ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ವಿದೇಶ

ಕಾಬೂಲ್ ನಲ್ಲಿ ಆಂಬುಲೆನ್ಸ್ ಬಾಂಬ್ ಸ್ಫೋಟ: 63 ಸಾವು, 140 ಮಂದಿಗೆ ಗಾಯ

ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್ ನಲ್ಲಿ ಶನಿವಾರ ಉಗ್ರರು ಸ್ಫೋಟಕ ತುಂಬಿದ್ದ ಆಂಬುಲೆನ್ಸ್ ಅನ್ನು ಸ್ಫೋಟಿಸಿದ್ದು, ಘಟನೆಯಲ್ಲಿ ಕನಿಷ್ಠ 40 ಮಂದಿ....

ಸಾಂದರ್ಭಿಕ ಚಿತ್ರ
Lingaraj Badiger
Updated On : 27 Jan 2018, 6:54 am
ಕಾಬೂಲ್: ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್ ನಲ್ಲಿ ಶನಿವಾರ ಉಗ್ರರು ಸ್ಫೋಟಕ ತುಂಬಿದ್ದ ಆಂಬುಲೆನ್ಸ್ ಅನ್ನು ಸ್ಫೋಟಿಸಿದ್ದು, ಘಟನೆಯಲ್ಲಿ ಕನಿಷ್ಠ 63 ಮಂದಿ ಮೃತಪಟ್ಟಿದ್ದಾರೆ ಮತ್ತು 140ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ 63ಕ್ಕೆ ಏರಿಕೆಯಾಗಿದ್ದು, 140ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಅಫ್ಘಾನ್ ಆರೋಗ್ಯ ಸಚಿವಾಲಯದ ವಕ್ತಾರ ವಹೀದ್ ಮಜ್ರೊಹ್ ಅವರು ಹೇಳಿದ್ದಾರೆ.
ಆತ್ಮಾಹುತಿ ಬಾಂಬ್ ದಾಳಿಕೋರರು ಚೆಕ್ ಪೊಸ್ಟ್ ಗಳಿಂದ ತಪ್ಪಿಸಿಕೊಳ್ಳುವುದಕ್ಕಾಗಿ ಈ ಬಾರಿ ತಮ್ಮ ಕೃತ್ಯಕ್ಕೆ ಆಂಬುಲೆನ್ಸ್ ಬಳಸಿಕೊಂಡಿದ್ದಾರೆ. ಮೊದಲ ಚೆಕ್ ಪೊಸ್ಟ್ ರೋಗಿಯನ್ನು ಆಸ್ಪತ್ರೆಗೆ ಸಾಗಿಸುತ್ತಿರುವುದಾಗಿ ಹೇಳಿದ್ದಾರೆ. ಆದರೆ ಎರಡನೇ ಚೆಕ್ ಪೊಸ್ಟ್ ನಲ್ಲಿ ಸಿಕ್ಕಿ ಬಿದ್ದಿದ್ದು, ಅಲ್ಲಿಯೇ ಆದನ್ನು ಸ್ಫೋಟಿಸಿದ್ದಾರೆ ಎಂದು ಆಂತರಿಕ ಸಚಿವಾಲಯದ ಉಪ ವಕ್ತಾರ ನಸರತ್ ರಹಿಮ್ ಅವರು ಎಎಫ್ ಪಿಗೆ ತಿಳಿಸಿದ್ದಾರೆ.

Advertisement

Advertisement

ತಾಲಿಬಾನ್ ಉಗ್ರ ದಾಳಿಯ ಹೊಣೆ ಹೊತ್ತುಕೊಂಡಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement