ಸ್ಫೋಟದಲ್ಲಿ ಗಾಯಗೊಂಡಿರುವವರನ್ನು ಆಸ್ಪತ್ರೆಗೆ ಕದೆದೊಯ್ಯುತ್ತಿರುವುದು. 
ವಿದೇಶ

ಕಾಬೂಲ್ ನಲ್ಲಿ ಆಂಬುಲೆನ್ಸ್ ಬಾಂಬ್ ಸ್ಫೋಟ: 95 ಸಾವು, 158 ಮಂದಿಗೆ ಗಾಯ

ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್ ನಲ್ಲಿ ಶನಿವಾರ ಉಗ್ರರು ಸ್ಫೋಟಕ ತುಂಬಿದ್ದ ಆಂಬುಲೆನ್ಸ್ ಅನ್ನು ಸ್ಫೋಟಿಸಿದ್ದು, ಘಟನೆಯಲ್ಲಿ ಕನಿಷ್ಠ 95 ಮಂದಿ ಮೃತಪಟ್ಟಿದ್ದಾರೆ.

ಕಾಬೂಲ್: ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್ ನಲ್ಲಿ ಶನಿವಾರ ಉಗ್ರರು ಸ್ಫೋಟಕ ತುಂಬಿದ್ದ ಆಂಬುಲೆನ್ಸ್ ಅನ್ನು ಸ್ಫೋಟಿಸಿದ್ದು, ಘಟನೆಯಲ್ಲಿ ಕನಿಷ್ಠ 95 ಮಂದಿ ಮೃತಪಟ್ಟಿದ್ದಾರೆ ಮತ್ತು 158ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ 95ಕ್ಕೆ ಏರಿಕೆಯಾಗಿದ್ದು, 158ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಅಫ್ಘಾನ್ ಆರೋಗ್ಯ ಸಚಿವಾಲಯದ ವಕ್ತಾರ ವಹೀದ್ ಮಜ್ರೊಹ್ ಅವರು ಹೇಳಿದ್ದಾರೆ.
ಆತ್ಮಾಹುತಿ ಬಾಂಬ್ ದಾಳಿಕೋರರು ಚೆಕ್ ಪೊಸ್ಟ್ ಗಳಿಂದ ತಪ್ಪಿಸಿಕೊಳ್ಳುವುದಕ್ಕಾಗಿ ಈ ಬಾರಿ ತಮ್ಮ ಕೃತ್ಯಕ್ಕೆ ಆಂಬುಲೆನ್ಸ್ ಬಳಸಿಕೊಂಡಿದ್ದಾರೆ. ಮೊದಲ ಚೆಕ್ ಪೊಸ್ಟ್ ನಲ್ಲಿ ರೋಗಿಯನ್ನು ಆಸ್ಪತ್ರೆಗೆ ಸಾಗಿಸುತ್ತಿರುವುದಾಗಿ ಹೇಳಿದ್ದಾರೆ. ಆದರೆ ಹೈ ಪೀಸ್ ಕೌನ್ಸಿಲ್ ಕಚೇರಿ ಹಾಗೂ ಹಲವು ವಿದೇಶಿ ದೂತಾವಾಸಗಳ ಕಚೇರಿ ಬಳಿ ಇರುವ ಎರಡನೇ ಚೆಕ್ ಪೊಸ್ಟ್ ನಲ್ಲಿ ಸಿಕ್ಕಿ ಬಿದ್ದಿದ್ದು, ಅಲ್ಲಿಯೇ ಆದನ್ನು ಸ್ಫೋಟಿಸಿದ್ದಾರೆ ಎಂದು ಆಂತರಿಕ ಸಚಿವಾಲಯದ ಉಪ ವಕ್ತಾರ ನಸರತ್ ರಹಿಮ್ ಅವರು ಎಎಫ್ ಪಿಗೆ ತಿಳಿಸಿದ್ದಾರೆ.
ವಿದೇಶಿ ರಾಯಭಾರ ಕಚೇರಿ ಬಳಿ ನಡೆದ ಬಾಂಬ್‌ ಸ್ಪೋಟದ ಹೊಣೆಯನ್ನು ತಾಲಿಬಾನ್​ಉಗ್ರ ಸಂಘಟನೆ ಹೊತ್ತುಕೊಂಡಿದೆ.
ಕಳೆದ ವಾರ ಉಗ್ರರು ಕಾಬುಲ್​ನ ಇಂಟರ್​ ಕಾಂಟಿನೆಂಟಲ್​ ಹೋಟೆಲ್​ ಮೇಲೆ ದಾಳಿ ನಡೆಸಿದ್ದರು. ಈ ದಾಳಿಯಲ್ಲಿ 20 ಜನರು ಮೃತಪಟ್ಟಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಬ್ರೇಕ್ ಫಾಸ್ಟ್ ಮೀಟಿಂಗ್: ಮುಂದಿನ CM ಡಿಕೆ.ಶಿವಕುಮಾರ್; ಸಚಿವರಿಗೆ ಸಿದ್ದರಾಮಯ್ಯ ಮಾಹಿತಿ

ಮೋದಿಯವರ ಇತ್ತೀಚಿನ ಫಾರಿನ್ ಟ್ರಿಪ್ಪಿನಿಂದ ಭಾರತಕ್ಕೇನು ಲಾಭ? (ಹಣಕ್ಲಾಸು)

ಕಾಂಗ್ರೆಸ್‌ ಪವರ್ ಪಾಲಿಟಿಕ್ಸ್‌ಗೆ ಮತ್ತೊಂದು ಟ್ವಿಸ್ಟ್: ರಾಜ್ಯಪಾಲರ ಭೇಟಿಗೆ ಸಿದ್ದರಾಮಯ್ಯ ಸಮಯ ಕೇಳಿಲ್ಲ; ರಾಜೀನಾಮೆ ಊಹಾಪೋಹಕ್ಕೆ ಲೋಕಭವನ ಸ್ಪಷ್ಟನೆ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

SCROLL FOR NEXT