ಬೀಜಿಂಗ್; ಅಮೆರಿಕಾ ರಾಯಭಾರಿ ಕಚೇರಿ ಬಳಿ ಬಾಂಬ್ ಸ್ಫೋಟ 
ವಿದೇಶ

ಬೀಜಿಂಗ್: ಅಮೆರಿಕಾ ರಾಯಭಾರಿ ಕಚೇರಿ ಬಳಿ ಬಾಂಬ್ ಸ್ಫೋಟ

ಚೀನಾ ರಾಷ್ಟ್ರದ ರಾಜಧಾನಿ ಬೀಜಿಂಗ್ ನಲ್ಲಿರುವ ಅಮೆರಿಕಾ ರಾಯಭಾರಿ ಕಚೇರಿ ಸಮೀಪ ಪ್ರಬಲ ಬಾಂಬ್ ಸ್ಫೋಟ ಸಂಭವಿಸಿರುವುದಾಗಿ ವರದಿಗಳು ತಿಳಿಸಿವೆ...

ಬೀಜಿಂಗ್: ಚೀನಾ ರಾಷ್ಟ್ರದ ರಾಜಧಾನಿ ಬೀಜಿಂಗ್ ನಲ್ಲಿರುವ ಅಮೆರಿಕಾ ರಾಯಭಾರಿ ಕಚೇರಿ ಸಮೀಪ ಪ್ರಬಲ ಬಾಂಬ್ ಸ್ಫೋಟ ಸಂಭವಿಸಿರುವುದಾಗಿ ವರದಿಗಳು ತಿಳಿಸಿವೆ.
ಇಂದು ಬೆಳಿಗ್ಗೆ 11 ಗಂಟೆ ಸುಮಾರಿಗೆ ರಾಯಭಾರಿ ಕಚೇರಿ ಬಳಿ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಯಾವುದೇ ಸಾವು-ನೋವುಗಳು ಸಂಭವಿಸಿಲ್ಲ ಎಂದು ಹೇಳಲಾಗುತ್ತಿದೆ. 
ಅಮೆರಿಕಾ ರಾಯಭಾರಿ ಕಚೇರಿ ಸಮೀಪವೇ ಭಾರತೀಯ ರಾಯಭಾರಿ ಕಚೇರಿ ಕೂಡ ಇದ್ದು, ಭಾರತೀಯ ರಾಯಭಾರಿ ಕಚೇರಿಯಲ್ಲಿದ್ದವರೆಲ್ಲರೂ ಕ್ಷೇಮವಾಗಿದ್ದಾರೆಂದು ಅಧಿಕಾರಿಗಳು ತಿಳಿಸಿದ್ದಾರೆ. 
ಬಾಂಬ್ ಸ್ಫೋಟ ಸಂಭವಿಸಿದ ಸ್ಥಳದ ವಿಡಿಯೋಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ವಿಡಿಯೋದಲ್ಲಿರುವ ಪ್ರಕಾರ, ಸ್ಥಳದ ಸುತ್ತಲೂ ದಟ್ಟ ಕಪ್ಪು ಹೊಗೆ ಆವರಿಸಿರುವುದು ಕಂಡು ಬಂದಿದೆ. ಸ್ಥಳದಲ್ಲಿ ಭದ್ರತಾ ಪಡೆಗಳು ಹಾಗೂ ಪೊಲೀಸರು ದೌಡಾಯಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. 

ಸ್ಥಳದಲ್ಲಿದ್ದ ಪ್ರತ್ಯದರ್ಶಿಗಳು ಮಾಹಿತಿ ನೀಡಿದ್ದು, ಸ್ಫೋಟ ಸಂಭವಿಸಿರುವುದಾಗಿ ದೃಢಪಡಿಸಿದ್ದಾರೆ. 

ವೀಸಾ ಸಂದರ್ಶನಕ್ಕಾಗಿ ಅಮೆರಿಕಾ ರಾಯಭಾರಿ ಕಚೇರಿಯ ಹೊರಗೆ ಹಲವಾರು ಚೀನಾ ರಾಷ್ಟ್ರದ ಪ್ರಜೆಗಳು ಸಾಲಿನಲ್ಲಿ ನಿಂತಿದ್ದರು. ಈ ವೇಳೆ ಸ್ಫೋಟ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಘಟನೆ ಕುರಿತಂತೆ ಪ್ರತಿಕ್ರಿಯೆ ನೀಡಲು ಅಮೆರಿಕಾ ರಾಯಭಾರಿ ಕಚೇರಿ ನಿರಾಕರಿಸಿದೆ. 

ಸ್ಫೋಟ ಸಂಭವಿಸಿದ ಸ್ಥಳವು ಬೀಜಿಂಗ್ ಹೊರವಲಯದಲ್ಲಿದ್ದು, ಇಲ್ಲಿ ಭಾರತ ಸೇರಿ ಅನೇಕ ರಾಷ್ಟ್ರಗಳ ರಾಯಭಾರಿ ಕಚೇರಿಗಳೂ ಕೂಡ ಇವೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

‘ನಮ್ಮ ಪೋಸ್ಟ್‌ಗಳನ್ನು ಅಳಿಸಬಹುದು, ನಮ್ಮನ್ನು ಅಳಿಸಲು ಸಾಧ್ಯವಿಲ್ಲ’: 'Cockroach Janta Party' ಸಂಸ್ಥಾಪಕ ಅಭಿಜೀತ್ ದೀಪ್ಕೆ

ಸಿಎಂ ಹಾಗೂ ಕಾಂಗ್ರೆಸ್ ಹೈಕಮಾಂಡ್ ನಿರ್ಧಾರಕ್ಕೆ ಕಾಯುತ್ತೇನೆ: Ramalinga Reddy

Cricket: ಸೂರ್ಯಗೆ ಗೇಟ್ ಪಾಸ್, Shreyas Iyer ನೂತನ ನಾಯಕ, ಕೊನೆಗೂ Vaibhav Sooryavanshi ಪದಾರ್ಪಣೆ, ಕೊಹ್ಲಿ ಬದಲಿಗೆ ಯಾರು?

NEET ವಿವಾದ: ‘Cockroach Janta Party’ ಪ್ರತಿಭಟನೆಗೆ ಭಾರೀ ಬೆಂಬಲ; ಜಂತರ್ ಮಂತರ್‌ನಲ್ಲಿ ನೂರಾರು ವಿದ್ಯಾರ್ಥಿಗಳ ಧರಣಿ, ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹ

‘ಕಾಶ್ಮೀರ ಭಾರತದ ಅವಿಭಾಜ್ಯ ಅಂಗ’, ಸುಳ್ಳು ಪ್ರಚಾರದಿಂದ ಸತ್ಯ ಬದಲಾಗದು: ವಿಶ್ವಸಂಸ್ಥೆಯಲ್ಲಿ Pak ವಿರುದ್ಧ ಗುಡುಗಿದ ಭಾರತ

SCROLL FOR NEXT