ಢಾಕಾ: 2015ರಲ್ಲಿ 8 ಮಂದಿ ಸಾವಿಗೆ ಕಾರಣವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಗ್ಲಾದೇಶದ ನ್ಯಾಯಾಲಯವೊಂದು ಮಾಜಿ ಪ್ರಧಾನಿ ಖಲೀದಾ ಜಿಯಾರನ್ನು ಬಂಧಿಸುವಂತೆ ಆದೇಶ ನೀಡಿದ್ದು ಮುಂದಿನ ವಿಚಾರಣೆಯನ್ನು ಏಪ್ರಿಲ್ 24ಕ್ಕೆ ಮುಂದೂಡಿದೆ.
2015ರಲ್ಲಿ ಸರ್ಕಾರದ ವಿರುದ್ಧ ಹಮ್ಮಿಕೊಳ್ಳಲಾದ ಪ್ರತಿಭಟನೆ ವೇಳೆ ಖಲೀದ ಜಿಯಾ ನೇತೃತ್ವದ ಬಾಂಗ್ಲಾದೇಶ ನ್ಯಾಷನಲ್ ಪಾರ್ಟಿ(ಬಿಎನ್ಪಿ) ಕಾರ್ಯಕರ್ತರು ಬಸ್ ಮೇಲೆ ಬಾಂಬ್ ಎಸೆದ ಕಾರಣ ಎಂಟು ಮಂದಿ ಪ್ರಾಣ ಕಳೆದುಕೊಂಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಯಾ ಮತ್ತು ಬಿಎನ್ಪಿಯ 48 ಮಂದಿಯನ್ನು ಬಂಧಿಸುವಂತೆ ಆದೇಶ ನೀಡಿದೆ.
ಕೊಮಿಲ್ಲಾ ನ್ಯಾಯಾಲಯದ ನ್ಯಾಯಾಲಯದ ಹೆಚ್ಚುವರಿ ಮುಖ್ಯ ಮ್ಯಾಜಿಸ್ಟ್ರೇಟ್ ಜೋನಬ್ ಬೇಗಂ ಅವರು ಬಂಧನ ವಾರೆಂಟ್ ಜಾರಿಗೊಳಿಸಿದ್ದು ಮುಂದಿನ ವಿಚಾರಣೆಯನ್ನು ಏಪ್ರಿಲ್ 24ಕ್ಕೆ ಮುಂದೂಡಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಜನವರಿ 2ರಂದು 69 ಮಂದಿ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಲಾಗಿತ್ತು. ಪ್ರಕರಣ ಸಂಬಂಧ ಬಿಎನ್ಬಿ ಮುಖ್ಯಸ್ಥರು ಮತ್ತು ಉಳಿದವರು ನ್ಯಾಯಾಲಯದ ಮುಂದೆ ಹಾಜರಾಗದ ಕಾರಣ ಅವರ ಬಂಧನಕ್ಕೆ ನ್ಯಾಯಾಲಯ ಆದೇಶ ನೀಡಿದೆ.