟನೆ ದಾಖಲಿಸುವುದಾಗಿ ಹೇಳಿದೆ.
ಪ್ರಧಾನಿ ಮೋದಿ ಅವರು ಇಂದು ಅರುಣಾಚಲ ಪ್ರದೇಶಕ್ಕೆ ಭೇಟಿ ನೀಡುತ್ತಿರುವ ವರದಿಗಳ ಕುರಿತು ಪ್ರತಿಕ್ರಿಯಿಸಿದ ಗೆಂಗ್ ಶುವಾಂಗ್ ಅವರು, ಚೀನಾ-ಭಾರತ ಗಡಿಯಲ್ಲಿ ಚೀನಾದ ಸ್ಥಾನ ಸ್ಥಿರ ಮತ್ತು ಸ್ಪಷ್ಟವಾಗಿದೆ ಎಂದಿದ್ದಾರೆ.
ವಿವಾದಿತ ಪ್ರದೇಶಕ್ಕೆ ಪ್ರಧಾನಿ ಮೋದಿ ನೀಡಿರುವುದನ್ನು ಚೀನಾ ಬಲವಾಗಿ ವಿರೋಧಿಸುತ್ತದೆ ಮತ್ತು ಈ ಕುರಿತು ರಾಜತಾಂತ್ರಿಕ ಪ್ರತಿಭಟನೆ ದಾಖಲಿಸುವುದಾಗಿ ಶುವಾಂಗ್ ಹೇಳಿರುವುದಾಗಿ ಚೀನಾ ಸರ್ಕಾರಿ ಮಾಧ್ಯಮ ಕ್ಸಿನ್ಹುಆ ಸುದ್ದಿ ಸಂಸ್ಥೆ ವರದಿ ಮಾಡಿದೆ.

Advertisement

Advertisement

ಪ್ರಧಾನಿ ಮೋದಿಯವರು ತ್ರಿಪುರಾಕ್ಕೆ ಭೇಟಿ ನೀಡಿದ ನಂತರ ಅರುಣಾಚಲ ಪ್ರದೇಶದ ಇಟಾನಗರದಲ್ಲಿ ಹಲವು ಯೋಜನೆಗಳ ಚಾಲನೆ ನೀಡಿ ಮಾತನಾಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement