ಟ್ರಂಪ್ ಟವರ್ 
ವಿದೇಶ

ನ್ಯೂಯಾರ್ಕ್‌: ಟ್ರಂಪ್ ಟವರ್ ನ ಕೊನೆ ಮಹಡಿಯಲ್ಲಿ ಅಗ್ನಿ ಅವಘಡ, ಇಬ್ಬರಿಗೆ ಗಾಯ

ನ್ಯೂಯಾರ್ಕ್ ನ ಮ್ಯಾನ್ ಹ್ಯಾಟನ್ ನಲ್ಲಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಐಶಾರಾಮಿ ಬಹುಮಹಡಿ ಕಟ್ಟಡ ಟ್ರಂಪ್....

ನ್ಯೂಯಾರ್ಕ್‌: ನ್ಯೂಯಾರ್ಕ್ ನ ಮ್ಯಾನ್ ಹ್ಯಾಟನ್ ನಲ್ಲಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಐಶಾರಾಮಿ ಬಹುಮಹಡಿ ಕಟ್ಟಡ ಟ್ರಂಪ್ ಟವರ್‌ನಲ್ಲಿ ಅಗ್ನಿ ಅವಘಢ ಸಂಭವಿಸಿದೆ ಎಂದು ಸೋಮವಾರ ನ್ಯೂಯಾರ್ಕ್ ಅಗ್ನಿ ಶಾಮಕ ಇಲಾಖೆ ತಿಳಿಸಿದೆ.
ಇಂದು ಬೆಳಗ್ಗೆ ಸುಮಾರು 7 ಗಂಟೆಯ ಸುಮಾರಿಗೆ ಟ್ರಂಪ್ ಟವರ್‌ನ ಕೊನೆ ಮಹಡಿಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಬೆಂಕಿ ಕಾಣಿಸಿಕೊಂಡಿದ್ದು, ಘಟನೆಯಲ್ಲಿ ಇಬ್ಬರಿಗೆ ಗಾಯಗಳಾಗಿವೆ. ಆದರೆ ಜೀವ ಹಾನಿ ಆಗಿಲ್ಲ. ಬೆಂಕಿ ಕಾಣಿಸಿಕೊಂಡ ತಕ್ಷಣ ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಲು ಯಶಸ್ವಿಯಾಗಿದ್ದಾರೆ ಎಂದು ಇಲಾಖೆ ಹೇಳಿದೆ.
58 ಅಂತಸ್ತುಗಳ ಈ ಐಶಾರಾಮಿ ಬಹುಮಹಡಿ ಕಟ್ಟಡದಲ್ಲಿ ಡೊನಾಲ್ಡ್ ಟ್ರಂಪ್ ಅವರ ನಿವಾಸ, ಅವರ ರಿಯಲ್ ಎಸ್ಟೇಟ್ ಉದ್ಯಮದ ಕೇಂದ್ರ ಕಚೇರಿ ಸೇರಿದಂತೆ ಹಲವು ಅಂತರರಾಷ್ಟ್ರೀಯ ಸೆಲೆಬ್ರಿಟಿಗಳ ನಿವಾಸ, ಜನಪ್ರಿಯ ಕಂಪೆನಿಗಳ ಕೇಂದ್ರ ಕಚೇರಿಗಳು, ಮಾಲ್‌ಗಳು, ಚಿತ್ರಮಂದಿರ ಎಲ್ಲವೂ ಇವೆ.
ಬೆಂಕಿ ಅವಘಡ ಸಂಭವಿಸಿದಾಗ ಡೊನಾಲ್ಡ್ ಟ್ರಂಪ್ ಅವರು ವಾಷಿಂಗ್ಟನ್‌ನ ಶ್ವೇತಭವನದಲ್ಲಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Super Emergency: ತಾರಕಕ್ಕೇರಿದ ದೆಹಲಿ ಪ್ರತಿಭಟನೆ, ಬರೊಬ್ಬರಿ 3 ಸಾವಿರ ಮಂದಿ ವಶಕ್ಕೆ, ವಿಪಕ್ಷಗಳ ಆಕ್ರೋಶ!

'vote chori' ಹೇಗಿರತ್ತೆ ನಮ್ಗೆ ಗೊತ್ತು, ಸಿನಿಮಾದಲ್ಲಿ ತೋರಿಸಿದ್ದ ರಿಗ್ಗಿಂಗ್ ವಾತಾವರಣ ನಿಜವಾಗಿಯೂ ನೋಡಿದ್ದೇವೆ: SIR ಗೆ 124 ಮಾಜಿ ಅಧಿಕಾರಿಗಳು, ರಾಜತಾಂತ್ರಿಕರಿಂದ ಬೆಂಬಲ

ಹೃದಯವಿದ್ರಾವಕ: 'ಚಿಕಿತ್ಸೆಗೆ ಹಣವಿಲ್ಲ'.. 6 ವರ್ಷದ ಮಗಳನ್ನೇ ಕೆರೆಗೆ ಎಸೆದ ತಾಯಿ; ಆಟೋ ಚಾಲಕನಿಂದ ರಕ್ಷಣೆ

'ನಿಮಗೆ ನಾಚಿಕೆಯಾಗಬೇಕು': CJP ನಾಯಕರ ವಿರುದ್ಧ ವಿಮಾನದಲ್ಲಿ ಪ್ರಯಾಣಿಕರ ಆಕ್ರೋಶ, Video!

ಅಭಿಜೀತ್ ದೀಪ್ಕೆ ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ; ಅಜ್ಜಿ ಸಾವಿನ ಸುದ್ದಿ ತಿಳಿಸುವುದು ಹೇಗೆ? ಪೊಲೀಸ್ ಕ್ರಮಕ್ಕೆ ಪೋಷಕರ ಆಕ್ರೋಶ