ಇಸ್ಲಾಮಾಬಾದ್: ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ 10 ವರ್ಷ ಜೈಲು ಶಿಕ್ಷೆಗೆ ಗುರಿಯಾಗಿರುವ ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್ ಷರೀಫ್ ಹಾಗೂ ಅವರ ಕುಟುಂಬ ಭ್ರಷ್ಟಾಚಾರ ನಿಗ್ರಹ ಕೋರ್ಟ್ ತೀರ್ಪು ಪ್ರಶ್ನಿಸಿ ಇಸ್ಲಾಮಾಬಾದ್ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲು ಸಿದ್ಧತೆ ನಡೆಸಿದ್ದಾರೆ.
ಷರೀಫ್ ಅವರ ಕುಟಂಬ ಭ್ರಷ್ಟಾಚಾರ ನಿಗ್ರಹ ಕೋರ್ಟ್ ತೀರ್ಪು ಪ್ರಶ್ನಿಸಿ ಜುಲೈ 9ರಂದು ಇಸ್ಲಾಮಾಬಾದ್ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲಿದೆ ಎಂದು ಜಿಯೋ ಟಿವಿ ವರದಿ ಮಾಡಿದೆ.
ನಿನ್ನೆ ಭ್ರಷ್ಟಾಚಾರ ನಿಗ್ರಹ ಕೋರ್ಟ್ ನವಾಜ್ ಷರೀಫ್ ಅವರಿಗೆ 10 ವರ್ಷ ಜೈಲು ಶಿಕ್ಷೆ ಹಾಗೂ 8 ಮಿಲಿಯನ್ ಪೌಂಡ್ ದಂಡ ವಿಧಿಸಿದೆ. ಅಲ್ಲದೆ ಅವರ ಪುತ್ರಿ ಮರ್ಯಮ್ ಅವರಿಗೆ 7 ವರ್ಷ ಮತ್ತು ಅವರ ಪತಿ ಮೊಹಮ್ಮದ್ ಸಫ್ದರ್ ಅವರಿಗೆ 1 ವರ್ಷ ಜೈಲು ಶಿಕ್ಷೆ ವಿಧಿಸಿತ್ತು.
ಷರೀಫ್ ಲಂಡನ್‌ನಲ್ಲಿ ಹೊಂದಿರುವ ಅವೆನ್ ಫೀಲ್ಡ್ ಹೌಸ್ ಮುಟ್ಟುಗೋಲು ಹಾಕಿಕೊಳ್ಳುವಂತೆಯೂ ಕೋರ್ಟ್ ಆದೇಶ ನೀಡಿದೆ.
ಲಂಡನ್ ನಲ್ಲಿ ನಾಲ್ಕು ಐಷಾರಾಮಿ ಫ್ಲಾಟ್ ಗಳನ್ನು ಹೊಂದಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಪ್ರಧಾನಿ ನವಾಜ್ ಷರೀಫ್ ಅವರಿಗೆ 10 ವರ್ಷ ಹಾಗೂ ಪುತ್ರಿಗೆ 7 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ.
ನವಾಜ್ ಷರೀಫ್ ಅವರು ಅಕ್ರಮ ಸಂಪಾದನೆ ಮತ್ತು ತೆರಿಗೆ ವಂಚನೆಯಿಂದ ಗಳಿಸಿದ ಕಪ್ಪು ಹಣವನ್ನು ಅಂತರಾಷ್ಟ್ರೀಯ ಬ್ಯಾಂಕ್ ಗಳಲ್ಲಿ ಹಾಗೂ ಲಂಡನ್ ಸೇರಿದಂತೆ ಹಲವು ದೇಶಗಳಲ್ಲಿ ಆದಾಯಕ್ಕೂ ಮೀರಿ ಆಸ್ತಿ ಹೊಂದಿರುವುದನ್ನು ಪನಾಮ ಪೇಪರ್ಸ್ ಲೀಕ್ ಮಾಡಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics