ಸಾಂದರ್ಭಿಕ ಚಿತ್ರ 
ವಿದೇಶ

ಅಘ್ಘಾನ್‌ ಸೇನೆಯಿಂದ 65 ಐಎಸ್‌ಐಎಸ್ ಉಗ್ರರ ಹತ್ಯೆ

ಇಸ್ಲಾಮಿಕ್ ಉಗ್ರ ಸಂಘಟನೆಗೆ ಸೇರಿದ ಕನಿಷ್ಠ 65 ಉಗ್ರರನ್ನು ದೇಶದ ಪೂರ್ವಗಡಿ ಭಾಗದಲ್ಲಿ ಅಫ್ಘಾನಿಸ್ತಾನ ಸೇನೆ....

ಕಾಬೂಲ್‌: ಇಸ್ಲಾಮಿಕ್ ಉಗ್ರ ಸಂಘಟನೆಗೆ ಸೇರಿದ ಕನಿಷ್ಠ 65 ಉಗ್ರರನ್ನು ದೇಶದ ಪೂರ್ವಗಡಿ ಭಾಗದಲ್ಲಿ ಅಫ್ಘಾನಿಸ್ತಾನ ಸೇನೆ ಹತ್ಯೆ ಮಾಡಿರುವುದಾಗಿ ಮಂಗಳವಾರ ಅಧಿಕಾರಿಗಳು ತಿಳಿಸಿದ್ದಾರೆ.
ಹಸ್ಕಾ ಮೇನಾ ಜಿಲ್ಲೆಯ ಗೊರ್ಗೋರೆ ಹಾಗೂ ವಂಗೋರಾ ಪ್ರದೇಶಗಳಲ್ಲಿ ಭೂ ಮತ್ತು ವಾಯುಸೇನಾ ಪಡೆಗಳು ಕಾರ್ಯಾಚರಣೆ ನಡೆಸಿದ್ದವು. ಕಾರ್ಯಾಚರಣೆ ವೇಳೆ ಒಬ್ಬ ನಾಗರಿಕ ಮೃತಪಟ್ಟಿದ್ದು, 13 ಜನರು ಗಾಯಗೊಂಡಿದ್ದಾರೆ ಎಂದು ನಂಗರ್ಹಾರ್‌ ಪ್ರಾಂತ್ಯದ ವಕ್ತಾರ ಅತಾವುಲ್ಲಾ ಖೋಗ್ಯಾನಿ ಹೇಳಿದ್ದಾರೆ. ಆದರೆ, ಈ ಕುರಿತು ಐಎಸ್‌ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
ಇತ್ತೀಚಿಗಷ್ಟೇ ಐಎಸ್‌ ಉಗ್ರರನ್ನು ಸದೆಬಡಿಯಲು ಅಮೆರಿಕ ಸೇನೆಯೂ ಡ್ರೋಣ್‌ ದಾಳಿ ನಡೆಸಿತ್ತು. ಈ ವೇಳೆ 11 ಉಗ್ರರು ಮೃತಪಟ್ಟಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್; ಸಿಎಂ ಸ್ಥಾನಕ್ಕೆ ರಾಜೀನಾಮೆ?, ದಿಢೀರ್ ಮುಂಬೈಗೆ ತೆರಳಿದ ರಾಜ್ಯಪಾಲ ಗೆಹ್ಲೋಟ್..!

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ: ಕಣ್ಣೀರಿಟ್ಟ CM ಕಚೇರಿ ಸಿಬ್ಬಂದಿ; ಬೆಂಬಲಿಗರಿಂದ ಪ್ರತಿಭಟನೆ

SCROLL FOR NEXT