ಪರ್ವೇಜ್ ಮುಷರಫ್, ನರೇಂದ್ರ ಮೋದಿ 
ವಿದೇಶ

ಜಾಗತಿಕವಾಗಿ ನರೇಂದ್ರ ಮೋದಿಗೆ ಆದ್ಯತೆ; ಪಾಕಿಸ್ತಾನಕ್ಕೆ ಗೌರವವೇ ಇಲ್ಲ: ಪರ್ವೆಜ್ ಮುಷರಫ್

ಪ್ರಧಾನಮಂತ್ರಿ ನರೇಂದ್ರ ಮೋದಿಯವರು ನಮ್ಮನ್ನು ಜಾಗತಿಕವಾಗಿ ನಿಯಂತ್ರಿಸುತ್ತಿದ್ದು, ಅಂತರಾಷ್ಟ್ರೀಯ ಮಟ್ಟದಲ್ಲಿ ಪಾಕಿಸ್ತಾನಕ್ಕಿಂದು ಗೌರವವಿಲ್ಲದಂತಾಗಿದೆ ಎಂದು ಪಾಕಿಸ್ತಾನದ...

ಇಸ್ಲಾಮಾಬಾದ್: ಪ್ರಧಾನಮಂತ್ರಿ ನರೇಂದ್ರ ಮೋದಿಯವರು ನಮ್ಮನ್ನು ಜಾಗತಿಕವಾಗಿ ನಿಯಂತ್ರಿಸುತ್ತಿದ್ದು, ಅಂತರಾಷ್ಟ್ರೀಯ ಮಟ್ಟದಲ್ಲಿ ಪಾಕಿಸ್ತಾನಕ್ಕಿಂದು ಗೌರವವಿಲ್ಲದಂತಾಗಿದೆ ಎಂದು ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್ ಅವರು ಮಂಗಳವಾರ ಹೇಳಿದ್ದಾರೆ. 
ನಿನ್ನೆಯಷ್ಟೇ ಪಾಕಿಸ್ತಾನದ ವಿರುದ್ದ ತೀವ್ರವಾಗಿ ಕಿಡಿಕಾರಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು, ಉಗ್ರ ನಿಗ್ರಹಕ್ಕಾಗಿ ಪಾಕಿಸ್ತಾನಕ್ಕೆ ಅಮೆರಿಕ ನೀಡುತ್ತಿದ್ದ ಆರ್ಥಿಕ ನೆರವು ವ್ಯರ್ಥವಾಗಿದ್ದು, ಪಾಕಿಸ್ತಾನ ಯಾವುದೇ ಕ್ರಮ ಕೈಗೊಂಡಿಲ್ಲ. ಇನ್ನು ಮುಂದೆ ಇಂತಹ ಪ್ರಮಾದವಾಗಲು ನಾವು  ಬಿಡುವುದಿಲ್ಲ ಎಂದು ಹೇಳಿದ್ದರು.
ಈ ಹೇಳಿಕೆ ಕುರಿತಂತೆ ಪಾಕಿಸ್ತಾನದ ಸುದ್ದಿ ಮಾಧ್ಯಮವೊಂದರ ಸಂದರ್ಶನದಲ್ಲಿ ಮಾತನಾಡಿರುವ ಮುಷರಫ್ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಪಾಕಿಸ್ತಾನವನ್ನು ಜಾಗತಿಕವಾಗಿ ನಿಯಂತ್ರಿಸುತ್ತಿದ್ದು, ಇದರಿಂದ ಇಸ್ಲಾಮಾಬಾದ್ ವಿದೇಶಾಂಗ ನೀತಿ ಹಾಳಾಗುವಂತಾಗಿದೆ. ಅಂತರಾಷ್ಟ್ರೀಯ ಮಟ್ಟದಲ್ಲಿಂದು ಪಾಕಿಸ್ತಾನಕ್ಕೆ ಗೌರವ ಇದೆಯೇ ನೀವೇ ಹೇಳಿ ಎಂದು ಸುದ್ದಿ ಮಾಧ್ಯಮವನ್ನು ಪ್ರಶ್ನಿಸಿದ್ದಾರೆ. 
ಅಂತರಾಷ್ಟ್ರೀಯ ಮಟ್ಟದಲ್ಲಿ ನಮ್ಮ ರಾಜತಾಂತ್ರಿಕತೆ ನಾಶವಾಗಿದೆ. ಪ್ರಧಾನಿ ಮೋದಿ ಜಾಗತಿಕವಾಗಿ ನಮ್ಮನ್ನು ನಿಯಂತ್ರಿಸುತ್ತಿದ್ದಾರೆ. ಅಂತರಾಷ್ಟ್ರೀಯ ಮಟ್ಟದಲ್ಲಿ ನಾವು ಪ್ರತ್ಯೇಕಗೊಳ್ಳುತ್ತಿದ್ದೇವೆ. ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆಯೆಂದು ನಾವೇಕೆ ಒಪ್ಪಿಕೊಂಡೆವು. ಕಾಶ್ಮೀರದಲ್ಲಿ ಲಷ್ಕರ್-ಇ-ತೊಯ್ಬಾ ಸಂಘಟನೆ ಕಾರ್ಯನಿರ್ವಹಿಸುತ್ತಿದ್ದು, ಹಫೀಜ್ ಸಯೀದ್ ನಾನು ದೊಡ್ಡ ಬೆಂಬಲಿಗಲನಾಗಿದ್ದೇನವೆಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಉಪ ಚುನಾವಣೆ ಫಲಿತಾಂಶ| ಅಸ್ಸಾಂ, ಪ.ಬಂಗಾಳ, ತಮಿಳುನಾಡು, ಪುದುಚೇರಿಯ ಆರು ಕ್ಷೇತ್ರಗಳಲ್ಲಿ ಮತ ಎಣಿಕೆ ಪ್ರಗತಿಯಲ್ಲಿ

Sting operation ಮೂಲಕ ನಿಮ್ಮನ್ನು ಸಿಲುಕಿಸಲು ಯತ್ನಿಸಿರುವುದು ನಿಜವೇ ಆಗಿದ್ದರೆ ತನಿಖೆಗೆ ಆದೇಶಿಸಿ: ಸಿಎಂ ಡಿಕೆ.ಶಿವಕುಮಾರ್'ಗೆ HDK ಸವಾಲು

ಮತ ಕಳ್ಳತನದಿಂದಲೇ ಮೋದಿ ಪ್ರಧಾನಿಯಾಗಿದ್ದು, ಗೆಲ್ಲಲಾಗದ ರಾಜ್ಯಗಳಲ್ಲೂ BJP ಗೆಲುವು: ಅಭಿಜೀತ್ ದೀಪ್ಕೆ

ರಾಜ್ಯದ ಬಾಕಿ ಹಣದ ಬಗ್ಗೆ ನಿರ್ಮಲಾ ಸೀತಾರಾಮನ್ ಜೊತೆ ಚರ್ಚೆ: GST ಮಂಡಳಿ ಸಭೆ ಬಳಿಕ CM ಡಿಕೆ.ಶಿವಕುಮಾರ್ ಹರ್ಷ

ಉತ್ತರ ಭಾರತ ವ್ಯಕ್ತಿಯಿಂದ ಡಿಕೆಶಿ ಸಿಲುಕಿಸಲು ಯತ್ನ: ಸಚಿವ ಸತೀಶ್ ಜಾರಕಿಹೊಳಿ