ಉಗ್ರರು ದಾಳಿ ನಡೆಸಿದ ಸ್ಥಳದಲ್ಲಿ ಭದ್ರತಾ ಪಡೆಗಳು (ಫೋಟೋ ಕೃಪೆ: ಎಪಿ) 
ವಿದೇಶ

ಕಾಬೂಲ್ ಸೇನಾ ಅಕಾಡೆಮಿ ಮೇಲೆ ದಾಳಿ: 3 ಉಗ್ರರ ಹತ್ಯೆ, 10 ಯೋಧರಿಗೆ ಗಾಯ

ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್'ನ ಸೇನಾ ಅಕಾಡೆಮಿ ಮೇಲೆ ಉಗ್ರರು ಆತ್ಮಾಹುತಿ ದಾಳಿ ನಡೆಸಿದ್ದು, ದಾಳಿಯಲ್ಲಿ ಓರ್ವ ಉಗ್ರರನ್ನು ಬಂಧನಕ್ಕೊಳಪಡಿಸಿ ಮೂವರು ಉಗ್ರರನ್ನು ಭದ್ರತಾ ಪಡೆಗಳು ಹತ್ಯೆ ಮಾಡಿದೆ ಎಂದು ಸೋಮವಾರ ತಿಳಿದುಬಂದಿದೆ...

ಕಾಬೂಲ್: ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್'ನ ಸೇನಾ ಅಕಾಡೆಮಿ ಮೇಲೆ ಉಗ್ರರು ಆತ್ಮಾಹುತಿ ದಾಳಿ ನಡೆಸಿದ್ದು, ದಾಳಿಯಲ್ಲಿ ಓರ್ವ ಉಗ್ರರನ್ನು ಬಂಧನಕ್ಕೊಳಪಡಿಸಿ ಮೂವರು ಉಗ್ರರನ್ನು ಭದ್ರತಾ ಪಡೆಗಳು ಹತ್ಯೆ ಮಾಡಿದೆ ಎಂದು ಸೋಮವಾರ ತಿಳಿದುಬಂದಿದೆ. 
ಅಫ್ಘಾನಿಸ್ತಾನದಲ್ಲಿ ಕಳೆದ 3 ದಿನಗಳಿಂದ ನಡೆದ ಎರಡನೇ ದಾಳಿ ಇದಾಗಿದ್ದು, 10 ಯೋಧರು ಗಾಯಗೊಂಡಿದ್ದಾರೆಂದು ವರದಿಗಳು ತಿಳಿಸಿವೆ. 
ಮಾರ್ಷಲ್ ಫಾಹಿಮ್ ರಾಷ್ಟ್ರೀಯ ರಕ್ಷಣಾ ವಿಶ್ವವಿದ್ಯಾಲಯದ ಮೇಲೆ ರಾಕೆಟ್ ಹಾಗೂ ಗ್ರೆನೇಡ್ ದಾಳಿಗಳನ್ನು ನಡೆಸಲಾಗಿದ್ದು, ಪ್ರಸ್ತುತ ಸ್ಥಳದಲ್ಲಿ ಇನ್ನೂ ನಾಲ್ವರು ಉಗ್ರರು ಇರುವ ಶಂಕೆಗಳು ವ್ಯಕ್ತವಾಗಿದೆ. 
ಉಗ್ರರು ದಾಳಿ ನಡೆಸುತ್ತಿದ್ದಂತೆಯೇ ಭದ್ರತಾ ಪಡೆಗಳು ಕಾರ್ಯಾಚರಣೆಗಿಳಿದಿದ್ದು, ಸ್ಥಳದಲ್ಲಿ ಭಾರೀ ಗುಂಡಿನ ಚಕಮಕಿಗಳು ನಡೆಯುತ್ತಿವೆ ಎಂದು ತಿಳಿದುಬಂದಿದೆ. ದಾಳಿಯ ಹೊಣೆಯನ್ನು ಈ ವರೆಗೂ ಯಾವುದೇ ಉಗ್ರ ಸಂಘಟನೆಗಳೂ ಹೊತ್ತೂಕೊಂಡಿಲ್ಲ. 
ಕಳೆದ ಶನಿವಾರ ನಡೆದ ಬಾಂಬ್ ದಾಳಿಯ ಹೊಣೆಯನ್ನು ತಾಲಿಬಾನ್ ಹೊತ್ತುಕೊಂಡಿತ್ತು. ದಾಳಿಯಲ್ಲಿ 103 ಮಂದಿ ಮೃತಪಟ್ಟು, 235 ಮಂದಿ ಗಾಯಗೊಂಡಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತೀಯ ನಾವಿಕರ ಸುರಕ್ಷತೆ ಮುಖ್ಯ; ನಾಗರಿಕ ಮೂಲಸೌಕರ್ಯಗಳ ಮೇಲಿನ ದಾಳಿ ಸ್ವೀಕಾರಾರ್ಹವಲ್ಲ: ಇರಾನ್‌ಗೆ ಅಜಿತ್ ದೋವಲ್

ಜರ್ಮನಿಯ ವಸತಿ ಕಟ್ಟಡದಲ್ಲಿ ಶಂಕಿತ ಬೆಂಕಿ ಅವಘಡ: 3 ಭಾರತೀಯರು ಸಾವು!

ಹನಿಟ್ರ್ಯಾಪ್ ಪಿತೂರಿ ಪ್ರಶ್ನಿಸಿದ್ದಕ್ಕೆ ಕಿರುಕುಳ; JDS ಕಾರ್ಯಕರ್ತ CCB ವಶಕ್ಕೆ: ಕುಮಾರಸ್ವಾಮಿ ಆಕ್ರೋಶ

ಕಾಂಗ್ರೆಸ್‌ನ ಆಂತರಿಕ ಕಲಹದಿಂದ 'ಮೂರನೇ ಮುಖ್ಯಮಂತ್ರಿ' ಬಂದರೂ ಅಚ್ಚರಿ ಇಲ್ಲ: ಬಿ.ವೈ ವಿಜಯೇಂದ್ರ; Video

ಯೂಟ್ಯೂಬರ್ ಧ್ರುವ್ ರಾಠಿಗೆ ಸಂಕಷ್ಟ: 8 ವರ್ಷಗಳ ಹಿಂದಿನ ಪ್ರಕರಣಕ್ಕೆ ಮರುಜೀವ; ದೆಹಲಿ ಕೋರ್ಟ್ ಸಮನ್ಸ್!