ಕಾಬೂಲ್ ಹೋಟೆಲ್ ದಾಳಿ: 4 ಉಗ್ರರನ್ನು ಹೊಡೆದುರುಳಿಸಿದ ಸೇನೆ 
ವಿದೇಶ

ಕಾಬೂಲ್ ಹೋಟೆಲ್ ದಾಳಿ: 4 ಉಗ್ರರನ್ನು ಹೊಡೆದುರುಳಿಸಿದ ಸೇನೆ

ಕಾಬೂಲ್'ನ ಪ್ರತಿಷ್ಠಿತ ಇಂಟರ್'ಕಾಂಟಿನೆಂಟಲ್ ಹೋಟೆಲ್ ಮೇಲೆ ದಾಳಿ ನಡೆಸಿದ್ದ ನಾಲ್ವರು ಉಗ್ರರನ್ನು ಭದ್ರತಾ ಪಡೆಗಳು ಹೊಡೆದುರುಳಿಸಿದೆ ಎಂದು ಭಾನುವಾರ ತಿಳಿದುಬಂದಿದೆ...

ಕಾಬೂಲ್: ಕಾಬೂಲ್'ನ ಪ್ರತಿಷ್ಠಿತ ಇಂಟರ್'ಕಾಂಟಿನೆಂಟಲ್ ಹೋಟೆಲ್ ಮೇಲೆ ದಾಳಿ ನಡೆಸಿದ್ದ ನಾಲ್ವರು ಉಗ್ರರನ್ನು ಭದ್ರತಾ ಪಡೆಗಳು ಹೊಡೆದುರುಳಿಸಿದೆ ಎಂದು ಭಾನುವಾರ ತಿಳಿದುಬಂದಿದೆ. 
ಕಳೆದ ರಾತ್ರಿ ಹೋಟೆಲ್'ಗೆ ನುಗ್ಗಿರುವ ನಾಲ್ವರು ಬಂದೂಕುಧಾರಿಗಳು, ಇದ್ದಕ್ಕಿದ್ದಂತೆಯೇ ಸ್ಥಳದಲ್ಲಿದ್ದ ಭದ್ರತಾ ಸಿಬ್ಬಂದಿಗಳು ಹಾಗೂ ಅತಿಥಿಗಳ ಮೇಲೆ ಗುಂಡಿನ ದಾಳಿ ನಡೆಸಿದ್ದರು. ಪರಿಣಾಮ ಐವರು ಮಂದಿ ಸಾವನ್ನಪ್ಪಿ, ಹಲವರು ಗಾಯಗೊಂಡಿದ್ದರು. ಇದಲ್ಲದೆ, ಹೋಟೆಲ್ ನಲ್ಲಿದ್ದ ಜನರನ್ನು ಉಗ್ರರು ಒತ್ತೆಯಾಳುಗಳಾಗಿ ಇರಿಸಿಕೊಂಡಿದ್ದರು. 
ಉಗ್ರರು ದಾಳಿ ನಡೆಸುತ್ತಿದ್ದಂತೆಯೇ ಭದ್ರತಾ ಪಡೆಗಳು ಕಾರ್ಯಾಚರಣೆಗಿಳಿದಿತ್ತು. ಇದರಂತೆ ಸುದೀರ್ಘ ಕಾರ್ಯಾಚರಣೆ ನಡೆಸಿ ದಾಳಿ ನಡೆಸಿದ್ದ ನಾಲ್ವರು ಉಗ್ರರನ್ನು ಹತ್ಯೆ ಮಾಡಿದೆ. ಹೋಟೆಲ್ 16 ವಿದೇಶಿಯರು ಸೇರಿ ಒತ್ತೆಯಾಳುಗಳಾಗಿದ್ದ 100ಕ್ಕೂ ಹೆಚ್ಚು ಮಂದಿಯನ್ನು ರಕ್ಷಣೆ ಮಾಡಿದೆ ಅಫ್ಘಾನಿಸ್ತಾನದ ಆಂತರಿಕ ಸಚಿವಾಲಯದ ವಕ್ತಾರ ನಜೀಬ್ ದಾನೀಶ್ ಅವರು ಹೇಳಿದ್ದಾರೆ. 
ಪ್ರಸ್ತುತ ಭದ್ರತಾ ಪಡೆಗಳು ಕಾರ್ಯಾಚರಣೆಯನ್ನು ಮುಂದುವರೆಸಿದ್ದು, ಹೋಟೆಲ್ ನ ಪ್ರತೀಯೊಂದು ಕೊಠಡಿಯಲ್ಲು ಪರಿಶೀಲನೆ ನಡೆಸುತ್ತಿದೆ ಎಂದು ತಿಳಿಸಿದ್ದಾರೆ. 
ದಾಳಿಯ ಹೊಣೆಯನ್ನು ಈ ವರೆಗೂ ಯಾವುದೇ ಉಗ್ರ ಸಂಘಟನೆಗಳು ಹೊತ್ತುಕೊಂಡಿಲ್ಲ. ನಾಲ್ವರು ಉಗ್ರರ ಮೃತದೇಹಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಬೆಂಗಳೂರು: ಮಾಜಿ ಪ್ರೇಯಸಿ ಕರೆದಳೆಂದು ಮನೆಗೆ ಹೋದ ಪ್ರಿಯಕರ ದುರಂತ ಸಾವು: ಅಷ್ಟಕ್ಕೂ ಆಗಿದ್ದೇನು?

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ: ಕಣ್ಣೀರಿಟ್ಟ CM ಕಚೇರಿ ಸಿಬ್ಬಂದಿ; ಬೆಂಬಲಿಗರಿಂದ ಪ್ರತಿಭಟನೆ

IPL 2026 Eliminator: SRH ವಿರುದ್ಧ ವೈಭವ್ ಸೂರ್ಯವಂಶಿ ಸಿಕ್ಸರ್ ಸುರಿಮಳೆ, 14 ವರ್ಷ ಹಳೆಯ Chris gayle ದಾಖಲೆ ಧೂಳಿಪಟ

ತಮಿಳುನಾಡು ಸಿಎಂ ವಿಜಯ್-ಪ್ರಧಾನಿ ಮೋದಿ ಭೇಟಿ: ಎರಡು ದೊಡ್ಡ ಬೇಡಿಕೆ; ಇಲ್ಲಿದೆ ವಿವರ..

SCROLL FOR NEXT