ಕಾಬುಲ್ ನಲ್ಲಿ ಆತ್ಮಾಹುತಿ ದಾಳಿ 
ವಿದೇಶ

ಕಾಬುಲ್: ಆತ್ಮಾಹುತಿ ಬಾಂಬ್​​ ದಾಳಿಗೆ 20 ಬಲಿ, 25 ಮಂದಿಗೆ ಗಾಯ

ಆಫ್ಘಾನಿಸ್ತಾನ ರಾಜಧಾನಿ ಕಾಬುಲ್ ನಲ್ಲಿ ಮತ್ತೆ ಉಗ್ರರು ಅಟ್ಟಹಾಸ ಮೆರೆದಿದ್ದು, ಗುರುವಾರ ರಾತ್ರಿ ನಡೆದ ಆತ್ಮಾಹುತಿ ದಾಳಿಯಲ್ಲಿ ಕನಿಷ್ಟ 20 ಮಂದಿ ಸಾವಿಗೀಡಾಗಿ ಸುಮಾರು 25 ಮಂದಿ ಗಾಯಗೊಂಡಿದ್ದಾರೆ.

ಕಾಬುಲ್​: ಆಫ್ಘಾನಿಸ್ತಾನ ರಾಜಧಾನಿ ಕಾಬುಲ್ ನಲ್ಲಿ ಮತ್ತೆ ಉಗ್ರರು ಅಟ್ಟಹಾಸ ಮೆರೆದಿದ್ದು, ಗುರುವಾರ ರಾತ್ರಿ ನಡೆದ ಆತ್ಮಾಹುತಿ ದಾಳಿಯಲ್ಲಿ ಕನಿಷ್ಟ 20 ಮಂದಿ ಸಾವಿಗೀಡಾಗಿ ಸುಮಾರು 25 ಮಂದಿ ಗಾಯಗೊಂಡಿದ್ದಾರೆ.
ಮೂಲಗಳ ಪ್ರಕಾರ ಗುರುವಾರ ರಾತ್ರಿ ಸ್ಥಳೀಯ ಕಾಲಮಾನ 8.30ರ ಸಮಯದಲ್ಲಿ ಈ ದಾಳಿ ನಡೆದಿದ್ದು, ಕಾಬೂಲ್​​ ನಲ್ಲಿ ನಡೆಯುತ್ತಿದ್ದ ಪ್ರತಿಭಟನಾ ಮೆರವಣಿಗೆಯಲ್ಲಿ ಉಗ್ರರನೋರ್ವ ತನ್ನನ್ನು ತಾನು ಸ್ಫೋಟಿಸಿಕೊಂಡಿದ್ದಾನೆ.  ಈ ವೇಳೆ ಪ್ರತಿಭಟನಕಾರರಿಗೆ ರಕ್ಷಣೆ ನೀಡುತ್ತಿದ್ದ ಹಲವು ಪೊಲೀಸರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆಫ್ಘನ್ ಸರ್ಕಾರದ  ವಕ್ತಾರರಾದ ನಸ್ರತ್ ರಹಿಮಿ ಹೇಳಿದ್ದಾರೆ.
ಇನ್ನು ಈ ಆತ್ಮಹತ್ಯಾ ದಾಳಿಯ ಹೊಣೆಯನ್ನು ಕುಖ್ಯಾತ ಇಸ್ಲಾಮಿಕ್ ಸ್ಟೇಟ್ ಉಗ್ರ ಸಂಘಟನೆ ಹೊತ್ತಿದ್ದು, ವಿದೇಶಿ ಪಡೆಗಳ ವಿರುದ್ಧದ ಸೇಡು ಇದಾಗಿದೆ ಎಂದು ಹೇಳಿದೆ.
ಇನ್ನು ಈಗ್ಗೆ 2 ದಿನಗಳ ಹಿಂದಷೇ ಇದೇ ಕಾಬೂಲ್​​ನಲ್ಲಿ ನಡೆದ ಆತ್ಮಾಹುತಿ ದಾಳಿಯಲ್ಲಿ 41 ಮಂದಿ ಸಾವನ್ನಪ್ಪಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಸೌರಭ್ ಭಾರದ್ವಾಜ್ ಮನೆ ಮೇಲೆ ಇಡಿ ದಾಳಿ; ಮೋದಿ ನಕಲಿ ಪದವಿ ಕುರಿತ ಗಮನ ಬೇರೆಡೆ ಸೆಳೆಯಲು ಯತ್ನ ಎಂದ AAP

SCROLL FOR NEXT