UN chief supports Zeid's call for human rights probe in Kashmir
ವಿಶ್ವಸಂಸ್ಥೆ: ಕಾಶ್ಮೀರದಲ್ಲಿ ಮಾನವ ಹಕ್ಕುಗಳ ಸ್ಥಿತಿಗಳ ಕುರಿತು ಅಂತಾರಾಷ್ಟ್ರೀಯ ಮಟ್ಟದ ತನಿಖೆ ನಡೆಸುವ ವಿಶ್ವಸಂಸ್ಥೆ ಮಾನವ ಹಕ್ಕುಗಳ ಹೈ ಕಮಿಷನರ್ ಝೀದ್ ರಾದ್ ಅಲ್ ಹುಸೇನ್ ಆಗ್ರಹಕ್ಕೆ ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿ ಬೆಂಬಲ ಸೂಚಿಸಿದ್ದಾರೆ.
ಈ ವಿಷಯದಲ್ಲಿ ತಮ್ಮ ನಡೆ ವಿಶ್ವಸಂಸ್ಥೆಯ ಧ್ವನಿಯನ್ನು ಪ್ರತಿನಿಧಿಸುತ್ತದೆ ಎಂದು ವಿಶ್ವಸಂಸ್ಥೆ ಕಾರ್ಯದರ್ಶಿ ಆಂಟೋನಿಯೊ ಗುಟರ್ರೆಸ್ ಹೇಳಿದ್ದಾರೆ. ಕಾಶ್ಮೀರದಲ್ಲಿ ಮಾನವ ಹಕ್ಕುಗಳ ಸ್ಥಿತಿಗಳ ಕುರಿತು ಅಂತಾರಾಷ್ಟ್ರೀಯ ಮಟ್ಟದ ತನಿಖೆ ನಡೆಸುವ ವಿಶ್ವಸಂಸ್ಥೆ ಮಾನವ ಹಕ್ಕುಗಳ ಹೈ ಕಮಿಷನರ್ ಝೀದ್ ರಾದ್ ಅಲ್ ಹುಸೇನ್ ಆಗ್ರಹಕ್ಕೆ ಪ್ರತಿಕ್ರಿಯೆ ಕೇಳಿದಾಗ ಉತ್ತರಿಸಿರುವ ವಿಶ್ವಸಂಸ್ಥೆ ವಿಶ್ವಸಂಸ್ಥೆ ಕಾರ್ಯದರ್ಶಿ ಆಂಟೋನಿಯೊ ಗುಟರ್ರೆಸ್, ಝೀದ್ ರಾದ್ ಅಲ್ ಹುಸೇನ್ ಆಗ್ರಹಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ.
ಆದರೆ ಭಾರತ ಝೀದ್ ರಾದ್ ಅಲ್ ಹುಸೇನ್ ಆಗ್ರಹಕ್ಕೆ ಕಾಶ್ಮೀರದಲ್ಲಿ ಮಾನವ ಹಕ್ಕುಗಳ ಸ್ಥಿತಿ ಕುರಿತ ತನಿಖೆಗೆ ವಿರೋಧ ವ್ಯಕ್ತಪಡಿಸುತ್ತಿದೆ.