ಅಬ್ದುಲ್ ರಶೀದ್ ದೋಸ್ತಮ್ 
ವಿದೇಶ

ಅಫ್ಘಾನಿಸ್ತಾನ : ಕಾಬೂಲ್ ವಿಮಾನ ನಿಲ್ದಾಣದಲ್ಲಿ ಆತ್ಮಹತ್ಯಾ ದಾಳಿ : 14 ಸಾವು, 60 ಮಂದಿ ಗಾಯ

ಅಫ್ಘಾನಿಸ್ತಾನ ರಾಜಧಾನಿ ಕಾಬೂಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಉಪಾಧ್ಯಕ್ಷ ಅಬ್ದುಲ್ ರಶೀದ್ ದೋಸ್ತಮ್ ಆಗಮನದ ನಂತರ ಆತ್ಮಹತ್ಯಾ ಬಾಂಬರ್ ದಾಳಿ ನಡೆದಿದ್ದು, ಘಟನೆಯಲ್ಲಿ 14 ಮಂದಿ ಮೃತಪಟ್ಟಿದ್ದು, 60 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಕಾಬೂಲ್ : ಐಸಿಸ್ ಉಗ್ರರು  ಅಫ್ಘಾನಿಸ್ತಾನದಲ್ಲಿ ಅಟ್ಟಹಾಸ ಮೆರೆದಿದ್ದಾರೆ.  ರಾಜಧಾನಿ ಕಾಬೂಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ  ಉಪಾಧ್ಯಕ್ಷ  ಅಬ್ದುಲ್ ರಶೀದ್ ದೋಸ್ತಮ್ ಆಗಮನದ ನಂತರ ಆತ್ಮಹತ್ಯಾ ಬಾಂಬರ್ ದಾಳಿ ನಡೆದಿದ್ದು,  ಘಟನೆಯಲ್ಲಿ  14 ಮಂದಿ ಮೃತಪಟ್ಟಿದ್ದು,  60 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಅಬ್ದುಲ್ ರಶೀದ್ ದೋಸ್ತಮ್  ಸ್ವಾಗತಿಸಲು  ಸರ್ಕಾರದ ಹಿರಿಯ ಅಧಿಕಾರಿಗಳು, ರಾಜಕೀಯ ನಾಯಕರು ಮತ್ತು ಅವರ ಬೆಂಬಲಿಗರು ಆಗಮಿಸಿದ್ದರು.  ಈ ಸಂದರ್ಭದಲ್ಲಿ ದಾಳಿ ನಡೆದಿದೆ. ಮೊದಲ ಬಾರಿಗೆ ಇಂತಹ ದಾಳಿ ನೋಡುತ್ತಿರುವುದಾಗಿ ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಚೆಲ್ಲಾಪಿಲ್ಲಿಯಾಗಿ ಬಿದಿದ್ದ ಮನುಷ್ಯರ ಮಾಂಸಗಳನ್ನು ಕೆಲವರು ಸಂಗ್ರಹಿಸುತ್ತಿದ್ದರು. ಅಫ್ಘಾನಿಸ್ತಾನದಲ್ಲಿ  ಏನು ನಡೆಯುತ್ತಿದೆ ಎಂದು ಅವರು ಪ್ರಶ್ನಿಸಿದ್ದಾರೆ.

ಪಾಶ್ಚಾತ್ಯ ಸೂಟ್ ಮತ್ತು  ಶಸ್ತ್ರಸಜ್ಜಿತ ವಾಹನದಲ್ಲಿ ಪ್ರಯಾಣಿಸುತ್ತಿದ್ದ ದೋಸ್ತಮ್   ಅವರಿಗೆ  ಯಾವುದೇ ರೀತಿಯ ಗಾಯವಾಗಿಲ್ಲ ಎಂದು ವಕ್ತಾರ ಬಾಷಿರ್ ಅಹ್ಮದ್ ತಯಾಂಜ್ ತಿಳಿಸಿದ್ದಾರೆ.

 ಘಟನೆಯಲ್ಲಿ 14 ಮಂದಿ ಜನರು ಸಾವನ್ನಪ್ಪಿದ್ದು, 60ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. 9 ಭದ್ರತಾ ಪಡೆ  ಹಾಗೂ ಸಂಚಾರ ಪೊಲೀಸರು ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ವಕ್ತಾರ ಹಸ್ಮತ್ ಸ್ಟಾನಿಕ್ ಜಾಯ್ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

Delhi CJP Protest: ಅಭಿಜೀತ್ ದೀಪ್ಕೆ, ಸೌರವ್ ದಾಸ್, ಆಶುತೋಷ್ ರಂಕಾ,ಯೂಟ್ಯೂಬರ್ ಧ್ರುವ್ ರಾಠಿ ಸೇರಿ 200ಕ್ಕೂ ಹೆಚ್ಚು ಮಂದಿ ಪೊಲೀಸ್ ವಶಕ್ಕೆ; Video

CJP ಪ್ರತಿಭಟನೆ: ದೆಹಲಿ ಪೊಲೀಸರ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆ!

ಸ್ಟಾರ್‌ಲಿಂಕ್ ವಿವಾದ: ಭಾರತ ವಸಾಹತಲ್ಲ- Elon Musk ಗೆ ಕಮಲ್ ಹಾಸನ್ ತಿರುಗೇಟು

'ರಾಹುಲ್ ಗಾಂಧಿ ಅವರೇ, ನಿಮ್ಮ ಉದ್ದೇಶಗಳು ಎಂದಿಗೂ ಈಡೇರಲ್ಲ': ವಿಪಕ್ಷದವರದ್ದು 'ನಗರ ನಕ್ಸಲ್' ಮನಸ್ಥಿತಿ; ನಿತಿನ್ ನಬಿನ್