ಇಸ್ಲಾಮಾಬಾದ್: ಭಾರತ ಮತ್ತು ಪಾಕಿಸ್ತಾನ ನಡುವಣ ಸದ್ಯದ ಬಿಕ್ಕಟ್ಟಿಗೆ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರೇ ಕಾರಣ ಎಂದು ತೆಹ್ರೀಕ್ ಇ ಇನ್ಸಾಫ್ ಪಕ್ಷದ ಮುಖ್ಯಸ್ಥ ಇಮ್ರಾನ್ ಖಾನ್ ಹೇಳಿದ್ದಾರೆ.
ಗುರುವಾರ ಪಾಕಿಸ್ತಾನದ ಡಾನ್ ಪತ್ರಿಕೆಗೆ ನೀಡಿರುವ ಸಂದರ್ಶನದಲ್ಲಿ ಮಾತನಾಡಿರುವ ಇಮ್ರಾನ್ ಖಾನ್, ಪಾಕಿಸ್ತಾನ ಮತ್ತು ಭಾರತ ದೇಶಗಳ ನಡುವಿನ ಸಂಬಂಧ ಹಳಸಲು ಭಾರತದ ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಆಕ್ರಮಣಕಾರಿ ಮನೋಭಾವವೇ ಕಾರಣ. ಪಾಕಿಸ್ತಾನವನ್ನು ದೂರ ಇಡುವ ಉದ್ದೇಶದಿಂದಲೇ ನಿರ್ಣಯಗಳನ್ನು ಕೈಗೊಳ್ಳುತ್ತಿದ್ದಾರೆ ಎಂದು ಹೇಳಿದ್ದಾರೆ.
ಅಂತೆಯೇ ಪಾಕಿಸ್ತಾನದ ಪದಚ್ಯುತ ಪ್ರಧಾನಿ ನವಾಜ್ ಶರೀಫ್ ಭಾರತದೊಂದಿಗಿನ ಸಂಬಂಧ ಸುಧಾರಣೆಗೆ ಶಕ್ತಿಮೀರಿ ಪ್ರಯತ್ನಿಸಿದರು, ಆದರೆ ನರೇಂದ್ರ ಮೋದಿ ತಮ್ಮ ಪೂರ್ವಾಗ್ರಹ ಆಲೋಚನೆಗಳಿಂದ ಅವರ ಪ್ರಯತ್ನವನ್ನೆಲ್ಲಾ ವಿಫಲಗೊಳಿಸಿದರು ಎಂದು ಇಮ್ರಾನ್ ಖಾನ್ ಹೇಳಿದ್ದಾರೆ.
2015ರ ಡಿಸೆಂಬರ್‌ನಲ್ಲಿ ಅಂದಿನ ಪ್ರಧಾನಿ ನವಾಜ್ ಷರೀಫ್ ಅವರ ಜನ್ಮದಿನಕ್ಕೆ ಶುಭಕೋರುವ ನಿಟ್ಟಿನಲ್ಲಿ ಮೋದಿ ಪಾಕಿಸ್ತಾನಕ್ಕೆ ಭೇಟಿ ನೀಡಿದ್ದರು. ಆದರೆ ಇದರ ಬೆನ್ನಲ್ಲೇ ಪಾಕಿಸ್ತಾನ ಮೂಲದ ಉಗ್ರರು 2016ರ ಜನವರಿಯಲ್ಲಿ ಪಠಾಣ್‌ಕೋಟ್ ಮತ್ತು ಉರಿಯಲ್ಲಿ ದಾಳಿ ನಡೆಸಿ ಭಾರತೀಯ ಸೇನೆಯ ಹತ್ತಾರು ಸೈನಿಕರನ್ನು ಕೊಂದು ಹಾಕಿದ್ದರು. ಈ ಘಟನೆ ಬಳಿಕ ಭಾರತೀಯ ಸೇನೆ ಸರ್ಜಿಕಲ್ ದಾಳಿ ನಡೆಸಿ ಪಾಕ್ ಆಕ್ರಮಿತ ಕಾಶ್ಮೀರಕ್ಕೆ ನುಗ್ಗಿ ಸುಮಾರು 30ಕ್ಕೂ ಹೆಚ್ಚು ಉಗ್ರರನ್ನು ಸೆದೆ ಬಡಿದಿತ್ತು. ಈ ಘಟನೆಗಳ ಬಳಿಕ ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಬಂಧ ಹಳಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics