ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ವಿದೇಶ

ಬ್ರಿಕ್ಸ್ ಶೃಂಗಸಭೆ: ಪ್ರಧಾನಿ ಮೋದಿ-ಕ್ಸಿ ಜಿನ್ ಪಿಂಗ್ ಭೇಟಿಗೆ ಕಾರ್ಯಕ್ರಮ ನಿಗದಿ

ದಕ್ಷಿಣ ಆಫ್ರಿಕಾದಲ್ಲಿ ನಡೆಯಲಿರುವ ಬ್ರಿಕ್ಸ್ ಶೃಂಗಸಭೆ ವೇಳೆ ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತು ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಅವರ ಭೇಟಿಗೆ ಕಾರ್ಯಕ್ರಮ ನಿಗದಿ ಪಡಿಸಲಾಗಿದೆ ಎಂದು ತಿಳಿದುಬಂದಿದೆ.

ಸಂಗ್ರಹ ಚಿತ್ರ
Srinivasa Murthy VN
Updated On : 21 Jul 2018, 2:32 am
ಬೀಜಿಂಗ್: ದಕ್ಷಿಣ ಆಫ್ರಿಕಾದಲ್ಲಿ ನಡೆಯಲಿರುವ ಬ್ರಿಕ್ಸ್ ಶೃಂಗಸಭೆ ವೇಳೆ ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತು ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಅವರ ಭೇಟಿಗೆ ಕಾರ್ಯಕ್ರಮ ನಿಗದಿ ಪಡಿಸಲಾಗಿದೆ ಎಂದು ತಿಳಿದುಬಂದಿದೆ.
ಪ್ರಧಾನಿ ನರೇಂದ್ರ ಮೋದಿ ಅವರ ಮುಂಬರುವ ವಿದೇಶ ಪ್ರವಾಸದ ಕಾರ್ಯಕ್ರಮಗಳ ಪಟ್ಟಿ ಸಿದ್ಧವಾಗಿದ್ದು. ಮುಂದಿನ ವಾರ ದಕ್ಷಿಣ ಆಫ್ರಿಕಾದ ಜೊಹಾನೆಸ್‌ ಬರ್ಗ್ ನಲ್ಲಿ ನಡೆಯಲಿರುವ ಬ್ರಿಕ್ಸ್ ಶೃಂಗದ ವೇಳೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಚೀನಾ ಅಧ್ಯಕ್ಷ ಕ್ಸೀ ಝಿನ್‌ಪಿಂಗ್‌ರನ್ನು ಭೇಟಿಯಾಗಲಿದ್ದಾರೆ. ಶೃಂಗಸಭೆಯಲ್ಲಿ ಬ್ರೆಜಿಲ್, ರಷ್ಯಾ, ಭಾರತ, ಚೀನಾ ಹಾಗೂ ದಕ್ಷಿಣ ಆಫ್ರಿಕಾಗಳು ಸದಸ್ಯರಾಗಿರುವ ಬ್ರಿಕ್ಸ್‌ ಒಕ್ಕೂಟದ 10ನೇ ಶೃಂಗಸಭೆಯು ಜುಲೈ25 ರಿಂದ 27ರವರೆಗೆ ನಡೆಯಲಿದೆ.
ಚೀನಾದ ವುಹಾನ್‌ನಲ್ಲಿ ಭೇಟಿಯಾದ ಮೂರು ತಿಂಗಳ ಬಳಿಕ ಇಬ್ಬರು ನಾಯಕರು ಮತ್ತೊಮ್ಮೆ ಭೇಟಿಯಾಗುತ್ತಿದ್ದಾರೆ. ವುಹಾನ್‌ ಭೇಟಿ ವೇಳೆ ರಾಯಭಾರ ಮಟ್ಟದ ಮಾತುಕತೆಗಳ ಮೂಲಕ ಉಭಯ ದೇಶಗಳ ನಡುವಿನ ದ್ವಿಪಕ್ಷೀಯ ಸಂಬಂಧ ವೃದ್ಧಿಗೆ ಇನ್ನಷ್ಟು ಕ್ರಮಗಳನ್ನು ತೆಗೆದುಕೊಳ್ಳಲಾಯಿತು.

Advertisement

Advertisement

ಬ್ರಿಕ್ಸ್ ಶೃಂಗಸಭೆಗೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ಜುಲೈ 23ರಂದು ರವಾಂಡಗೆ ಭೇಟಿ ನೀಡಲಿದ್ದು, ಅಲ್ಲಿ ದ್ವಿಪಕ್ಷೀಯ ಮಾತುಕತೆ  ನಡೆಸಲಿದ್ದಾರೆ. ಅಲ್ಲಿಂದ ನೇರವಾಗಿ ಉಗಾಂಡಾಗೆ ತೆರಳಲಿರುವ ಪ್ರಧಾನಿ ಮೋದಿ ಅಲ್ಲಿಯೇ ಎರಡು ತಂಗಲಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments