ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ವಿದೇಶ

ಗರ್ಭಪಾತ ಮಾಡಿಸಿಕೊಂಡ ಅತ್ಯಾಚಾರ ಸಂತ್ರಸ್ತ ಬಾಲಕಿಗೆ 6 ತಿಂಗಳು ಜೈಲು ಶಿಕ್ಷೆ!

ತನ್ನ ಸಹೋದರನಿಂದಲೇ ಅತ್ಯಾಚಾರಕ್ಕೆ ಒಳಗಾಗಿ ತಾಯಿಯಾಗಿದ್ದ 15 ವರ್ಷದ ಬಾಲಕಿ ಗರ್ಭಪಾತ ಮಾಡಿಸಿಕೊಂಡಿದಕ್ಕೆ ...

ಸಾಂದರ್ಭಿಕ ಚಿತ್ರ
Lingaraj Badiger
Updated On : 21 Jul 2018, 6:59 am
ಜಕಾರ್ತ್: ತನ್ನ ಸಹೋದರನಿಂದಲೇ ಅತ್ಯಾಚಾರಕ್ಕೆ ಒಳಗಾಗಿ ತಾಯಿಯಾಗಿದ್ದ 15 ವರ್ಷದ ಬಾಲಕಿ ಗರ್ಭಪಾತ ಮಾಡಿಸಿಕೊಂಡಿದಕ್ಕೆ ಆಕೆಗೆ ಆರು ತಿಂಗಳ ಜೈಲು ಶಿಕ್ಷೆ ವಿಧಿಸಲಾಗಿದೆ ಎಂದು ಇಂಡೋನೇಷಿಯಾ ಅಧಿಕಾರಿಗಳು ತಿಳಿಸಿದ್ದಾರೆ.
ಬಾಲಕಿ ಹಾಗೂ ಅತ್ಯಾಚಾರ ಎಸಗಿದ ಆಕೆಯ 17 ವರ್ಷದ ಸಹೋದರ ಇಬ್ಬರನ್ನು ವಿಚಾರಣೆ ನಡೆಸಿದ ಬಳಿಕ ಮೂರಾ ಬುಲಿಯನ್ ಜಿಲ್ಲಾ ಕೋರ್ಟ್ ಇಬ್ಬರಿಗೂ ಜೈಲು ಶಿಕ್ಷೆ ವಿಧಿಸಿದೆ ಎಂದು ಕೋರ್ಟ್ ವಕ್ತಾರ ಲಿಸ್ಟಿಯೋ ಆರಿಫ್ ಬುಡಿಮನ್ ಅವರು ಹೇಳಿದ್ದಾರೆ.
ಗರ್ಭಪಾತ ಮಾಡಿಸಿಕೊಂಡ ಬಾಲಕಿಗೆ ಮಕ್ಕಳ ರಕ್ಷಣೆ ಕಾನೂನಡಿ ಆರು ತಿಂಗಳು ಜೈಲು ಶಿಕ್ಷೆ ಹಾಗೂ ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಸಹೋದರನಿಗೆ ಎರಡು ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ.

Advertisement

Advertisement

ಕಳೆದ ವರ್ಷ ಸೆಪ್ಟೆಂಬರ್ ನಲ್ಲಿ ಬಾಲಕಿ ಮೇಲೆ ಸಹೋದರ ಎಂಟು ಬಾರಿ ಅತ್ಯಾಚಾರ ಎಸಗಿದ್ದು, ಬಾಲಕಿ ಆರು ತಿಂಗಳ ತಾಯಿಯಾದ ಬಳಿಕ ಗರ್ಭಪಾತ ಮಾಡಿಸಿದ್ದಾಳೆ ಎಂದು ವಕ್ತಾರರು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments