ವೈಮಾನಿಕ ದಾಳಿ 
ವಿದೇಶ

ಸಿರಿಯಾ: ಇಸಿಸ್‌ನ ಕೊನೆಯ ಕೇಂದ್ರದ ಮೇಲೆ ವೈಮಾನಿಕ ಬಾಂಬ್ ದಾಳಿ, 26 ಸಾವು

ಇಸ್ಲಾಮಿಕ್ ಸ್ಟೇಟ್ ಆಫ್ ಇರಾಕ್ ಮತ್ತು ಸಿರಿಯಾ(ಇಸಿಸ್) ಉಗ್ರ ಸಂಘಟನೆಯ ಪೂರ್ವ ಸಿರಿಯದಲ್ಲಿನ ಕೊನೆಯ ಕೇಂದ್ರದ ಮೇಲೆ ನಡೆಸಲಾಗಿರುವ ವೈಮಾನಿಕ ಬಾಂಬ್...

ಬೇರೂತ್: ಇಸ್ಲಾಮಿಕ್ ಸ್ಟೇಟ್ ಆಫ್ ಇರಾಕ್ ಮತ್ತು ಸಿರಿಯಾ(ಇಸಿಸ್) ಉಗ್ರ ಸಂಘಟನೆಯ ಪೂರ್ವ ಸಿರಿಯದಲ್ಲಿನ ಕೊನೆಯ ಕೇಂದ್ರದ ಮೇಲೆ ನಡೆಸಲಾಗಿರುವ ವೈಮಾನಿಕ ಬಾಂಬ್ ದಾಳಿಯಲ್ಲಿ ಏಳು ಮಕ್ಕಳು ಸೇರಿದಂತೆ 25 ಸಾರ್ವಜನಿಕರು ಮೃತಪಟ್ಟಿರುವುದಾಗಿ ಸಿರಿಯಾದ ಮಾನವ ಹಕ್ಕುಗಳ ವಿಚಕ್ಷಣ ಸಂಸ್ಥೆ ತಿಳಿಸಿದೆ. 
ಇರಾಕ್ ಗಡಿ ಸಮೀಪದಲ್ಲಿ ಇಸಿಸ್ ಉಗ್ರ ಅಲ್ಬು ಕಮಾಲ್ ನ ಹಿಂದಿನ ಭದ್ರ ಕೋಟೆಯ ಉತ್ತರಕ್ಕಿರುವ ಅಲ್ ಶಾಫಾ ಗ್ರಾಮದ ಮೇಲೆ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಭಾನುವಾರ ಅಮೆರಿಕ ನೇತೃತ್ವದ ಒಕ್ಕೂಟಗಳು ನಡೆಸಿದ ವೈಮಾನಿಕ ಬಾಂಬ್ ದಾಳಿ ನಡೆಸಲಾಗಿದೆ ಎಂದು ವಿಚಕ್ಷಣಕಾರರು ತಿಳಿಸಿದ್ದಾರೆ. 
ವೈಮಾನಿಕ ಬಾಂಬ್ ದಾಳಿಯಲ್ಲಿ ಏಳು ಮಕ್ಕಳು ಸೇರಿದಂತೆ 25 ಮಂದಿ ಸಾವನ್ನಪ್ಪಿದ್ದು ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಬ್ರಿಟನ್ ಮೂಲದ ವಿಚಕ್ಷಣ ಸಂಸ್ಥೆಯ ಮುಖ್ಯಸ್ಥ ರಾಮಿ ಅಬ್ ದೇಲ್ ರೆಹಮಾನ್ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಕಾಂಗ್ರೆಸ್ ಹೈಕಮಾಂಡ್ ಒಪ್ಪಿದರೇ 5 ವರ್ಷ ಕಾಲ ನಾನೇ ಮುಖ್ಯಮಂತ್ರಿ': ಸಿದ್ದರಾಮಯ್ಯ ಮಾರ್ಮಿಕ ಹೇಳಿಕೆ!

ಮತ್ತೊಬ್ಬ ಏಕನಾಥ ಶಿಂಧೆ ಹುಟ್ಟಲು ಸಾಧ್ಯವಿಲ್ಲ; 'ನವೆಂಬರ್ ಕ್ರಾಂತಿ'ಗೆ ಕಾಂಗ್ರೆಸ್ ಅವಕಾಶ ನೀಡಲ್ಲ!

ನಾಳೆಯಿಂದಲೇ ರಾಷ್ಟ್ರವ್ಯಾಪಿ SIR: ಮೊದಲ ಹಂತದಲ್ಲಿ ಕೇರಳ, ತಮಿಳುನಾಡು, ಬಂಗಾಳ ಸೇರಿ 12 ರಾಜ್ಯಗಳಲ್ಲಿ ಮತದಾರರ ಪಟ್ಟಿಯ ಶುದ್ಧೀಕರಣ

ಜಗತ್ತಿನ ಯಾವುದೇ ಭಾಗ ತಲುಪಿ ಧ್ವಂಸ ಮಾಡಬಲ್ಲ ರಷ್ಯಾದ ಬ್ಯೂರೆವೆಸ್ಟ್ನಿಕ್ ಪರಮಾಣು ಕ್ಷಿಪಣಿ ಪರೀಕ್ಷೆ ಯಶಸ್ವಿ; ಅಮೆರಿಕಾಗೆ ಢವ ಢವ, ತಣ್ಣಗಾದ ಟ್ರಂಪ್!

ಕೇಜ್ರಿವಾಲ್ ಗೆ ಬೇಲ್, SIR, ಆರ್ಟಿಕಲ್ 370, ವಾಕ್ ಸ್ವಾತಂತ್ರ್ಯದ ಬಗ್ಗೆ ತೀರ್ಪು..: ನೂತನ ಸಿಜೆಐ ಟ್ರ್ಯಾಕ್ ರೆಕಾರ್ಡ್ ಹೀಗಿದೆ...

SCROLL FOR NEXT