ಪಾಕ್ ಮತದಾರರ ಓಲೈಕೆಗೆ ಎಂದಿನಂತೆ ಕಾಶ್ಮೀರದ ಕಾರ್ಡ್ ಬಳಕೆ: ಗೆದ್ರೆ ಕಾಶ್ಮೀರ ಕೊಡ್ತಾರಂತೆ ಶೆಹಬಾಜ್ ಶರೀಫ್! 
ವಿದೇಶ

ಪಾಕ್ ಮತದಾರರ ಓಲೈಕೆ: ಚುನಾವಣೆಯಲ್ಲಿ ಗೆದ್ರೆ ಪಾಕ್ ಗೆ ಕಾಶ್ಮೀರ ಕೊಡ್ತಾರಂತೆ ಶೆಹಬಾಜ್ ಶರೀಫ್!

ನವಾಜ್ ಷರೀಫ್ ನೇತೃತ್ವದ ಪಿಎಂಎಲ್-ಎನ್ ಪಕ್ಷ ಚುನಾವಣೆಯಲ್ಲಿ ಗೆದ್ದರೆ ಕಾಶ್ಮೀರವನ್ನು ಪಾಕಿಸ್ತಾನಕ್ಕೆ ಸೇರಿಸುವುದಾಗಿ ಭರವಸೆ ನೀಡಿದೆ.

ಇಸ್ಲಾಮಾಬಾದ್: ಪಾಕಿಸ್ತಾನ ಚುನಾವಣೆಯಲ್ಲಿ ಮತದಾರರನ್ನು ಓಲೈಕೆ ಮಾಡಲು ಎಂದಿನಂತೆ ಪ್ರಯೋಗವಾಗುವ ಕಾಶ್ಮೀರದ ಕಾರ್ಡ್ ಈ ಬಾರಿಯೂ ಪ್ರಯೋಗವಾಗಿದ್ದು, ನವಾಜ್ ಷರೀಫ್ ನೇತೃತ್ವದ ಪಿಎಂಎಲ್-ಎನ್ ಪಕ್ಷ ಚುನಾವಣೆಯಲ್ಲಿ ಗೆದ್ದರೆ ಕಾಶ್ಮೀರವನ್ನು ಪಾಕಿಸ್ತಾನಕ್ಕೆ ಸೇರಿಸುವುದಾಗಿ ಭರವಸೆ ನೀಡಿದೆ. 
ಸಂದರ್ಶನದಲ್ಲಿ ಮಾತನಾಡಿರುವ ನವಾಜ್ ಷರೀಫ್ ಕಾಶ್ಮೀರಕ್ಕೆ ಸಂಬಂಧಿಸಿದಂತೆ ಮಾತನಾಡಿದ್ದು, ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಕಾಶ್ಮೀರವನ್ನು ಪಾಕಿಸ್ತಾನದ ಭಾಗವನ್ನಾಗಿಸುವುದಕ್ಕೆ ಪೂರಕವಾದ ವಾತಾವರಣ ನಿರ್ಮಾಣ ಮಾಡಲಾಗುವುದು ಎಂದು ಭರವಸೆ ನೀಡಿದ್ದಾರೆ. ಇದೇ ವೇಳೆ ಭಾರತದ ವಿರುದ್ಧವೂ ವಾಗ್ದಾಳಿ ನಡೆಸಿರುವ ಶೆಹಬಾಜ್ ಶರೀಫ್, ಕಾಶ್ಮೀರಿಗಳನ್ನು ಅಮಾನುಷವಾಗಿ ನಡೆಸಿಕೊಳ್ಳಲಾಗುತ್ತಿದೆ. ಶಾಂತಿ ಮತ್ತು ಅಭಿವೃದ್ಧಿ ಮೂಲಕ ಕಾಶ್ಮೀರ ಪಾಕಿಸ್ತಾನದ ಭಾಗವಾಗಲಿದೆ ಎಂದು ಶೆಹಬಾಜ್ ಶರೀಫ್ ಹೇಳಿದ್ದಾರೆ. 
ಪಾಕಿಸ್ತಾನವನ್ನು ಅಭಿವೃದ್ಧಿ ವಿಷಯದಲ್ಲಿ ಭಾರತಕ್ಕಿಂತಲೂ ಮುಂಚೂಣಿಯಲ್ಲಿ ತೆಗೆದುಕೊಂಡು ಹೋಗುವಂತಹ ಆಡಳಿತ ನೀಡದೇ ಇದ್ದರೆ ನನ್ನ ಹೆಸರನ್ನು ಜನರು ಬದಲಾವಣೆ ಮಾಡಲಿ ಎಂದು  ಶೆಹಬಾಜ್ ಶರೀಫ್ ಸವಾಲು ಹಾಕಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

ಹೆಲಿಪ್ಯಾಡ್, ಸ್ವಿಮ್ಮಿಂಗ್ ಪೂಲ್, ಜಿಮ್: ಅನಿಲ್ ಅಂಬಾನಿಯ 3,716 ಕೋಟಿ ರೂ. ಬೆಲೆಬಾಳುವ 17 ಅಂತಸ್ತಿನ ಕಟ್ಟಡ 'Abode ಇಡಿ ವಶಕ್ಕೆ!

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

SCROLL FOR NEXT