ಹಫೀಜ್ ಸೈಯದ್ 
ವಿದೇಶ

ಉಗ್ರಗಾಮಿಗಳು, ನಿಷೇಧಿತ ಸಂಘಟನೆಗಳನ್ನು ತಿರಸ್ಕರಿಸಿದ ಪಾಕ್ ಮತದಾರರು!

ಪಾಕಿಸ್ತಾನ ಸಾರ್ವತ್ರಿಕ ಚುನಾವಣೆಯಲ್ಲಿ ನಿಷೇಧಿತ ಉಗ್ರ ಸಂಘಟನೆ ಜಮಾತ್ ಉದ್ ದವಾ(ಜೆಯುಡಿ) ಮುಖ್ಯಸ್ಥ ಹಫೀಜ್ ಸೈಯದ್ ಸಹ ಸ್ಪರ್ಧಿಸಿದ್ದು ತೀವ್ರ ಚರ್ಚೆಗೆ ಗ್ರಾಸವಾಗಿತ್ತು...

ಇಸ್ಲಾಮಾಬಾದ್: ಪಾಕಿಸ್ತಾನ ಸಾರ್ವತ್ರಿಕ ಚುನಾವಣೆಯಲ್ಲಿ ನಿಷೇಧಿತ ಉಗ್ರ ಸಂಘಟನೆ ಜಮಾತ್ ಉದ್ ದವಾ(ಜೆಯುಡಿ) ಮುಖ್ಯಸ್ಥ ಹಫೀಜ್ ಸೈಯದ್ ಸಹ ಸ್ಪರ್ಧಿಸಿದ್ದು ತೀವ್ರ ಚರ್ಚೆಗೆ ಗ್ರಾಸವಾಗಿತ್ತು. 
ಇನ್ನು ಲಾಹೋರ್, ಇಸ್ಲಾಮಾಬಾದ್, ಸಹಿವಾಲ್, ಫೈಸಲಾಬಾದ್ ಸೇರಿದಂತೆ ಪಾಕಿಸ್ತಾನದಾದ್ಯಂತ ಹಫೀಜ್ ಸೈಯದ್ ಭರ್ಜರಿ ಪ್ರಚಾರ ನಡೆಸಿದ್ದರು. ಆದರೆ ಇದೀಗ ಚುನಾವಣಾ ಫಲಿತಾಂಶ ಹೊರಬೀಳುತ್ತಿದ್ದು ಹಫೀಜ್ ನೇತೃತ್ವದ ಅಲ್ಲಾ ಒ ಅಕ್ಬರ್ ತೆಹ್ರಿಕ್ ಪಕ್ಷ ಮಕಾಡೆ ಮಲಗಿದೆ
ಉಗ್ರ ಸಂಘಟನೆಗಳಿಗೆ ಸೇರಿದ ನೂರಾರು ಅಭ್ಯರ್ಥಿಗಳು ಚುನಾವಣೆಯಲ್ಲಿ ಸ್ಪರ್ಧಿಸಿದ್ದು ಅವರೆಲ್ಲಾ ಸೋತು ಸುಣ್ಣವಾಗಿದ್ದಾರೆ. ಅಂದರೆ ಉಗ್ರಗಾಮಿಗಳು, ನಿಷೇಧಿತ ಉಗ್ರ ಸಂಘಟನೆಯ ಸ್ಪರ್ಧಿಗಳನ್ನು ಪಾಕ್ ಮತದಾರರು ಅಕ್ಷರಶಃ ತಿರಸ್ಕರಿಸಿದ್ದಾರೆ. 
ಇನ್ನು ಅಂತಾರಾಷ್ಟ್ರೀಯ ಕಪ್ಪುಪಟ್ಟಿಯಿಂದ ಹೆಸರನ್ನು ತೆಗೆದುಹಾಕಿದ ನಂತರ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಮೌಲಾನಾ ಮುಹಮ್ಮದ್ ಅಹ್ಮದ್ ಲುದೀಯಾನ್ವಿ ಮಾತ್ರ ಹೇಳಿಕೊಳ್ಳುವಂತಾ ಮತಗಳನ್ನು ಪಡೆದಿದ್ದಾರೆ. ಮಾಧ್ಯಮಗಳ ವರದಿ ಪ್ರಕಾರ ಬರೋಬ್ಬರಿ 45 ಸಾವಿರ ಮತಗಳನ್ನು ಪಡೆದಿದ್ದಾರೆ. ಆದರೆ ಇದು ಗೆಲುವಿನ ನಗೆ ಬೀರಲು ಸಾಧ್ಯವಾಗಿಲ್ಲ ಎಂಬುದು ಇಲ್ಲಿ ಮುಖ್ಯ ವಿಷಯ.
ಚುನಾವಣೆಗೂ ಮುನ್ನ ಇಸ್ಲಾಮಿಕ್ ಸಂಘಟನೆಗಳಿಗೆ ಸೇರಿದ ಸಾಕಷ್ಟು ಅಭ್ಯರ್ಥಿಗಳು ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ವಿಷಯ ಪಾಕಿಸ್ತಾನದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!